ಬಿಗ್ ನ್ಯೂಸ್
ತೆಂಕು-ಬಡಗು ಎರಡೂ ತಿಟ್ಟಿನ ಪ್ರಸಿದ್ದ ಯಕ್ಷಗಾನ ಮೇಳಗಳ ಪ್ರಧಾನ ಕಲಾವಿದ ಕಿನ್ನಿಗೋಳಿ ಮುಖ್ಯಪ್ರಾಣ ಶೆಟ್ಟಿಗಾರ್ ವಿಧಿವಶ
ಮಂಗಳೂರು: ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ ಐವತ್ತೈದು ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಕಿನ್ನಿಗೋಳಿ ಮುಖ್ಯಪ್ರಾಣ ಶೆಟ್ಟಿಗಾರ್ ಅವರು ಶನಿವಾರ(ಜೂ21 )ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅಲ್ಪ ಕಾಲದಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ರವಿವಾರ ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ನಿವಾಸದಲ್ಲಿ ಅಂತಿಮದರ್ಶನ ನಡೆದ ಬಳಿಕ ಅಂತಿಮ ವಿಧಿಗಳನ್ನು ನಡೆಸಲಾಗುತ್ತದೆ. ಓರ್ವ ಪುತ್ರ ಮತ್ತು ಅಪಾರ ಕಲಾ ಬಂಧುಗಳನ್ನು ಅಗಲಿದ್ದಾರೆ.
ಮುಖ್ಯಪ್ರಾಣ ಅವರು ಐದನೆಯ ತರಗತಿ ವರೆಗೆ ಕಲಿತು ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪನವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡಿದ್ದರು. ಮೊದಲು ಕಲಾವಿದರಾಗಿ ಕಟೀಲು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಸೇವೆ ಆರಂಭಿಸಿದರು. ನಂತರ ಇರಾ ಸೋಮನಾಥೇಶ್ವರ, ಸಾಲಿಗ್ರಾಮ, ಕದ್ರಿ ಮೇಳಗಳಲ್ಲಿ ಪಾತ್ರ ನಿರ್ವಹಣೆ ಮಾಡಿ ಅನೇಕ ಪ್ರಶಸ್ತಿ ಸಮ್ಮಾನಗಳನ್ನು ತಮ್ಮದಾಗಿಸಿಕೊಂಡಿದ್ದರು.
ಕಿನ್ನಿಗೋಳಿಯ ಗೋಳಿಜೋರದ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಸಂಘದಲ್ಲಿ ಹವ್ಯಾಸಿ ವೇಷಧಾರಿಯಾಗಿ ತೊಡಗಿಕೊಂಡರು. ಯಕ್ಷಗಾನ ಕಲಾಧ್ಯಯನವನ್ನು ಗುರು ಮುಖೇನ ಕಲಿತ ಇವರಿಗೆ ಕವಿ ವಿದ್ವಾಂಸ, ಶಿಮಂತೂರು ನಾರಾಯಣ ಶೆಟ್ಟಿ ಗುರುಗಳು.
ಸೀತಾರಾಮ ಶೆಟ್ಟಿಗಾರ್, ಸೂರಪ್ಪ ಶೆಟ್ಟಿಗಾರ್ ಅವರುಗಳಿಂದ ಅರ್ಥಗಾರಿಕೆ ಹಾಗೂ ನಾಟ್ಯಾಭ್ಯಾಸ ಮಾಡಿದ ಇವರು ಬ್ರಹ್ಮಾವರ ರಾಮನಾಯಿರಿ ಅವರಿಂದ ಬಡಗು ತಿಟ್ಟಿನ ನಾಟ್ಯವನ್ನು ಅಭ್ಯಾಸ ಮಾಡಿದರು.
ಕಟೀಲು, ಇರಾ ಸೋಮನಾಥೇಶ್ವರ, ಸುಬ್ರಹ್ಮಣ್ಯ, ಮಂತ್ರಾಲಯ ಮೇಳ, ಸಾಲಿಗ್ರಾಮ, ಪೆರ್ಡೂರು, ಕುಮಟ, ಕದ್ರಿ, ಮಂದಾರ್ತಿ ಮೇಳಗಳಲ್ಲಿ 56 ವರ್ಷಗಳ ತಿರುಗಾಟ ನಡೆಸಿದ್ದಾರೆ.
ಕೊನೆಯಲ್ಲಿ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯಲ್ಲಿ ಮತ್ತೆ ಸೇವೆ ಸಲ್ಲಿಸಿದ್ದರು. ರಂಗ ಸನ್ನಿವೇಶವನ್ನು ಸಾಕ್ಷಾತ್ಕರಿಸಿ ಪಾತ್ರಕ್ಕೆ ಒಪ್ಪುವ ಉತ್ತಮ ನಾಟ್ಯ ಹಾಗೂ ಅಭಿನಯವನ್ನು ಮಾಡಿ ಪಾತ್ರ ಪೋಷಣೆ ನೀಡಿ ಪೌರಾಣಿಕ ಮತ್ತು ಕಾಲ್ಪನಿಕ ಪ್ರಸಂಗಗಳೆರಡರಲ್ಲೂ ಜನಪ್ರಿಯರಾಗಿದ್ದರು.
ಸೂಪರ್ ಹಿಟ್ ಪ್ರಸಂಗ ಕಾಳಿಂಗ ನಾವಡ ವಿರಚಿತ ನಾಗಶ್ರೀ ಯ ಕೈರವ, ಕಾಂಚನಶ್ರೀಯ ಪ್ರೇತ,ಚೆಲುವೆ ಚಿತ್ರಾವತಿಯ ಅಡುಗೂಲಜ್ಜಿ, ಶೂದ್ರ ತಪಸ್ವಿನಿಯ ರಂಗಾಚಾರಿ, ಸ್ವಪ್ನ ಸಾಮ್ರಾಜ್ಯದ ಶೂರಸೇನ, ಕಲಿ ಕ್ರೋಧನದ ಮಡಿವಾಳ ಮೊದಲಾದ ವೇಷಗಳು ಮುಖ್ಯಪ್ರಾಣರಿಗೆ ಖ್ಯಾತಿ ತಂದುಕೊಟ್ಟಿದ್ದವು.
ಶ್ರೀಕೃಷ್ಣ ಲೀಲೆಯ ನಾರದ, ವಿಜಯ, ರಜಕ, ಭೀಷ್ಮ ವಿಜಯದ ವೃದ್ಧ ಬ್ರಾಹ್ಮಣ, ಭೀಷೋತ್ಪತ್ತಿಯ ಕಂದರ, ಪಟ್ಟಾಭಿಷೇಕದ ಮಂಥರೆ, ಶೂರ್ಪನಖಾ ವಿವಾಹದ ವಿದ್ಯುಜ್ಜಿಹ, ಶನೀಶ್ವರ ಮಹಾತ್ಮಯ ಶನಿಪೀಡಿತ ರಾಜಾ ವಿಕ್ರಮ ಮೊದಲಾದ ಪೌರಾಣಿಕ ಪಾತ್ರಗಳನ್ನು ಚೆನ್ನಾಗಿ ನಿರ್ವಹಿಸಿ ಪ್ರಸಿದ್ಧರಾದವರಿವರು.ದಮಯಂತಿ ಪುನಃ ಸ್ವಯಂವರದ ಬಾಹುಕ, ದೇವಿ ಮಹಾತ್ಮೆಯಲ್ಲಿ ಚಾರಕ ಮತ್ತು ಸುಗ್ರೀವ ಮೊದಲಾದ ಪಾತ್ರಗಳಲ್ಲಿಯೂ ಖ್ಯಾತಿ ಗಳಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು15 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್22 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ15 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ20 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ21 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ21 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ21 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















