ನಿಧನ ವಾರ್ತೆ
Hassan-ಹಾಸನ ಜಿಲ್ಲೆಯಲ್ಲಿ ಹೃದಯಘಾತದ ಕರಾಳ ಛಾಯೆ: ಒಂದೇ ತಿಂಗಳಲ್ಲಿ 16 ಜೀವಗಳು ಬಲಿ; ಇಂದು ಮತ್ತೊಂದು ಸೇರ್ಪಡೆ
ಕಾಫಿನಾಡು, ಪ್ರವಾಸಿಗರ ಸ್ವರ್ಗ ಎನಿಸಿಕೊಂಡಿದ್ದ ಹಾಸನ ಜಿಲ್ಲೆಯ ಮೇಲೆ ಇದೀಗ ಹೃದಯಾಘಾತದ ಕರಾಳ ಛಾಯೆ ಆವರಿಸಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಯಸ್ಸಿನ ಮಿತಿಯಿಲ್ಲದೆ, ಯುವಕರು ಸೇರಿದಂತೆ ಒಟ್ಟು 16 ಮಂದಿ ಹೃದಯ ಸ್ತಂಭನಕ್ಕೆ ಬಲಿಯಾಗಿದ್ದು, ಸಿದ್ದೇಶ್ವರ್ ನಗರ ನಿವಾಸಿ, ಆಟೋ ಚಾಲಕ ಗೋವಿಂದ (37) ಅವರು ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.
ಹಾಸನ, ಜೂನ್ 28: ಕಾಫಿನಾಡು, ಪ್ರವಾಸಿಗರ ಸ್ವರ್ಗ ಎನಿಸಿಕೊಂಡಿದ್ದ ಹಾಸನ ಜಿಲ್ಲೆಯ ಮೇಲೆ ಇದೀಗ ಹೃದಯಾಘಾತದ ಕರಾಳ ಛಾಯೆ ಆವರಿಸಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಯಸ್ಸಿನ ಮಿತಿಯಿಲ್ಲದೆ, ಯುವಕರು ಸೇರಿದಂತೆ ಒಟ್ಟು 16 ಮಂದಿ ಹೃದಯ ಸ್ತಂಭನಕ್ಕೆ ಬಲಿಯಾಗಿದ್ದು, ಜಿಲ್ಲೆಯ ಜನತೆಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಈ ಸಾವಿನ ಸರಣಿ ಇಂದು ಕೂಡ ಮುಂದುವರಿದಿದ್ದು, ಮತ್ತೊಂದು ಅಮೂಲ್ಯ ಜೀವವನ್ನು ಬಲಿ ಪಡೆದಿದೆ.
ಸ್ವತಃ ಆಟೋ ಚಲಾಯಿಸಿ ಆಸ್ಪತ್ರೆಗೆ ಬಂದರೂ ಉಳಿಯದ ಜೀವ:
ನಗರದ ಸಿದ್ದೇಶ್ವರ್ ನಗರ ನಿವಾಸಿ, ಆಟೋ ಚಾಲಕ ಗೋವಿಂದ (37) ಅವರೇ ಇಂದಿನ ದುರ್ದೈವಿ. ಆಟೋ ಚಲಾಯಿಸುತ್ತಿದ್ದಾಗಲೇ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಅವರು, ನೋವಿನ ನಡುವೆಯೂ ಸ್ವತಃ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದುಡಿದು ತಿನ್ನುವ ಕುಟುಂಬದ ಆಧಾರಸ್ತಂಭವೊಂದು ಕುಸಿದು ಬಿದ್ದಿರುವುದು ತೀವ್ರ ವಿಷಾದ ಮೂಡಿಸಿದೆ.
ನಿಲ್ಲದ ಸಾವಿನ ಸರಣಿ:
ಮೇ ತಿಂಗಳಿನಿಂದ ಆರಂಭವಾದ ಈ ಸಾವಿನ ಸರಣಿ, ಜಿಲ್ಲೆಯಾದ್ಯಂತ ಭೀತಿಯ ಅಲೆಗಳನ್ನು ಎಬ್ಬಿಸಿದೆ. ಯುವಕರಿಂದ ಹಿಡಿದು ಹಿರಿಯರವರೆಗೆ ಯಾರನ್ನೂ ಬಿಡದೆ ಈ ಮಹಾಮಾರಿ ಕಾಡುತ್ತಿದ್ದು, ಅಕಾಲಿಕ ಮರಣಗಳು ಕುಟುಂಬಗಳಲ್ಲಿ ಸೂತಕದ ವಾತಾವರಣ ನಿರ್ಮಿಸಿವೆ.
ಹೃದಯಾಘಾತಕ್ಕೆ ಬಲಿಯಾದವರ ಪಟ್ಟಿ:
• ಮೇ 20: ಅರಕಲಗೂಡು ತಾಲೂಕಿನ ಅಭಿಷೇಕ್ ಮತ್ತು ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂದ್ಯಾ.
• ಮೇ 28: ಕವನ.
• ಜೂನ್ 11: ನಿಶಾಂತ್.
• ಜೂನ್ 12: ನಾಗಪ್ಪ ಮತ್ತು ನೀಲಕಂಠಪ್ಪ.
• ಜೂನ್ 13: ದೇವರಾಜ್ ಮತ್ತು ಸತೀಶ್.
• ಜೂನ್ 14: ಕಾಂತರಾಜು.
• ಜೂನ್ 18: ನವೀನ್ ಮತ್ತು ತೀರ್ಥಪ್ಪ.
• ಜೂನ್ 21: ನಿಶಾದ್ ಅಹ್ಮದ್ ಮತ್ತು ಚೇತನ್.
• ಜೂನ್ 25: ಯೋಗೇಶ್.ಎಂ.ಕೆ ಮತ್ತು ಮಂಜುನಾಥ್.
• ಜೂನ್ 26: 22 ವರ್ಷದ ಯುವತಿ ಸುಪ್ರೀತಾ (ಬೆಂಗಳೂರಿನಲ್ಲಿ ನಿಧನ).
• ಜೂನ್ 28: ಗೋವಿಂದ (37).
ತಜ್ಞರ ಕಳಕಳಿಯ ಮಾತು:
ಈ ಸರಣಿ ಸಾವುಗಳ ಬಗ್ಗೆ ಪ್ರತಿಕ್ರಿಯಿಸಿರುವ ಹೃದಯ ತಜ್ಞ ಡಾ. ಆಶ್ರಿತ್ ಶ್ರೀಧರ್, “ಎದೆನೋವು ಅಥವಾ ಹೃದಯಾಘಾತದ ಯಾವುದೇ ಲಕ್ಷಣಗಳು ಕಂಡುಬಂದಾಗ ಅದನ್ನು ನಿರ್ಲಕ್ಷಿಸಬಾರದು. ಗ್ಯಾಸ್ಟ್ರಿಕ್ ಎಂದು ಸುಮ್ಮನಿರುವುದು ಅಪಾಯಕಾರಿ. ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಗಾಗುವುದರಿಂದ ಬಹುತೇಕ ಸಾವುಗಳನ್ನು ತಡೆಯಲು ಸಾಧ್ಯವಿದೆ” ಎಂದು ಜನರಿಗೆ ಕಳಕಳಿಯ ಸಲಹೆ ನೀಡಿದ್ದಾರೆ.
ಒಟ್ಟಿನಲ್ಲಿ, ಹಾಸನ ಜಿಲ್ಲೆಯಲ್ಲಿ ಮುಂದುವರಿದಿರುವ ಈ ಅಕಾಲಿಕ ಮರಣಗಳು, ಬದಲಾದ ಜೀವನಶೈಲಿ ಮತ್ತು ಆರೋಗ್ಯದ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಬೇಕಾದ ಅನಿವಾರ್ಯತೆಯನ್ನು ಸಾರಿ ಹೇಳುತ್ತಿವೆ. ಮೃತರ ಕುಟುಂಬ ವರ್ಗದವರ ಆಕ್ರಂದನ ಮುಗಿಲು ಮುಟ್ಟಿದೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
-
ಸ್ಥಳೀಯ31 minutes agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ1 hour agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















