ಬಿಗ್ ನ್ಯೂಸ್
Heart Attack | ಹಾಸನ ಸರಣಿ ಹೃದಯಾಘಾತ : ಪ್ರಧಾನಿ ಭೇಟಿಗೆ ಸಮಯ ಕೇಳಿದ ಎಂಪಿ ಮಂಜುನಾಥ್ – ಸ್ಟೆಮಿ ಯೋಜನೆ ಮೇಲ್ದರ್ಜೆಗೇರಿಸಲು ಮನವಿ ಸಾಧ್ಯತೆ
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಸದ ಹಾಗೂ ಖ್ಯಾತ ಹೃದಯ ತಜ್ಞ ಡಾ. ಸಿ. ಮಂಜುನಾಥ್ (Heart Attack) ಅವರು, ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ.
ಪ್ರಧಾನಿಯವರ ಭೇಟಿಗಾಗಿ ಈಗಾಗಲೇ ಅವರು ಪ್ರಧಾನಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸದ್ಯದಲ್ಲೇ ಅವರಿಗೆ ಪ್ರಧಾನಿಯವರ ಭೇಟಿಗೆ ಅವಕಾಶ ಸಿಕ್ಕುವ ಸಾಧ್ಯತೆಗಳಿವೆ. ಆ ಭೇಟಿಯಲ್ಲಿ ಹಾಸನ ಜಿಲ್ಲೆಯಲ್ಲಾಗಿರುವ ಹೃದಯಾಘಾತದ ಪ್ರಕರಣಗಳು ಹಾಗೂ ಹೃದಯಾಘಾತಕ್ಕೊಳಗಾದವರಿಗೆ ನೀಡಲಾಗುವ ತುರ್ತು ಚಿಕಿತ್ಸೆಯ ಸ್ಟೆಮಿ ಯೋಜನೆಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು, ಹಾಸನದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಸ್ಟೆಮಿ ಪದ್ಧತಿಯನ್ನು ಜಾರಿಗೊಳಿಸುವ ಸಂಬಂಧ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏನಿದು ಸ್ಟೆಮಿ ಯೋಜನೆ?
ಇದೊಂದು ಹಬ್ ಆ್ಯಂಡ್ ಸ್ಟ್ರೋಕ್ ಮಾಡೆಲ್. ಹೃದಯಾಘಾತಕ್ಕೊಳಗಾಗಿ ಬರುವ ವ್ಯಕ್ತಿಗಳಿಗೆ ತುರ್ತು ವೈದ್ಯಕೀಯ ನೆರವು ನೀಡಿ ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಬಲ್ಲಂಥ ಚಿಕಿತ್ಸಾ ವಿಧಾನಗಳನ್ನು ಇದು ಹೊಂದಿರುತ್ತದೆ. ಸದ್ಯಕ್ಕೆ ರಾಜ್ಯದ 86 ತಾಲೂಕು ಆಸ್ಪತ್ರೆಗಳಲ್ಲಿ ಈ ಸೌಲಭ್ಯವಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಯದೇವ ಹೃದ್ರೋಗ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಇದನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ.
ಇದು ಮಾಡೆಲ್ ಹಬ್ ನಂತೆ ಕಾರ್ಯ ನಿರ್ವಹಿಸುವುದರಿಂದ ಈ ಆಸ್ಪತ್ರೆಗಳಲ್ಲಿ ಯಾವುದೇ ರೋಗಿಯು ಎದೆನೋವು ಎಂದು ಆಗಮಿಸಿದಾಗ ಅವರಿಗೆ ಮೊದಲು ಇಸಿಜಿ ಮಾಡಲಾಗುತ್ತದೆ. ಆ ಇಸಿಜಿಯ ರಿಪೋರ್ಟ್ ಅನ್ನು ಆನ್ ಲೈನ್ ಮೂಲಕ ಜಯದೇವ ವೈದ್ಯರಿಗೆ ರವಾನೆ ಮಾಡಲಾಗುತ್ತದೆ. ಅಲ್ಲಿ ತಜ್ಞ ವೈದ್ಯರು ಆ ವರದಿಯನ್ನು ಪರಿಶೀಲಿಸಿ, ಯಾವ ಚಿಕಿತ್ಸೆ ನೀಡಬೇಕು ಎಂಬುದನ್ನು ತಾಲೂಕು ಆಸ್ಪತ್ರೆಗಳ ಸಿಬ್ಬಂದಿ ಸೂಚಿಸುತ್ತಾರೆ. ಅದು ಒಂದು ಹಂತದ ಚಿಕಿತ್ಸೆಯಾಗಿರುತ್ತದೆ. ಅಲ್ಲಿ ಆ ಚಿಕಿತ್ಸೆಯನ್ನು ನೀಡಿ ಆನಂತರ ಅವರನ್ನು ಅಲ್ಲಿಂದ ಜಯದೇವ ಆಸ್ಪತ್ರೆಗೆ ರವಾನಿಸಲಾಗುತ್ತದೆ.
ಹೃದಯಾಘಾತ & ಹೃದಯ ಸ್ತಂಭನ ವ್ಯತ್ಯಾಸವೇನು?
ಊಟ ಮುಗಿಸಿ ಏಳುವಾಗ ಹೃದಯಸ್ತಂಭನ, ಸಾವು
ಇತ್ತೀಚೆಗೆ ಯುವಜನತೆಯಲ್ಲಿ ಹೃದಯಾಘಾತ, ಹೃದಯಸ್ತಂಭನ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಇದ್ದಕ್ಕಿದ್ದ ಹಾಗೆ ಎದೆನೋವು ಕಾಣಿಸಿಕೊಂಡು, ಕೆಲಹೊತ್ತಿನಲ್ಲೇ ಸಾವನ್ನಪ್ಪುತ್ತಿದ್ದಾರೆ. ಹಾಸನ ನಗರದಲ್ಲಿ ಚೇತನ್ (35) ಎನ್ನುವವರು ಮೃತರು. ಇವರು ಮೂಲತಃ ಕಿಕ್ಕೇರಿಯವರಾಗಿದ್ದು ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಮತ್ತು ಮಗು ಜೊತೆ ವಾಸವಾಗಿದ್ದರು ಎಂದು ಹೇಳಲಾಗಿದೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ24 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















