ಮಂಗಳೂರು
Bantwal-ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ- ಒಂಭತ್ತನೇ ಆರೋಪಿ ಬಂಧನ
ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ.
ಮಂಗಳೂರು, ಜುಲೈ 01: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ.
ಈ ಪ್ರಕರಣದಲ್ಲಿ ಈಗಾಗಲೇ ಕುರಿಯಾಳದ ದೀಪಕ್ (21), ಅಮ್ಮುಂಜೆಯ ಪೃಥ್ವಿರಾಜ್ (21), ಚಿಂತನ್ (19), ಸುಮಿತ್, ರವಿರಾಜ್ ಸೇರಿದಂತೆ ಒಟ್ಟು ಒಂಭತ್ತು ಆರೋಪಿಗಳನ್ನು ಬಂಧಿಸಲಾಗಿದೆ.
ಶಿವಪ್ರಸಾದ್‌ನನ್ನು ಬಂಟ್ವಾಳದ ರಾಯಿ ಎಂಬಲ್ಲಿ ವಶಕ್ಕೆ ಪಡೆದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೋರ್ಟ್ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ24 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















