ಸ್ಥಳೀಯ
K.V. Prabhakar-ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ; ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ; ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದರು.
ತುಮಕೂರು ಜೂ 26: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ.
ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು ಮಾತನ್ನು ನೆನಪಿಸಿಕೊಳ್ಳುತ್ತಾರೆ. “ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತದೆ. ಬೆಳೆಯುತ್ತಾ ಅಲ್ಪ ಮಾನವನನ್ನಾಗಿ ಮಾಡಲಾಗುತ್ತದೆ”.
ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು. ಹೀಗಾದಾಗ ಮಾತ್ರ ಸಾಮಜಿಕ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.
ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ.
ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ. ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, clickbait, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ.
ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ. ಮೊದಲು ಸತ್ಯ, ನಂತರ ವೇಗ ಎಂಬ ನುಡಿಯು ಈಗ ಇನ್ನೂ ಹೆಚ್ಚು ಪ್ರಸ್ತುತವಾಗಿದೆ. Chat GPT ಇರಬಹುದು ಅಥವಾ AI ಯುಗದಲ್ಲಿ ನಿಮ್ಮತನವನ್ನು ಕಳೆದುಕೊಳ್ಳದೆ ಕಾರ್ಯನಿರ್ವಹಿಸಿದರೆ, ಕೃತಕತೆ ಇಲ್ಲದ ಯಶಸ್ಸು ಸಾಧ್ಯ.ಇದನ್ನು ಸಾಧಿಸಲು ಶಿಕ್ಷಣ ಮತ್ತು ತರಬೇತಿಯ ಅಗತ್ಯತೆ ಇದೆ.
ಪ್ರತಿಯೊಬ್ಬ ಮಾಧ್ಯಮ ವಿದ್ಯಾರ್ಥಿಗೆ ನಿಖರ ಮಾಹಿತಿ ಸಂಗ್ರಹಣೆ, ಬೋಧನೆಯ ಶೈಲಿ, ವಿಶ್ಲೇಷಣಾತ್ಮಕ ದೃಷ್ಟಿಕೋನ ಹಾಗೂ ಸಮಾಜದ ಅಸಮಾನತೆಗಳನ್ನು ಗುರುತಿಸುವ ನೈತಿಕ ಬದ್ಧತೆ ಅತ್ಯಗತ್ಯ. ಮಾಧ್ಯಮ ಇಂದಿನ ಕಾಲದಲ್ಲಿ ಕೇವಲ ಸುದ್ದಿಯನ್ನು ನೀಡುವುದಲ್ಲ. ಇವು ಆಲೋಚನೆಗಳನ್ನು, ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯನ್ನೂ ಹೊಂದಿವೆ. ಈ ಕಾರಣಕ್ಕಾಗಿಯೇ ಮಾಧ್ಯಮಗಳನ್ನು opinion makers ಎಂದು ಪರಿಗಣಿಸಲಾಗುತ್ತಿದೆ.
ನಮ್ಮ ಸರ್ಕಾರ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಮಾಧ್ಯಮ ಅಕಾಡೆಮಿಯ ಮೂಲಕ ತರಬೇತಿ ಶಿಬಿರಗಳು, ಸಂವಾದ ಸಭೆಗಳು, ಗ್ರಾಮೀಣ ಪತ್ರಕರ್ತರ ಪ್ರೋತ್ಸಾಹ, ಡಿಜಿಟಲ್ ಮಾಧ್ಯಮ ತರಬೇತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸತ್ಯನಿಷ್ಠ ಸಮಾಜಮುಖಿ ಪತ್ರಕರ್ತರನ್ನು ರೂಪಿಸುವ ದಿಕ್ಕಿನಲ್ಲಿ ಪ್ರಯತ್ನಿಸುತ್ತಿದೆ.
ನೀವು ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡುತ್ತಿದ್ದರೆ, ಇದು ಕೇವಲ ಉದ್ಯೋಗವಲ್ಲ. ಇದು ಸಮಾಜದ ಧ್ವನಿ ಆಗುವ, ಧ್ವನಿ ಇಲ್ಲದವರ ಮಾತುಗಳನ್ನು ಎತ್ತಿ ಹಿಡಿಯುವ, ಮತ್ತು ಅಧಿಕಾರದ ಎದುರು ಸತ್ಯವನ್ನು ಹೇಳುವ ಧೈರ್ಯದ ಮಾರ್ಗ ಮತ್ತು ಮಾಧ್ಯಮ ಎನ್ನುವುದನ್ನು ನೆನಪಿನಲ್ಲಿಡಬೇಕು.
ಪ್ರೀತಿಯ ವಿದ್ಯಾರ್ಥಿಗಳೇ, ಕಲಿಕೆಯ ದಿನಗಳಲ್ಲಿ ಸೃಜನಶೀಲತೆ, ಅಧ್ಯಯನಶೀಲತೆ ಸಂಶೋಧನಾ ಮನೋಭಾವ, ಮತ್ತು ಸಾಮಾಜಿಕ ಜವಾಬ್ದಾರಿಯ ಚಿಂತನೆಯನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು.
ತುಮಕೂರು ವಿಶ್ವ ವಿದ್ಯಾಲಯ ಆಯೋಜಿಸಿರುವ ಈ ಮಾಧ್ಯಮ ಹಬ್ಬವು ಮಾಧ್ಯಮ ಕ್ಷೇತ್ರದಲ್ಲಿ ಪ್ರಜ್ಞಾವಂತ ಯುವ ಪ್ರತಿಭೆಗಳ ಹುಟ್ಟಿಗೆ ವೇದಿಕೆಯಾಗಲಿ ಎಂದು ಆಶಿಸುತ್ತೇನೆ ಎಂದರು.
ತುಮಕೂರು ವಿವಿ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ, ಪ್ರಜಾ ಪ್ರಗತಿ ಸಂಪಾದಕಾದ ನಾಗಣ್ಣ, ಸಿಂಡಿಕೇಟ್ ಸದಸ್ಯರಾದ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಿಣಿ ಅವರು ಉಪಸ್ಥಿತರಿದ್ದರು.
SSLC ಯಿಂದಲೇ ಸೆಳೆತ :
ನನಗೆ SSLC ಯಿಂದಲೇ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಳ್ಳುವ ಅವಕಾಶ ಸಿಕ್ಕಿದೆ. ನಾನು ಲಿಫ್ಟ್ ಹತ್ತಿಕೊಂಡು ಪತ್ರಿಕಾವೃತ್ತಿಯಲ್ಲಿ ಬೆಳೆಯಲಿಲ್ಲ. ಪತ್ರಿಕೆ ಹಂಚುವ ಕೆಲಸದಿಂದ ಆರಂಭಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಆಗುವ ಮಟ್ಟಕ್ಕೆ ಬೆಳೆದೆ ಎಂದು ತಮ್ಮ ಬೆಳವಣಿಗೆಯನ್ನು ಸ್ಮರಿಸಿದರು.
ಪ್ರಶ್ನೆ ಕೇಳುವ ಮೊದಲು ಅಧ್ಯಯನ ಅಗತ್ಯ:
ಪತ್ರಕರ್ತರು ಪ್ರಶ್ನೆ ಕೇಳುವುದನ್ನು ಬಿಡಬಾರದು ಆದರೆ, ಪ್ರಶ್ನೆ ಮಾಡುವ ಮೊದಲು ಆ ವಿಷಯದ ಬಗ್ಗೆ ಅಧ್ಯಯನ ನಡೆಸಿರಬೇಕು. ವಾಪಾಸ್ ಪ್ರಶ್ನೆ ಕೇಳಿದರೆ ಪತ್ರಕರ್ತರು ಮುಖ ಮುಖ ನೋಡಬಾರದು. ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ ಎಂದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ಸುಳ್ಯ
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.
ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.
ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.
-
ನಿಧನ ವಾರ್ತೆ20 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಮಂಗಳೂರು23 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
Uncategorized18 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ20 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್20 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು19 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ರಾಜಕೀಯ18 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ19 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ


















