Connect with us

ಅಪರಾಧ

Puttur-ಪುತ್ತೂರು: ಕ್ರೈಸ್ತ ಸ್ಮಶಾನದಲ್ಲಿ ಸಮಾಧಿ ಧ್ವಂಸ; ದುಷ್ಕರ್ಮಿಗಳ ಪತ್ತೆಗೆ ಪೊಲೀಸರ ಬಲೆ

Published

on



Ad Widget

Ad Widget

Ad Widget

Ad Widget

ನಗರದ ಆನೆಮಜಲು ಪರಿಸರದಲ್ಲಿರುವ ಕ್ರೈಸ್ತ ಸ್ಮಶಾನದಲ್ಲಿ ಸಮಾಧಿಯೊಂದನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ವರದಿಯಾಗಿದೆ. ಈ ಕೃತ್ಯವು ಸ್ಥಳೀಯವಾಗಿ ಆತಂಕ ಮೂಡಿಸಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಜೂನ್ 24: ನಗರದ ಆನೆಮಜಲು ಪರಿಸರದಲ್ಲಿರುವ ಕ್ರೈಸ್ತ ಸ್ಮಶಾನದಲ್ಲಿ ಸಮಾಧಿಯೊಂದನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ವರದಿಯಾಗಿದೆ. ಈ ಕೃತ್ಯವು ಸ್ಥಳೀಯವಾಗಿ ಆತಂಕ ಮೂಡಿಸಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬನ್ನೂರಿನ ಸಂತ ಅಂತೋಣಿ ಚರ್ಚ್‌ನ ಧರ್ಮಗುರುಗಳಾದ ಫಾದರ್ ಬಾಲ್ತಿಜಾರ್ ಪಿಂಟೋ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಚರ್ಚ್‌ನ ಆಡಳಿತಕ್ಕೆ ಸೇರಿದ ಆನೆಮಜಲು ಬಳಿಯ ದಫನ್ ಭೂಮಿಯಲ್ಲಿ (ಸ್ಮಶಾನ) ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಸಮಾಧಿಯನ್ನು ಒಡೆದು ಹಾಕಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

Ad Widget

Ad Widget <> Ad Widget

ಜೂ 14 ರಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ, ಪರಿಶೀಲನೆ ನಡೆಸಿದ್ದಾರೆ.



Ad Widget
Ad Widget
Click to comment

Leave a Reply

ಅಪರಾಧ

ಬಂಟ್ವಾಳದಲ್ಲಿ ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಓರ್ವ ವಶಕ್ಕೆ | 12 ಅಂಕದ ಕೋಳಿಗಳು, ಕತ್ತಿ ಹಾಗೂ ₹1,100 ನಗದು ವಶ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ. 18ರಂದು ಸಂಜೆ ಎರ್ಮುಡೆ ಪ್ರದೇಶದಲ್ಲಿ ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿರುವುದು ದೃಢಪಟ್ಟಿದೆ.

Ad Widget

Ad Widget <> Ad Widget

ಪೊಲೀಸರು ದಾಳಿ ನಡೆಸಿದ ವೇಳೆ ಜೂಜಾಟದಲ್ಲಿ ಭಾಗಿಯಾಗಿದ್ದ ಹಲವರು ಪರಾರಿಯಾಗಿದ್ದಾರೆ. ಈ ಪೈಕಿ ಬಂಟ್ವಾಳದ ಬಿ. ಮೂಡ ಗ್ರಾಮದ ಗಣೇಶ್ (33) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Ad Widget

ಸ್ಥಳದಲ್ಲಿದ್ದ 12 ಅಂಕದ ಕೋಳಿಗಳು, ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿ ಹಾಗೂ ₹1,100 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 147/2026ರ ಅಡಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87 ಮತ್ತು 93 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(M)(ii) ಮತ್ತು 11(1)(N)ರಂತೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಪರಾಧ

ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ. 17ರಂದು ರಾತ್ರಿ ರಿಫಾಯಿ ಅವರು ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅಲ್ಲಿಗೆ ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ರಿಫಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಕಲಂ 126(2), 352, 351(2) ಹಾಗೂ 115(2)ರಂತೆ ಪ್ರಕರಣ ದಾಖಲಾಗಿದೆ.



Ad Widget

ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Continue Reading

ಅಪರಾಧ

ಸೌತಡ್ಕ ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಮಾರಾಮಾರಿ; ಮಹಿಳೆಯರ ಮೇಲೆ ಹಲ್ಲೆ ಆರೋಪ

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Ad Widget

Ad Widget

Ad Widget

Ad Widget

ದೇವಸ್ಥಾನದ ಟ್ರಸ್ಟ್‌ಗೆ ಸೇರಿದ ಅಂಗಡಿಗಳ ಏಲಂ ಪ್ರಕ್ರಿಯೆಯ ಮೂಲಕ ರಾಘವ ಎಂಬವರು ಹೂವಿನ ಸ್ಟಾಲ್‌ ಪಡೆದಿದ್ದರು ಎನ್ನಲಾಗಿದೆ. ಆದರೆ, ಏಲಂ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೂ ಈ ಹಿಂದೆ ಅಂಗಡಿ ನಡೆಸುತ್ತಿದ್ದ ವ್ಯಾಪಾರಿ ಅಂಗಡಿಯನ್ನು ತೆರವುಗೊಳಿಸದೆ ಮುಂದುವರಿದಿದ್ದರು ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಘವ ಭಂಡಾರಿ ಎಂಬವರು ಅಂಗಡಿಗೆ ಏಕಾಏಕಿ ಪ್ರವೇಶಿಸಿದ ಸಂದರ್ಭದಲ್ಲಿ ಎರಡೂ ಕಡೆಯ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಅದು ಮಾರಾಮಾರಿಗೆ ತಿರುಗಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Ad Widget

Ad Widget <> Ad Widget

ಘಟನೆಗೆ ಸಂಬಂಧಿಸಿದಂತೆ ರಾಘವ ಭಂಡಾರಿ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣದ ಕುರಿತು ಪೊಲೀಸರ ಮುಂದಿನ ಕ್ರಮದ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading