ಅಪರಾಧ
Puttur-ಪುತ್ತೂರು: ವರದಕ್ಷಿಣೆ ಕಿರುಕುಳ, ತಲಾಕ್ ಆರೋಪ: ಪತಿ, ಕುಟುಂಬದ ವಿರುದ್ಧ ಮಹಿಳೆಯಿಂದ ದೂರು
ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ, ಜೀವ ಬೆದರಿಕೆ, ಹಾಗೂ ತ್ರಿವಳಿ ತಲಾಕ್ ನೀಡಿದ ಆರೋಪದಡಿ ಮಹಿಳೆಯೊಬ್ಬರು ತಮ್ಮ ಪತಿ, ಅತ್ತೆ, ನಾದಿನಿಯರು ಮತ್ತು ಮೈದುನರ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪುತ್ತೂರು: ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ, ಜೀವ ಬೆದರಿಕೆ, ಹಾಗೂ ತ್ರಿವಳಿ ತಲಾಕ್ ನೀಡಿದ ಆರೋಪದಡಿ ಮಹಿಳೆಯೊಬ್ಬರು ತಮ್ಮ ಪತಿ, ಅತ್ತೆ, ನಾದಿನಿಯರು ಮತ್ತು ಮೈದುನರ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಂಟ್ವಾಳ ಕುಕ್ಕಾಜೆಯ ಅಬ್ದುಲ್ ಖಾದರ್ ಅವರ ಪುತ್ರಿ ಮಮ್ತಾಜ್, ಕೊಡಿಪಾಡಿ ಜೋಳ ನಿವಾಸಿ ಮುಹಮ್ಮದ್ ಶರೀಫ್ (ಪತಿ), ಖತೀಜಾ (ಅತ್ತೆ), ಅಹಮದ್ ಸಿರಾಜುಲ್ ಮುನೀರ್ (ಮೈದುನ), ಸುಮಯ್ಯ ಮತ್ತು ಆಯಿಷಾ (ನಾದಿನಿಯರು) ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದೂರಿನಲ್ಲಿ ಏನಿದೆ ?
2016ರ ಮೇ 24ರಂದು ನೇರಳಕಟ್ಟೆಯ ಇಂಡಿಯನ್ ಆಡಿಟೋರಿಯಂನಲ್ಲಿ ಮಮ್ತಾಜ್ ಅವರಿಗೆ ಮುಹಮ್ಮದ್ ಶರೀಫ್ ಜೊತೆ ವಿವಾಹವಾಗಿತ್ತು. ಮದುವೆ ಸಂದರ್ಭದಲ್ಲಿ ಗಂಡನ ಕಡೆಯವರ ಬೇಡಿಕೆಯಂತೆ ಮಮ್ತಾಜ್ ಅವರ ತಂದೆ 80 ಪವನ್ ಚಿನ್ನಾಭರಣ, ಬೆಲೆಬಾಳುವ ಕೈಗಡಿಯಾರ, ಚಿನ್ನದ ನಾಣ್ಯ ಮತ್ತು ಎರಡು ಲಕ್ಷ ರೂಪಾಯಿ ನಗದು ನೀಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮದುವೆ ವೇಳೆ ಮಮ್ತಾಜ್ ಮೂರನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ವ್ಯಾಸಂಗ ಮುಂದುವರಿಸಲು ಯಾವುದೇ ಆಕ್ಷೇಪವಿಲ್ಲ ಎಂದು ಗಂಡನ ಕಡೆಯವರು ಒಪ್ಪಿಕೊಂಡಿದ್ದರು. ಆದರೆ, ಕಾಲೇಜು ಶುಲ್ಕಕ್ಕಾಗಿ ತಂದೆ ಕೊಟ್ಟ ಹಣವನ್ನು ಕೇಳಿದಾಗ, ಮುಹಮ್ಮದ್ ಶರೀಫ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಮ್ತಾಜ್ ಅವರ ವಿದ್ಯಾಭ್ಯಾಸಕ್ಕೆ ತಡೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮದುವೆಯ ನಂತರ, ಗಂಡ, ಅತ್ತೆ, ಮೈದುನ ಮತ್ತು ನಾದಿನಿಯರು ಹೆಚ್ಚಿನ ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ. ಜೂನ್ 4, 2025ರಂದು ಮುಹಮ್ಮದ್ ಶರೀಫ್ ಮಮ್ತಾಜ್ ಅವರ ತವರು ಮನೆಗೆ ಭೇಟಿ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, “ನಾನು ನಿನಗೆ ತಲಾಕ್ ನೀಡಿದ್ದೇನೆ” ಎಂದು ಮೂರು ಬಾರಿ ತಲಾಕ್ ಉಚ್ಚರಿಸಿ, “ನೀನು ಇನ್ನು ನನ್ನ ಪತ್ನಿಯಲ್ಲ” ಎಂದು ಜೀವ ಬೆದರಿಕೆ ಒಡ್ಡಿ ಹೋಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಜೂನ್ 6ರಂದು ಮಮ್ತಾಜ್ ಅವರ ಮಾವ ಗಂಡನಿಗೆ ಫೋನ್ ಮಾಡಿ 15 ಲಕ್ಷ ರೂಪಾಯಿ ಕೇಳಿದಾಗ, ಜೂನ್ 7ರಂದು ಮುಹಮ್ಮದ್ ಶರೀಫ್ ಮತ್ತೆ ತವರು ಮನೆಗೆ ಬಂದು ಮಮ್ತಾಜ್ ಅವರ ತಾಯಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಮ್ತಾಜ್ ತಮ್ಮ ದೂರಿನಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಪೊಲೀಸರು ಕಲಂ 85, 115(2), 352, 351(3), 3(5) ಬಿಎನ್ಎಸ್, ವರದಕ್ಷಿಣೆ ನಿಷೇಧ ಕಾಯ್ದೆ ಕಲಂ 3, 4, ಮತ್ತು ಮುಸ್ಲಿಂ ಮಹಿಳೆಯರ ವಿವಾಹ ಹಕ್ಕುಗಳ ರಕ್ಷಣೆ ಕಾಯ್ದೆಯಡಿ ಪ್ರಕರಣ (0042/2025) ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್‌ಐಆರ್ ದಾಖಲು..!
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್‌ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್‌ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.
ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಎನ್‌ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.
ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್‌ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.
ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಶಿಕ್ಷಣ24 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಅಪರಾಧ8 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್5 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು6 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಅಂತರ ರಾಜ್ಯ6 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್‌ಐಆರ್ ದಾಖಲು..!
-
ಸ್ಥಳೀಯ6 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು7 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















