Uncategorized
ಮತ್ತೊಮ್ಮೆ ಮರುಕಳಿಸಿದ ‘ಲಂಕಾದಹನ’…! ಪ್ರಧಾನಿ ನಿವಾಸ ಸಹಿತ ಹಲವಾರು ಮಂತ್ರಿಗಳ ಮನೆ ಸುಟ್ಟು ಭಸ್ಮ: ಪ್ರಧಾನಿ ರಾಜಿನಾಮೆ – ರಾಜಪಕ್ಷೆ ಆಡಳಿತದಲ್ಲಿ ನಡೆದ ಆರ್ಥಿಕ ದಿವಾಳಿತನಕ್ಕೆ ಬುಗಿಲೆದ್ದ ಶ್ರಿಲಂಕಾ ಪ್ರಜೆಗಳು
ಶ್ರಿಲಂಕಾ : ರಾಮಾಯಣದಲ್ಲಿ ನಡೆದ ರಾವಣಶೂರನ ಲಂಕಾದಲ್ಲಿ ಲಂಕಾದಹನ ಮಗದೊಮ್ಮೆ ಮರುಕಳಿಸಿದೆ. ಅಂದು ರಾಮ ಭಂಟ ಹನುಮ ರಾಜ ರಾವಣನ ಆಶ್ರಮ ಸಮೇತ ಲಂಕೆಯನ್ನೇ ದಹನ ಮಾಡಿದಂತೆ ಇಂದು ಪ್ರಧಾನಿ ರಾಜಪಕ್ಷೆ ಹಾಗೂ ಮಂತ್ರಿಗಳ ಮನೆಯನ್ನು ಪ್ರತಿಭಟನಾಕಾರರು ದಹನ ಮಾಡಿದ್ದಾರೆ. ಇದಕ್ಕೆಲ್ಲ ಕಾರಣ ಪ್ರಧಾನಿ ಮಹೀಂದಾ ರಾಜಪಕ್ಷೆ ಆಡಳಿತದಲ್ಲಿ ನಡೆದ ಕೆಟ್ಟ ಆರ್ಥಿಕ ಹಿನ್ನಡೆತ…!
ತೀವ್ರ ಆರ್ಥಿಕ ದಿವಾಳಿತನದ ಹಿನ್ನೆಲೆ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ ಬೆನ್ನಲ್ಲೇ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಶ್ರೀಲಂಕಾದ ವಾಯುವ್ಯ ಪ್ರಾಂತ್ಯದ ಕುರುನೇಗಾಲ ನಗರದಲ್ಲಿರುವ ಮಹಿಂದಾ ರಾಜಪಕ್ಸೆ ಅವರ ನಿವಾಸಕ್ಕೆ ಸರ್ಕಾರದ ವಿರೋಧಿ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿದೆ.

ಶಾಂತಿಯುತವಾಗಿ ಪ್ರತಿಭಟನೆ ಮಾಡುತಿದ್ದ ಗಾಲೆ ಫೋರ್ಸ್ ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯ ಹಿಂದೆ ಆಡಳಿತ ಪಕ್ಷದ ಕೈವಾಡವಿದೆ ಎಂದು ಸರ್ಕಾರದ ವಿರೋಧಿ ಗುಂಪು ಹಲವು ನಾಯಕರ ಮನೆಗೆ ಬೆಂಕಿ ಹಚ್ಚಿದೆ.
ವೀರಕೇಟಿಯ ಪ್ರಾಂತೀಯ ಸಭೆಯ ಅಧ್ಯಕ್ಷರ ನಿವಾಸದಲ್ಲಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಸರ್ವಪಕ್ಷಗಳ ಮಧ್ಯಂತರ ಸರ್ಕಾರ ರಚಿಸಲು ಪ್ರಧಾನಿ ಮಹಿಂದಾ ರಾಜಪಕ್ಷೆ ತಮ್ಮ ರಾಜೀನಾಮೆ ಸಲ್ಲಿಸಿದ ಬಳಿಕವೂ ಹಿಂಸಾಚಾರ ಭುಗಿಲೆದ್ದಿದೆ.

ಶ್ರೀಲಂಕಾದಾದ್ಯಂತ ಕರ್ಫ್ಯೂ ಇದ್ದು, ಶಾಂತತೆಯನ್ನು ಕಾಪಾಡಲು ಸೇನೆಯನ್ನು ರಸ್ತೆಗಳಲ್ಲಿ ನಿಯೋಜಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳೊಂದಿಗೆ ಘರ್ಷಣೆಯ ಘಟನೆಗಳು ಹೆಚ್ಚಿವೆ. ಅದು ಸೋಮವಾರ ಭಾರೀ ಹಿಂಸಾಚಾರಕ್ಕೆ ತಿರುಗಿದೆ.
ಇನ್ನು, ಗಾಲೆ ಫೋರ್ಸ್ ಪ್ರತಿಭಟನಾ ಸ್ಥಳದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆ ವೇಳೆ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಸೋಮವಾರ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರವ್ಯಾಪಿ ಹಿಂಸಾಚಾರ ಭುಗಿಲೆದ್ದಿದ್ದು, ನಿರ್ಗಮಿತ ಪ್ರಧಾನಿ, ಸಂಸದರು, ಸಚಿವರ ನಿವಾಸ ಹಾಗೂ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚುತ್ತಿದೆ. ಇದರಿಂದ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಯಲ್ಲಿದೆ.
ಇನ್ನು, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕಿಂತ ಮುನ್ನ ಮಹಿಂದಾ ರಾಜಪಕ್ಸೆ ಜನರಲ್ಲಿ ಸಂಯಮದಿಂದ ವರ್ತಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಶ್ರೀಲಂಕಾದಲ್ಲಿ ಭಾವನೆಗಳು ಹೆಚ್ಚುತ್ತಿರುವಾಗ ನಾನು ನಮ್ಮ ಸಾರ್ವಜನಿಕರನ್ನು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸುತ್ತೇನೆ. ಹಿಂಸೆಯು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ನಾವು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ, ಅದನ್ನು ಪರಿಹರಿಸಲು ಈ ಆಡಳಿತವು ಬದ್ಧವಾಗಿದೆ ಎಂದು ಮಹಿಂದಾ ರಾಜಪಕ್ಸೆ ಟ್ವೀಟ್ ಮಾಡಿದ್ದರು.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
ಅಪರಾಧ15 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್12 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ12 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು13 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ9 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ13 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು14 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ14 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















