ಶಿಕ್ಷಣ
Ambika-ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪ.ಪೂ. ವಿದ್ಯಾಲಯಗಳಲ್ಲಿ ಯೋಗ ದಿನಾಚರಣೆ; ಯೋಗಾಭ್ಯಾಸ ಹಾಗೂ ಆರೋಗ್ಯಕರ ಆಹಾರ ಸೇವನೆ ಅಗತ್ಯ : ಡಾ.ಚೇತನಾ ಗಣೇಶ್
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಎರಡು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಎರಡು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು.
ಬಪ್ಪಳಿಗೆಯಲ್ಲಿ ಮಾತನಾಡಿದ ಪುತ್ತೂರು ಸಿಟಿ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಸಲಹೆಗಾರರಾದ ಡಾ.ಚೇತನಾ ಗಣೇಶ್ ವಿದ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ಹೆಚ್ಚಿಸಲು ಭಸ್ತಿçಕಾ ಮತ್ತು ಕಪಾಲಭಾತಿ ಪ್ರಾಣಾಯಾಮಗಳ ಅಭ್ಯಾಸ ಮಾಡುವುದು ಅತ್ಯವಶ್ಯಕವಾಗಿದೆ ಎಂದು ನುಡಿದರು.
ಪುರುಷರು ಆಸನಗಳಲ್ಲಿ ಶ್ರೇಷ್ಟವಾದ ಶೀರ್ಷಾಸನವನ್ನು ಮತ್ತು ಮಹಿಳೆಯರು ಸರ್ವಾಂಗಾಸನವನ್ನು ನಿಯಮಿತವಾಗಿ ಅಭ್ಯಾಸ ಮಾಡುವುದರಿಂದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸಬಹುದು. ಜಂಕ್ ಆಹಾರ ಸೇವನೆ ಮನುಷ್ಯರಲ್ಲಿ ಹಾರ್ಮೋನ್ ಅಸಮತೋಲನವನ್ನು ಉಂಟುಮಾಡಬಹುದು. ಹಾಗಾಗಿ ದಿನನಿತ್ಯ ಯೋಗಾಭ್ಯಾಸದ ಜೊತೆಗೆ ಆರೋಗ್ಯಕರ ಆಹಾರ ಪದ್ದತಿಯನ್ನು ಪಾಲಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.
ನೆಲ್ಲಿಕಟ್ಟೆಯಲ್ಲಿ ಮಾತನಾಡಿದ ಪುತ್ತೂರಿನ ಯೋಗ ಶಿಕ್ಷಕಿ ಪ್ರೀತಿ ಶೆಣೈ ಯೋಗ ಎಂದರೆ ಕೇವಲ ಆಸನ ಅಲ್ಲ. ಪ್ರಾಣಾಯಾಮ, ಧ್ಯಾನ, ಮುದ್ರೆ ಎಲ್ಲವನ್ನು ಅದು ಒಳಗೊಂಡಿದೆ. ನಮ್ಮ ಸಂಪ್ರದಾಯ, ಆಚರಣೆ, ಆರೋಗ್ಯ ಪದ್ಧತಿ, ಯೋಗ ಎಲ್ಲವೂ ವೈಜ್ಞಾನಿಕ ತಳಹದಿಯನ್ನು ಹೊಂದಿವೆ ಎಂಬುದು ಈಗಾಗಲೇ ಸಾಬೀತಾದ ವಿಚಾರ ಎಂದು ಹೇಳಿದರು.
ಎರಡೂ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಯೋಗದಿಂದ ಮೂಲಾಧಾರ ಚಕ್ರ ಜಾಗೃತವಾಗುತ್ತದೆ. ಪ್ರಪಂಚಕ್ಕೆ ಯೋಗವನ್ನು ಕೊಡುಗೆಯಾಗಿ ನೀಡಿದ್ದು ನಮ್ಮ ಹೆಮ್ಮೆಯ ಭಾರತ. ಆದುದರಿಂದ ನಮಗೆಲ್ಲ ವಿಶ್ವ ಯೋಗ ದಿನಾಚರಣೆ ಎಂಬುದು ಹೆಮ್ಮೆಯ ದಿನ. ಪತಂಜಲಿ ಮುನಿಯ ಯೋಗ ಹಾಗೂ ರವಿಶಂಕರ ಗುರುಗಳ ‘ಜೀವನ ಕಲೆ’ ಇವುಗಳಲ್ಲಿ ಅದ್ಭುತ ಜೀವನ ಶಕ್ತಿ ಇದೆ. ಭಾರತದ ಯೋಗ ಹಾಗೂ ಆಯುರ್ವೇದ ವೈದ್ಯಕೀಯ ಪದ್ಧತಿಯನ್ನು ಜಗತ್ತಿನಾದ್ಯಂತ ಪಸರಿಸುವ ಕೆಲಸವನ್ನು ಮಾಡಿ ನಾವು ಬದುಕಿನ ಸಾರ್ಥಕ್ಯ ಕಾಣಬೇಕು ಎಂದು ಹೇಳಿದರು.
ನೆಲ್ಲಿಕಟ್ಟೆ ಕಾಲೇಜಿನ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ಕಾಲೇಜಿನ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್, ಉಪಪ್ರಾಂಶುಪಾಲ ಪ್ರದೀಪ್ ಕೆ ವೈ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರದ್ಧಾ ಜಿ. ಎಸ್. ವಿದ್ಯಾರ್ಥಿನಿಯರಾದ ವರ್ಷಾಲಕ್ಷ್ಮಿ, ಅನನ್ಯ, ರಾಶಿ, ರಕ್ಷಾ, ಧೃತಿ ಭಟ್, ವೈಷ್ಣವಿ, ದೀಪ್ತಿ ಹಾಗೂ ಶ್ರೀಲಕ್ಷ್ಮಿ ಸುರೇಶ್ ಕಾರ್ಯಕ್ರಮ ನಡೆಸಿಕೊಟ್ಟರು.
ಶಿಕ್ಷಣ
Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ವಾರ್ಷಿಕೋತ್ಸವ
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.
ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.
ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.
ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
-
Uncategorized15 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಸ್ಥಳೀಯ24 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಬಿಗ್ ನ್ಯೂಸ್24 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ20 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ20 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಕ್ರೈಂ2 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್















