ಕಾರ್ಯಕ್ರಮಗಳು
Puttur-ಪುತ್ತೂರು: ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025
“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯ ಕಾರ್ಯಕ್ರಮವು ಜೂ.21ರಂದು ಪುತ್ತೂರು ತಾಲೂಕು, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಭೂತಪೂರ್ವ, ಅವಿಸ್ಮರಣೀಯ ಹಾಗೂ ಸುಂದರವಾಗಿ ನಿರೀಕ್ಷೆಗೂ ಮೀರಿ ಸಂಪೂರ್ಣ ಯಶಸ್ವಿಯಾಗಿ ನೆರವೇರಿತು.
“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯ ಕಾರ್ಯಕ್ರಮವು ಜೂ.21ರಂದು ಪುತ್ತೂರು ತಾಲೂಕು, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಭೂತಪೂರ್ವ, ಅವಿಸ್ಮರಣೀಯ ಹಾಗೂ ಸುಂದರವಾಗಿ ನಿರೀಕ್ಷೆಗೂ ಮೀರಿ ಸಂಪೂರ್ಣ ಯಶಸ್ವಿಯಾಗಿ ನೆರವೇರಿತು.
ಸಮಿತಿಯ ಅನುಷ್ಠಾನದಂತೆ ಭಜನೆ, ಶನಿವಾರದ ಪ್ರಯುಕ್ತ ವಿಶೇಷ ಹನುಮಾನ್ ಚಾಲೀಸ್ ಪಠಣ, ಅಮೃತವಚನ, ಪಂಚಾಂಗ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಭಜನೆಯನ್ನು ಹಾಗೂ ಹನುಮಾನ್ ಚಾಲೀಸ್ ಅನ್ನು ಸತೀಶ್ ಹಾಗೂ ತಂಡದವರು ನೆರವೇರಿಸಿದರು. ಅಮೃತ ವಚನವನ್ನು ಯಶೋಧ ಕಂಬಳ ಬೆಟ್ಟು ಶಾಖೆ ಅವರು ಹಾಗೂ ಪಂಚಾಂಗವನ್ನು ಅರುಣ ಶ್ರೀ ಮಹಾಲಿಂಗೇಶ್ವರ ಶಾಖೆ ಅವರು ಪಠಿಸಿದರು.

ಬಳಿಕ ನಡೆದ ಕಾರ್ಯಕ್ರಮದ ಉದ್ಘಾಟನೆಯು ದೀಪಪ್ರಜ್ವಲನೆಯೊಂದಿಗೆ ಆರಂಭವಾಯಿತು. ದೀಪ ಪ್ರಜ್ವಲನೆಯನ್ನು ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಕೆಮ್ಮಿಂಜೆ ಅಧ್ಯಕ್ಷರಾದ ಕೇಶವ ಬೆದ್ರಾಳರವರು ನೆರವೇರಿಸಿ, ಯೋಗದಿಂದ ಆಗುವ ಪ್ರಯೋಜನಗಳನ್ನು ತಿಳಿಹೇಳಿ, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಸನದಲ್ಲಿ ತೊಡಗಿಸಿಕೊಳ್ಳುವುದರ ಮುಖೇನ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಬುನಾದಿ ಹಾಕೋಣ ಎಂದರು.
ವೇದಿಕೆಯಲ್ಲಿ ಪುತ್ತೂರು ತಾಲೂಕು ಸಂಚಾಲಕರಾದ ಕೃಷ್ಣಾನಂದಣ್ಣ, ಕಾರ್ಯಕ್ರಮದ ಸಂಚಾಲಕರಾದ ಹೇಮಚಂದ್ರ, ಸಹಸಂಚಾಲಕರಾದ ಜ್ಞಾನೇಶ ವಿಶ್ವಕರ್ಮ, ತಾಲೂಕು ಶಿಕ್ಷಣ ವಿಧಿ ಪ್ರಮುಖರಾದ ಸತೀಶ ಸುವರ್ಣ, ಸುಜಾತ, ಶ್ರೀಮತಿ ಶುಭ ಶೆಟ್ಟಿ ರವರು ಉಪಸ್ಥಿತರಿದ್ದು ದೀಪಪ್ರಜ್ವಲನೆಗೆ ಸಾಥ್ ನೀಡಿದರು.
ಕಾರ್ಯಕ್ರಮದ ಮೊದಲನೇ ಅವಧಿಯಾದ ಮಾನಸಿಕ ಸಿದ್ಧತೆ, ಉಸಿರಾಟ ಪ್ರಕ್ರಿಯೆ, ಗಣಪತಿ ನಮಸ್ಕಾರ, ಷಣ್ಮುಖ ನಮಸ್ಕಾರ ಹಾಗೂ ವಿಷ್ಣು ನಮಸ್ಕಾರಗಳನ್ನು ಚಂದ್ರನಾಥ ಆರ್ಯಾಪು ಶಾಖೆ ಅವರು ನೆರವೇರಿಸಿದರು. ಅವರ ಜೊತೆ ಪ್ರಾತ್ಯಕ್ಷಿಕೆಯಲ್ಲಿ ಶಿಕ್ಷಕರಾದಂತಹ ಪುಷ್ಪಲತಾ ಆರ್ಯಾಪು ಶಾಖೆ, ದೀಪಕ್ ಆರ್ಯಾಪು ಶಾಖೆ ಜೋಡಿಸಿಕೊಂಡಿದ್ದರು.
ಎರಡನೇ ಅವಧಿ ಆಯುಷ್ ಪಠ್ಯಕ್ರಮ ಆಧಾರಿತ ಯೋಗಾಭ್ಯಾಸ, ಅಮೃತಾಸನ ಹಾಗೂ ಪ್ರಾಣಾಯಾಮ-ಧ್ಯಾನವನ್ನು ಸಂಪ್ಯ ಶಾಖೆಯ ಶಿಕ್ಷಕಿ ಲಕ್ಷ್ಮೀ ರವರು ನೆರವೇರಿಸಿದರು, ಅವರಿಗೆ ಜೊತೆಯಾಗಿ ಪ್ರಾತ್ಯಕ್ಷಿಕೆಯಲ್ಲಿ ಶಿಕ್ಷಕರಾದ ವಿನಯ ಅಕ್ಕ ಆರ್ಯಾಪು ಶಾಖೆ, ಸತೀಶ್ ಆರ್ಯಾಪು ಶಾಖೆ ಹಾಗೂ ಅಶೋಕ ಸುಭದ್ರ ಶಾಖೆ , ಸತೀಶ್ ಪಾಂಗಳಾಯಿ ಶಾಖೆ , ಸುಮ ಸಂಪ್ಯ ಶಾಖೆ ಜೋಡಿಸಿಕೊಂಡಿದ್ದರು.

ಬಳಿಕ ಚಿತ್ರಾನ್ನ, ಕ್ಷೀರ ಹಾಗೂ ಪಾನಕವನ್ನೊಳಗೊಂಡ ಪ್ರಸಾದವನ್ನು ಅನ್ನಪೂರ್ಣೇಶ್ವರಿ ಮಂತ್ರದೊಂದಿಗೆ ಸ್ವೀಕರಿಸಲಾಯಿತು.
ಅಗ್ನಿಹೋತ್ರವನ್ನು ಸಂಪ್ಯ ಶಾಖೆಯ ಯೋಗಬಂಧು ಸೂರಪ್ಪ ದಂಪತಿಗಳು ನೆರವೇರಿಸಿದರು. ಯೋಗ ದಿನಾಚರಣೆ ಥೀಮ್ನ ಹೂವಿನ ರಂಗೋಲಿಯನ್ನು ಸುಭದ್ರ ಶಾಖೆಯ ದಿನೇಶ ವಿಶ್ವಕರ್ಮರವರ ನೇತೃತ್ವದಲ್ಲಿ ರಚಿಸಲಾಯಿತು. ವಂದನಾರ್ಪಣೆಯನ್ನು ಹೇಮಚಂದ್ರ ಕಲ್ಲೇಗ ಇವರು ಮಾಡಿದರು. ಆಗಮಿಸಿದ ಅತಿಥಿಗಳಿಗೆ ಹಾಗೂ ಯೋಗಬಂಧುಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ನಿರೂಪಣೆಯನ್ನು ಆರ್ಯಾಪು ಶ್ರೀಚಕ್ರರಾಜರಾಜೇಶ್ವರೀ ಶಾಖೆಯ ಶುಭರವರು ನೆರವೇರಿಸಿದರು.
ಪುತ್ತೂರು ತಾಲೂಕು ವ್ಯಾಪ್ತಿಗೆ ಒಳಪಟ್ಟ ಸುಮಾರು 600 ಮಿಕ್ಕಿ ಯೋಗಬಂಧುಗಳು ಕಾರ್ಯಕ್ರಮದ ಅನುಭವ ಕ್ಷಣಗಳನ್ನು ಅನುಭವಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ದಕ್ಷಿಣ ಕನ್ನಡ22 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ24 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ23 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್8 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ7 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ7 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ6 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು23 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















