Connect with us

ಬಿಗ್ ನ್ಯೂಸ್

ʼಶಾಸಕತ್ವದ ಅವಧಿಯಲ್ಲಿ  ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ  ರೂ.811 ಕೋಟಿ ಅನುದಾನʼ –  ಪತ್ರಿಕಾಗೋಷ್ಠಿಯಲ್ಲಿ ನಾಲ್ಕುವರ್ಷದ ರಿಪೋರ್ಟು ಕಾರ್ಡ್‌ ನೀಡಿದ ಶಾಸಕ ಸಂಜೀವ ಮಠಂದೂರು

Published

on

Ad Widget

Ad Widget

Ad Widget

Ad Widget

ಪುತ್ತೂರು : ಮೇ 10 : ನಾಲ್ಕು ವರ್ಷದ ಶಾಸಕತ್ವದ ಅವಧಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಒಟ್ಟು 808 ಕೋ ರೂ ಅನುದಾನ ತಂದಿದ್ದು ಅದನ್ನು ರಸ್ತೆ, ಕುಡಿಯುವ ನೀರು, ಶಿಕ್ಷಭ , ನೀರಾವರಿ, ವಿದ್ಯುತ್‌  ಆರೋಗ್ಯ, ನ್ಯಾಯಾಂಗ  ಕ್ಷೇತ್ರಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ವಿನಿಯೋಗಿಸಿರುವುದಾಗಿ ಪುತ್ತೂರು ಶಾಸಕ  ಸಂಜೀವ ಮಠಂದೂರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ತನ್ನ ನಾಲ್ಕು ವರ್ಷದ ಶಾಸಕತ್ವದ ಅವಧಿಯ ರಿಪೋರ್ಟು ಕಾರ್ಡ್ ನೀಡುವ ಉದ್ದೇಶದಿಂದ ಪುತ್ತೂರಿನ ಮೇ9 ರಂದು ಪುತ್ತೂರಿನ ಪ್ರವಾಸಿ ಮಂಧಿರದಲ್ಲಿ  ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೂಲಭೂತ ಸೌಕರ್ಯಗಳ ಜತೆಗೆ ಪುತ್ತೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಜನರಿಗೆ ವಸತಿ ಹಾಗೂ ನಿವೇಶನ ನೀಡಲು ವಿಶೇಷ ಆಸಕ್ತಿ ವಹಿಸಿ  ಕಾರ್ಯಕ್ರಮ  ರೂಪಿಸಿರುವುದನ್ನು ವಿವರಿಸಿದರು. ಅಲ್ಲದೇ ಪುತ್ತೂರಿನಲ್ಲಿ ಕೈಗಾರಿಕಾ ವಲಯ ನಿರ್ಮಾಣಕ್ಕೆ  ಹಾಗೂ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾದ ಭೂಮಿಯನ್ನು ಕಾಯ್ದಿರಿಸಿರುವ ಪ್ರಕ್ರಿಯೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದರು

Ad Widget

Ad Widget alt="Ad Widget"/>

Ad Widget

ರಸ್ತೆಗಳು

Ad Widget

Ad Widget <> Ad Widget

 ನಾಲ್ಕು ವರ್ಷದ ಅವಧಿಯಲ್ಲಿ ಕ್ಷೇತ್ರದ ಒಟ್ಟು  160 ಕಿಮೀ ಉದ್ದದ ಗ್ರಾಮೀಣ ರಸ್ತೆಯನ್ನು  ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಪರಿವರ್ತಿಸಲಾಗಿದ್ದು, ಇದೊಂದು ದಾಖಲೆ. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 1500 ಕಿ.ಮೀ ಉದ್ದದ ಗ್ರಾಮೀಣ ರಸ್ತೆಯಿದ್ದು, ಇದರಲ್ಲಿ ಶಾಸಕತ್ವದ ಒಂದೇ  ಅವಧಿಯಲ್ಲಿ ಇಷ್ಟು ಅಗಾಧ ಪ್ರಮಾಣದಲ್ಲಿ ರಸ್ತೆ ಮೇಲ್ದರ್ಜೆಗೇರಿಸುವ ಕಾರ್ಯ ಹಾಗೂ ಅಭಿವೃದ್ದಿ ಮಾಡಿದು ಇದೇ ಮೊದಲು ಎಂದು ಅವರು ತಿಳಿಸಿದರು.

ಪುತ್ತೂರು ಉಪ್ಪಿನಂಗಡಿ ಹೆದ್ದಾರಿ

Ad Widget

Ad Widget

ನನ್ನ ಅವಧಿಯಲ್ಲಿ  13 ಕಿಮೀ ಉದ್ದದ  ಪುತ್ತೂರು ಉಪ್ಪಿನಂಗಡಿ ಹೆದ್ದಾರಿಯನ್ನು 22 ಕೋಟಿ ವೆಚ್ಚದಲ್ಲಿ ಚತುಷ್ಪಥವನ್ನಾಗಿಸುವ ಕಾರ್ಯ ನಡೆದಿದೆ. ಇದು ಗ್ರಾಮೀಣ ರಸ್ತೆಗಳ ಅಭಿವೃದ್ದಿಯಲ್ಲಿಯೇ ಐತಿಹಾಸಿಕ ಸಾಧನೆ. ರಾಷ್ಟ್ರೀಯ ಹೆದ್ದಾರಿ , ಮೆಟ್ರೋಪಾಲಿಟಿನ್‌ ಅಥಾವ  ಮಹಾನಗರ ಪಾಲಿಕೆ  ವ್ಯಾಪ್ತಿಯ ರಸ್ತೆಗಳಷ್ಟೆ ಚತುಷ್ಪಥ ರಸ್ತೆಗಳಾಗಿ ಪರಿವರ್ತಿತಗೊಳ್ಳುತ್ತಿದ್ದ ವೇಳೆಯಲ್ಲಿ, ಪುತ್ತೂರಿನಂತಹ ಗ್ರಾಮೀಣ ಭಾಗದ ರಸ್ತೆಯೊಂದು ಚತುಷ್ಪಥವಾಗಿ ಬದಲಾಗಿರುವುದು ಮಹತ್ವದ ವಿಚಾರ ಎಂದು ಅವರು ವಿವರಿಸಿದರು.

ಕಾಂಗ್ರೇಸ್ಸಿನ ಭ್ರಷ್ಟಚಾರದ ಆರೋಪಕ್ಕೆ ಶಾಸಕರ ಪ್ರತಿಕ್ರಿಯೆ

 ಕಬಕ-ವಿಟ್ಲ ರಸ್ತೆ ಅಭಿವೃದ್ಧಿ:

ನಾಲ್ಕು ವರ್ಷಗಳ ಹಿಂದೆ ಕಬಕ-ವಿಟ್ಲ ರಾಜ್ಯ ಹೆದ್ದಾರಿಯ ಅಭಿವೃದ್ಧಿಗೆ  ಟೆಂಡರ್ ಆಗಿತ್ತು. ಗುತ್ತಿಗೆದಾರ ಕಾಮಗಾರಿ ನಡೆಸದೇ ಬಾಕಿಯಿರಿಸಿದ್ದು ಆ  ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ  ಇದೀಗ ಹೊಸ ಟೆಂಡರ್ ನಡೆಸಲಾಗಿದೆ. ರೂ.15 ಕೋಟಿ ವೆಚ್ಚದಲ್ಲಿ 8 ಕಿ. ಮೀ ಉದ್ದದ  ರಸ್ತೆ ಅಭಿವೃದ್ಧಿಯಾಗಲಿದ್ದು ಏಳು ಮೀಟರ್ ಅಗಲವಾಗಲಿದೆ ಎಂದರು

ಕಲ್ಲಡ್ಕ-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ಮಂಗಿಲಪದವಿನಿಂದ ಅಡ್ಯನಡ್ಕ ತನಕ ರಸ್ತೆ ಅಭಿವೃದ್ಧಿಗೆ 8 ಕೋಟಿ ರೂ.  ಅನುದಾನ ಮಂಜೂರುಗೊಂಡಿದೆ

ಕಿಂಡಿ ಅಣೆಕಟ್ಟು

ಭೂಮಿಯ ಅಂತರ್ಜಲ ಮಟ್ಟ ಹೆಚ್ಚಿಸುವ ಹಾಗೂ ಎರಡು ಭೂ ಭಾಗಗಳ ನಡುವೆ ಸಂಪರ್ಕ ರಸ್ತೆ ನಿರ್ಮಿಸುವ ಉದ್ದೇಶದಿಂದ ಪಶ್ಚಿಮವಾಹಿನಿ ಯೋಜನೆಯಡಿ ಹಲವು ಕಿಂಡಿ ಅಣೆಕಟ್ಟುಗಳನ್ನು ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದೆ. ಅವುಗಳಲ್ಲಿ ಬಹುಮುಖ್ಯವಾದದ್ದು ಸಣ್ಣ ನೀರಾವರಿ ಇಲಾಖೆ ಪೆರ್ನೆಯ ಬಿಳಿಯೂರು ಕಟ್ಟೆಯಲ್ಲಿ 49 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕಿಂಡಿ ಅಣೆಕಟ್ಟು. ಇದಲ್ಲದೇ 60.25 ಕೋ ರೂ ವೆಚ್ಚದಲ್ಲಿ 4 ವರ್ಷದ ಅವಧಿಯಲ್ಲಿ ಹಲವು ಕಿಂಡಿ ಅಣೆಕಟ್ಟುಗಳನ್ನು ರಚಿಸಲಾಗಿದ್ದು, ಸಮಗ್ರವಾಗಿ ಒಟ್ಟು 450 ರಿಂದ 460 ಕಿಮೀ ಉದ್ದ ನೀರು ಶೇಖರಣೆ ಆಗುತ್ತಿದೆ ಎಂದು ಅವರು ತಿಳಿಸಿದರು.

ಶಿಕ್ಷಣ

ರಾಜ್ಯದಲ್ಲಿಯೇ ಪುತ್ತೂರಿನಲ್ಲಿ ಅತೀ ಹೆಚ್ಚು ಪ್ರಥಮ ದರ್ಜೆ ಕಾಲೇಜುಗಳಿದ್ದು ಇದರ ಅಭಿವೃದ್ಧಿ ತಲಾ ರೂ.1 ಕೋಟಿ ಅನುದಾನ ನೀಡಲಾಗಿದೆ ಎಂದರು.

ಶಾಲಾ, ಕಾಲೇಜು ಕಟ್ಟಡಗಳು, ಐಟಿಐ ಅಭಿವೃದ್ಧಿ, ಕೆಯ್ಯೂರು ಕೆಪಿಎಸ್ ಕಲೇಜು, ಮೌಲಾನಾ ಆಝಾದ್, ಡಾ. ಅಂಬೇಡ್ಕರ್ ವಸತಿ ಶಾಲೆಗೆಳಿಗೆ ರೂ.40ಕೋಟಿ,

ಸರ್ಕಾರಿ ಶಾಲೆಗಳು, ಅಂಗನವಾಡಿ & ಸರಕಾರಿ ಆಸ್ಪತ್ರೆಗಳಿಗೆ ಅಗತ್ಯ ಉಪಕರಣಗಳ ಪೂರೈಕೆಗೆ ರೂ.5 ಕೋಟಿ,

ನ್ಯಾಯಾಲಯ ಸಂಕೀರ್ಣ

52 ಕೋ ರೂ ವೆಚ್ಚದಲ್ಲಿ ಪುತ್ತೂರಿನ ಅನೆಮಜಲಿನಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ನೂತನ ಸಂಕೀರ್ಣ ನಿರ್ಮಿಸಲಾಗುತ್ತಿದೆ.  ಇದರ ಜತೆಗೆ 3 ಕೋ ರೂ ವೆಚ್ಚ್ದಲ್ಲಿ  ಬಾರ್ ಅಸೋಸಿಯೇಷನ್ ಕಟ್ಟಡ, ವಸತಿಗೃಹ ಕಟ್ಟಗಳ ನಿರ್ಮಿಸಲಾಗುತ್ತಿದೆ. ತಾಲೂಕು ಕೇಂದ್ರದಲ್ಲಿ ಇಷ್ಟು ದೊಡ್ಡ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗುತ್ತಿರುವುದು ಪುತ್ತೂರಿನಲ್ಲಿ ಪ್ರಥಮ ಎಂದರು.

ಕುಡಿಯುವ ನೀರು

ನಗರ ಸಭೆ ವ್ಯಾಪ್ತಿಯ ಪ್ರತಿ ಮನೆಗೆ 24*7 ಶುದ್ದ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ 113 ಕೋ ರೂ ವೆಚ್ಚದಲ್ಲಿ ಜಲ ಸಿರಿ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲಾಗುತ್ತಿದೆ. ಇನ್ನು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ 31 ಗ್ರಾಮ ಪಂಚಾಯತ್‌ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ ಗೆ 375 ಕೋ ರೂ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಶುದ್ದ ಕುಡಿಯುವ ನೀರಿನ ಯೋಜನೆಯ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸದ್ಯದಲ್ಲೆ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ ಎಂದರು.   

ಇದಲ್ಲದೇ ರಾಜ್ಯ ಸರಕಾರದ ಜಲಧಾರೆ ಯೋಜನೆಯಡಿ ಪುತ್ತೂರಿಗೆ 60 ಕೋ ರೂ ಮಂಜೂರಾಗಿದ್ದು, ಇದನ್ನು  ಪ್ರತಿ ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಟ್ಯಾಂಕ್‌ ಗಳ ನಿರ್ಮಾಣ ಹಾಗೂ ಪೈಪ್‌ ಗಳ ಮೂಲಕ  ವಸತಿ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲು ಬಳಸಿಕೊಳ್ಳಲಾಗಿದೆ ಎಂದರು ‌

ಕೇಂದ್ರ ಸರಕಾರದ  ಐಪಿಡಿಎಸ್ ಯೋಜನೆಯಡಿ  ವಿದ್ಯುತ್‌ ಇಲಾಖೆಯ ಎಚ್‌. ಟಿ ಹಾಗೂ ಎಲ್‌. ಟಿ ಲೈನ್‌ ಗಳನ್ನು ಭೂಗತ ಕೇಬಲ್‌ ಗಳ ಮೂಲಕ ಪ್ರವಾಹಿಸುವಂತೆ ಮಾಡಲು 20.80 ಕೋ ರೂ ವೆಚ್ಚದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ . ಸದ್ಯ ದೊರಕಿರುವ ಅನುದಾನ ಕಡಿಮೆಯಾಗಿರುವ ಕಾರಣ ಹಂತ ಹಂತವಾಗಿ  ಅದನ್ನು ಕ್ಷೇತ್ರ ವ್ಯಾಪ್ತಿ ವಿಸ್ತರಿಸಲಾಗುವುದು ಎಂದರು

ಆರೋಗ್ಯ :

  • ಪುತ್ತೂರು ಸರಕಾರಿ ಆಸ್ಪತ್ರೆ ಹಾಗೂ ವಿಟ್ಲ ಮತ್ತು ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ  ಒಟ್ಟು 1.5 ಕೋ. ರೂ. ವೆಚ್ಚದಲ್ಲಿ ಅಕ್ಸಿಜನ್‌ ಪ್ಲ್ಯಾಂಟ್‌ ಗಳ ನಿರ್ಮಾಣ.
  • 5 ಕೋಟಿ ವೆಚ್ಚದಲ್ಲಿ ಕೆಂದಬಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 50 ಬೆಡ್‌ ನ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ
  • ಈಶ್ವರಮಂಗಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ 2 ಕೋಟಿ ರೂ  
  • ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ 6 ಕೋಟಿ ರೂ  

ನಾಡಕಚೇರಿ ಕಟ್ಟಡಕ್ಕೆ ರೂ.36ಲಕ್ಷ:

ಶಿಥಿಲಾವಸ್ಥೆಯಲ್ಲಿರುವ ವಿಟ್ಲ ಹಾಗೂ ಉಪ್ಪಿನಂಗಡಿಯ ನಾಡ ಕಚೇರಿಗಳಿಗೆ ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ತಲಾ ರೂ.18ಲಕ್ಷ ಅನುದಾನ ಮಂಜೂರಾಗಿದೆ.

 ಕೈಗಾರಿಕೆಗಳಿಗೆ  ಭೂಮಿ:

ಪುತ್ತೂರಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಅವಕಾಶ ಕಲ್ಪಿಸಲು ಕೈಗಾರಿಕಾ ವಲಯ ನಿರ್ಮಾಣಕ್ಕೆ ಚಿಕ್ಕಮುಡ್ನೂರು ಗ್ರಾಮದಲ್ಲಿ 100 ಎಕರೆ ಗುರುತಿಸಲಾಗಿದೆ. ಇದು ಸರ್ವೆ ಆಗಿದ್ದು ಸರಕಾರದ ಹಂತದಲ್ಲಿದೆ. ಅಲ್ಲದೆ ಸಣ್ಣ ಕೈಗಾಗಿಕೆಗಳ ಸ್ಥಾಪನೆಗೆ ಅವಕಾಶ ನೀಡಲು ಆರ್ಯಾಪುನಲ್ಲಿ 15 ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದರು

800 ಮನೆ ಮಂಜೂರು:

ಕಳೆದ ನಾಲ್ಕು ವರ್ಷದಿಂದ ವಿಧಾನ ಸಭೆ ವ್ಯಾಪ್ತಿಯಲ್ಲಿ ಮನೆ ನೀಡುವ ಕಾರ್ಯಗಳು ಆಗಿರಲಿಲ್ಲ. ಇದೀಗ  ರಾಜೀವ ಗಾಂಧಿ ವಸತಿ ನಿಗಮದಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಒಟ್ಟು 8೦೦ ಮನೆಗಳು ಮಂಜೂರಾಗಿದೆ. ಪ್ರತಿ ಪಂಚಾಯತ್‌ಗಳಿಗೆ 30-40 ಮನೆಗಳು ದೊರೆಯಲಿದೆ.

ನಗರ ಸಭೆ ವ್ಯಾಪ್ತಿಯಲ್ಲಿ 15 ಎಕ್ರೆ ಭೂಮಿ

ನಗರ ಸಭಾ ವ್ಯಾಪ್ತಿಯಲ್ಲಿ ವಸತಿ ನಿವೇಶನಕ್ಕೆ 1900 ಅರ್ಜಿಗಳಿದ್ದು ಇದಕ್ಕಾಗಿ ನಗರದ ವಿವಿಧ ಕಡೆಗಳಲ್ಲಿ ಒಟ್ಟು 15 ಎಕ್ರೆ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಪ.ಜಾತಿ, ಪ.ಪಂಗಡ, ವಿಕಲಚೇತನರು, ವಿಧವೆಯರು ಹಾಗೂ ಹಿರಿಯ ನಾಗರಿಕರಿಗೆ ಆಧ್ಯತೆ ನೀಡಿ ವಿತರಿಸಲಾಗುವುದು ಎಂದರು

ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಪೂಡಾದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಶೆಟ್ಟಿ, ಜಯಂತಿ ನಾಯಕ್, ರಾಜೇಶ್ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು̤

ಅಭಿವೃದ್ದಿಯ ಒಟ್ಟಾರೆ ಚಿತ್ರಣ

  • ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ.7 ಕೋಟಿ,
  • ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 1.29ಕೋಟಿ,
  • ಲೋಕೋಪಯೋಗಿ ಇಲಾಖೆಯಿಂದ ಪ.ಜಾತಿ & ಪಂಗಡದ ಕಾಲನಿ ರಸ್ತೆ ಅಭಿವೃದ್ಧಿಗೆ ರೂ.೧೯.೦೨ಕೋಟಿ,
  • ಲೋಕೋಪಯೋಗಿ ಇಲಾಖೆಯ ೫೦೫೪ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಮತ್ತೂರು ಉಪ್ಪಿನಂಗಡಿ ಚತುಷ್ಪಥ ರಸ್ತೆ ಕಾಮಗಾರಿಗೆ ರೂ.೨೨ಕೋಟಿ,
  • ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ದೇವಸ್ಯ, ಕುಕ್ಕುಪುಣಿ, ಅಂದ್ರಟ್ಟ, ಕಿಜಾನ, ನೀರ್ಕಜೆ, ಮಂಜ ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ, ನವೀಕರಣ, ಸಂರಕ್ಷಣೆ ಕಾಮಗಾರಿಗಳಿಗೆ ರೂ.೭.೬೦ಕೋಟಿ,
  • ಲೋಕೋಪಯೋಗಿ ಇಲಾಖೆಯ ಶಾಲಾ ಸಂಪರ್ಕ ಸೇತು ಮತ್ತು ಗ್ರಾಮಬಂಧು ಯೋಜನೆಯಡಿ ಕಾಲುಸಂಕಗಳ ನಿರ್ಮಾಣಕ್ಕೆ ರೂ.೭.೬೧ಕೋಟಿ,
  • ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ ಅನುದಾನಗಳು ರೂ.೬೮.೪೫ಕೋಟಿ,
  • ಬನ್ನೂರು ಅನೆಮಜಲು ಎಂಬಲ್ಲಿ ನ್ಯಾಯಾಲಯ ನೂತನ ಸಂಕಿರ್ಣ, ಬಾರ್ ಅಸೋಸಿಯೇಷನ್ ಕಟ್ಟಡ, ವಸತಿಗೃಹ ಕಟ್ಟಗಳ ನಿರ್ಮಾಣಕ್ಕೆ ರೂ.೫೫ಕೋಟಿ,
  • ಸಣ್ಣ ನೀರಾವರಿ ಇಲಾಖೆಯ ಪಶ್ಚಿಮವಾಹಿನಿ ಯೋಜನೆಯಡಿ ಬೆಳೆಯೂರು ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.೫೧.೮೮ಕೋಟಿ,
  • ಸಣ್ಣ ನೀರಾವರಿ ಇಲಾಖೆಯ ಪಶ್ಚಿಮವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳು ನಿರ್ಮಾಣಕ್ಕೆ ರೂ.೬೦.೨೫ಕೋಟಿ,
  • ೨೦೨೧-೨೨ ನೇ ಸಾಲಿನ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ಕೃಷಿ ಭೂಮಿ ಸಂರಕ್ಷಣೆ ಕಾಮಗಾರಿಗಳಿಗೆ ರೂ.೨೪.೪೩ಕೋಟಿ,
  • ಕೆರೆ ಅಭಿವೃದ್ಧಿಗೆ ರೂ.೨ಕೋಟಿ,
  • ಕೇಂದ್ರ ಸರ್ಕಾರದ ಐಪಿಡಿಎಸ್ ಯೋಜನೆಯಲ್ಲಿ ಮೆಸ್ಕಾಂನ ಭೂಗತ ಕೇಬಲ್ ಅಳವಡಿಕೆಗೆ ರೂ.೨೦.೮೦ಕೋಟಿ,
  • ಕೇಂದ್ರ ಸರ್ಕಾರದ ದೀನ ದಯಾಳ್ ಉಪಾಧ್ಯಾಯ ಗಾಮ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕಗಳ ಉನ್ನತಿಕರಣಕ್ಕೆ ರೂ.೩.೯೬ಕೋಟಿ,
  • ಕುಂಬ್ರ ಗ್ರಾಮಾಂತರ ಮೆಸ್ಕಾಂನ ವಿಭಾಗದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.೧.೫೦ಕೋಟಿ,
  • ಮುಖ್ಯಮಂತ್ರಿಗಳ ವಿವೇಚನಾ ನಿಧಿಯಡಿ’ (ನಗರಸಭೆ & ಪಟ್ಟಣ ಪಂಚಾಯತ್) ಎಸ್‌ಎಫ್‌ಸಿ ವಿಶೇಷ ಅನುದಾನ ರೂ.೫ ಕೋಟಿ,
  • ಪುತ್ತೂರು, ನಗರಸಭಾ ವ್ಯಾಪ್ತಿಯಲ್ಲಿ ೨೪*೭ ಕುಡಿಯುವ ನೀರಿನ ಜಲಸಿರಿ ಯೋಜನೆಯಲ್ಲಿ ರೂ.೧೧೩.೦೮ಕೋಟಿ,
  • ನಗರಸಭೆಗೆ ಸ್ವಚ್ಛ ಭಾರತ್ ಮಿಶನ್ ಕಾರ್ಯಕ್ರಮದ ಘನತ್ಯಾಜ್ಯ ವಿಲೇವಾರಿ ಕಾರ್ಯಗಳಿಗೆ ರೂ.೪.೪೯ಕೋಟಿ,
  • ವಿಟ್ಲ ಪಟ್ಟಣ ಪಂಚಾಯತ್‌ಗೆ ಸ್ವಚ್ಛ ಭಾರನ್ ಮಿಶನ್ ಕಾರ್ಯಕ್ರಮದಡಿ ತ್ಯಾಜ್ಯ ವಿಲೇವಾರಿ ಕಾರ್ಯಗಳಿಗೆ ರೂ.೩.೩೦ಕೋಟಿ,
  • ಪುತ್ತೂರು ನಗರಸಭೆ ಮತ್ತು ವಿಟ್ಲ ಪಟ್ಟ ಪಂಚಾಯತ್‌ಗೆ ೧೫ನೇ ಹಣಕಾಸು ಯೋಜನೆಯಡಿ ೨೦೨೧-೨೨ ಸಾಲಿನನಲ್ಲಿ ರೂ.೩.೮೩ಕೋಟಿ,
  • ಪುತ್ತೂರು ನಗರಸಭೆ ಮತ್ತು ವಿಟ್ಲ ಪಟ್ಟಣ ಪಂಚಾಯತ್‌ಗೆ ಅಮೃತ ನಗರೋತ್ಥಾನ ಯೋಜನೆಯಡಿ ೨೦೨೧-೨೨ ಸಾಲಿನಲ್ಲಿ ರೂ.೩೫ಕೋಟಿ,
  • ಉಪ್ಪಿನಂಗಡಿ, ಈಶ್ವರಮಂಗಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.೮ಕೋಟಿ, ಕೆ
  • ದಂಬಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ರೂ.೫ಕೋಟಿ,
  • ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಮ್ಲಜನಕ ಘಟಕ ಸ್ಥಾಪನೆಗೆ ರೂ.೧.೫೦ಕೋಟಿ,
  • ೨೦೨೧-೨೨ನೇ ಸಾಲಿನಲ್ಲಿ ೨೭ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ರೂ.೮ಕೋಟಿ,
  • ಪುತ್ತೂರು, ಉಪ್ಪಿನಂಗಡಿ ಮತ್ತು ವಿಟ್ಲದಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ರೂ.೧.೫೦ಕೋಟಿ,
  • ಪಿಎಂಜಿಎಸ್.ವೈ ಯೋಜನೆಯಡಿ ರಸ್ತೆ ಅಭಿವೃದ್ಧಿ ರೂ.೫೮ಕೋಟಿ,
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ ರೂ.೨೫ಕೋಟಿ,
  • ೨೦೧೧-೨೨ನೇ ಸಾಲಿನಲ್ಲಿ ೪ ಗ್ರಾಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ರೂ.೮೦ಲಕ್ಷ,
  • ಪುತ್ತೂರು ನಗರ ಬಹು ಉಪಯೋಗಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ೧.೪೦ಕೋಟಿ,
  • ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ ಯೋಜನೆಯಡಿ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕೆ ರೂ.೫.೩೩ಕೋಟಿ,
  • ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಗೆ ರೂ.೬೦.೪೩ಕೋಟಿ,
  • ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಟ್ಟಡದ ಮೇಲಂಸ್ಥಿನ ಕಾಮಗಾರಿಗಳಗೆ ರೂ.೨.೯೯ಕೋಟಿ ಅನುದಾನ
Ad Widget
Click to comment

Leave a Reply

ಬಿಗ್ ನ್ಯೂಸ್

Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!

Published

on

Ad Widget

Ad Widget

Ad Widget

Ad Widget

ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್‌ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.

Ad Widget

Ad Widget <> Ad Widget

ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್‌ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್‌ಗಳಿಗೂ ಅನ್ವಯಿಸುತ್ತದೆ.

ಗುಂಪು ಬುಕಿಂಗ್‌ಗೆ ಬರ್ತ್‌ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್‌ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್‌ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.

Ad Widget

Ad Widget

ಗುಂಪು ಟಿಕೆಟ್‌ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್‌ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
  • ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್‌ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
  • ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
  • ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
  • ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
  • ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್‌ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
  • ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್‌ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
  • ದುರುಪಯೋಗ ತಡೆಯಲು ಎಚ್ಚರಿಕೆ
  • ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್‌ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
  • ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್‌ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
Ad Widget
Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!