Connect with us

ಶಿಕ್ಷಣ

Ambika-ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ಈಗ ಮತ್ತಷ್ಟು ‘ಸ್ಮಾರ್ಟ್’!; ವಿದ್ಯಾರ್ಥಿಗಳ ಮನಗೆದ್ದ ಆಧುನಿಕ ವ್ಯವಸ್ಥೆಯೊಂದಿಗಿನ ಅತ್ಯುತ್ಕೃಷ್ಟ ಶಿಕ್ಷಣ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ತಾನು ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಕಾಯಕಕ್ಕೆ ಪೂರಕವಾಗುವ ಹತ್ತು ಹಲವು ವಿನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಂತಹದ್ದರಲ್ಲಿ ಒಂದಾದ ಸ್ಮಾರ್ಟ್ ಬೋರ್ಡ್ ಇದೀಗ ವಿದ್ಯಾರ್ಥಿಗಳ ಕಲಿಕೆಗೆ ನೆಚ್ಚಿನ ಪೂರಕ ಸಂಗತಿಯಾಗಿ ಪರಿಣಮಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಶಿಕ್ಷಣದಲ್ಲಿ ಆಧುನಿಕತೆ ಇಂದಿನ ಅಗತ್ಯ. ಈ ಅನಿವಾರ್ಯತೆಯನ್ನು ಮನಗಂಡ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ತಾನು ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಕಾಯಕಕ್ಕೆ ಪೂರಕವಾಗುವ ಹತ್ತು ಹಲವು ವಿನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಂತಹದ್ದರಲ್ಲಿ ಒಂದಾದ ಸ್ಮಾರ್ಟ್ ಬೋರ್ಡ್ ಇದೀಗ ವಿದ್ಯಾರ್ಥಿಗಳ ಕಲಿಕೆಗೆ ನೆಚ್ಚಿನ ಪೂರಕ ಸಂಗತಿಯಾಗಿ ಪರಿಣಮಿಸಿದೆ.

Ad Widget

Ad Widget alt="Ad Widget"/>

Ad Widget

ಈ ಸ್ಮಾರ್ಟ್ ಬೋರ್ಡ್ ತರಗತಿಗೆ ಬಂದ ನಂತರ ವಿದ್ಯಾರ್ಥಿಗಳ ಕಲಿಕಾ ಸಾಧ್ಯತೆ ಮತ್ತಷ್ಟು ವಿಸ್ತರಿಸಿಕೊಂಡಿದೆ. ಈ ಬೋರ್ಡ್ನಲ್ಲಿ ಪ್ರತಿಯೊಂದನ್ನೂ ಸಚಿತ್ರವಾಗಿ, ವೀಡಿಯೋ ಸಮೇತವಾಗಿ ವಿದ್ಯಾರ್ಥಿಗಳ ಮುಂದೆ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ.

Ad Widget

Ad Widget <> Ad Widget

ಉದಾಹರಣೆಗೆ ಭೂಗೋಳಶಾಸ್ತ್ರ ತರಗತಿಯಲ್ಲಿ ಇಡಿಯ ಭೂಮಿಯನ್ನು 3 ಡಿ ವ್ಯವಸ್ಥೆಯಲ್ಲಿ ಬೇಕಾದಂತೆ ತಿರುಗಿಸುತ್ತಾ ನಿರ್ದಿಷ್ಟ ಜಾಗವನ್ನು ಗುರುತಿಸುತ್ತಾ ಸುಲಭಕ್ಕೆ ಮಕ್ಕಳಿಗೆ ವಿಷಯ ಮನದಟ್ಟು ಮಾಡಿಕೊಡಲು ಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾಯೋಗಿಕ ತರಗತಿಗಳಲ್ಲಿ ತೋರಿಸಲು ಅಸಾಧ್ಯವಾದ ಕೆಲವು ವಿಷಯಗಳನ್ನೂ ಈ ಬೋರ್ಡ್ ಮುಖಾಂತರ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬಹುದು. ಮನುಷ್ಯ ಅಥವ ಪ್ರಾಣಿಗಳ ದೇಹದ ಭಾಗಗಳನ್ನು ಸುಲಭಕ್ಕೆ ಕಾಣಿಸಬಹುದು.

ನಿರ್ವಾತದಲ್ಲಿ ನಡೆಯುವ ಪ್ರಕ್ರಿಯೆಗಳನ್ನು ಇಲ್ಲಿ ತೋರಿಸಬಹುದು. ಜತೆಗೆ ಪ್ರಾಯೋಗಿಕ ತರಗತಿಗಳಲ್ಲಿ ಸಾಧಿಸಿ ತೋರಿಸಿದ ಸಂಗತಿಗಳನ್ನು ಮತ್ತೊಮ್ಮೆ ಸಚಿತ್ರವಾಗಿ ಕಾಣಿಸಿ ಹೆಚ್ಚಿನ ಮಾಹಿತಿ ನೀಡಬಹುದು. ಸಣ್ಣ ತರಗತಿಗಳಲ್ಲಿ ಇಡಿಯ ಪಠ್ಯ ಪುಸ್ತಕವನ್ನೇ ಸ್ಮಾರ್ಟ್ ಬೋರ್ಡಿನಲ್ಲಿ ಅಳವಡಿಸಿ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರೆಸಬಹುದು. ಹೀಗೆ ಸ್ಮಾರ್ಟ್ ಬೋರ್ಡ್ನ ಉಪಯುಕ್ತತೆ ಸಾಗುತ್ತಲೇ ಇರುತ್ತದೆ.
ಈ ಬೋರ್ಡ್ ಕೇವಲ ಸಚಿತ್ರ ಅಥವ ವೀಡಿಯೋ ಪ್ರದರ್ಶನಕ್ಕಷ್ಟೆ ಸೀಮಿತವಲ್ಲ. ಬದಲಾಗಿ ಶಿಕ್ಷಕರು ಬೋರ್ಡ್ನಲ್ಲಿ ಬರೆಯುವಂತೆ ಈ ಸ್ಮಾರ್ಟ್ ಬೋರ್ಡಿನಲ್ಲೂ ಬರೆಯಬಹುದು.

Ad Widget

Ad Widget

ತದನಂತರ ಅಳಿಸಲೂಬಹುದು! ಹೀಗೆ ಬರೆಯುವುದಕ್ಕೆಂದೇ ವಿಶೇಷ ಪೆನ್ ಈ ಸ್ಮಾರ್ಟ್ ಬೋರ್ಡ್ ಜತೆಗೆ ಲಭ್ಯ ಇದೆ. ಅಂದಹಾಗೆ ಮಾಮೂಲಿ ಬೋರ್ಡ್ ಒಂದೇ ತೆರನಾಗಿ ಪ್ರತಿದಿನವೂ ವಿದ್ಯಾರ್ಥಿಗಳಿಗೆ ಕಾಣಿಸಿದರೆ ಈ ಸ್ಮಾರ್ಟ್ ಬೋರ್ಡ್ನ ಬಣ್ಣವನ್ನು ದಿನಕ್ಕೊಂದರಂತೆ, ತರಗತಿಗೊಂದರಂತೆ ಅಥವ ಬೇಕಾದಲ್ಲಿ ಕ್ಷಣ ಕ್ಷಣಕ್ಕೂ ಬದಲಾಯಿಸುತ್ತಲೇ ಇರಬಹುದು! ಹೀಗಾಗಿ ಅಂಬಿಕಾದ ವಿದ್ಯಾರ್ಥಿಗಳಿಗೆ ಕರಿಹಲಗೆಯ ಬದಲಾಗಿ ವರ್ಣರಂಜಿತ ಹಲಗೆಯ ವ್ಯವಸ್ಥೆ ಈ ಬೋರ್ಡ್ ಮುಖಾಂತರ ಸಾಧ್ಯವಾಗಿದೆ.
ಸ್ಮಾರ್ಟ್ ಬೋರ್ಡ್ ಮೂಲಕ ಪಾಠ ಪ್ರವಚನ ನಡೆಯುವುದರಿಂದ ನಮಗೆ ಬೋರ್ ಅನಿಸುವುದಿಲ್ಲ. ಪ್ರತಿಯೊಂದು ವಿಷಯವೂ ಚಿತ್ರ, ವಿಡೀಯೋ ಮುಖಾಂತರ ಸುಲಭಕ್ಕೆ ಅರ್ಥವಾಗುತ್ತದೆ. ಕೇವಲ ಪಾಠ ಮಾಡಿದರೆ ಕೆಲವೊಮ್ಮೆ ಅನುಮಾನಗಳು ಉಳಿಯುತ್ತವೆ. ಆದರೆ ಈ ಸ್ಮಾರ್ಟ್ ಬೋರ್ಡ್ ಮೂಲಕ ಸಚಿತ್ರ ಪಾಠ ಕೇಳಿಸಿಕೊಂಡಾಗ ನಮಲ್ಲಿ ಅನುಮಾನಗಳೇ ಉಳಿಯುವುದಿಲ್ಲ ಎಂಬುದು ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಜಶ್ಮಿ ಅವರ ಅಭಿಪ್ರಾಯ.

ಈ ಸ್ಮಾರ್ಟ್ ಬೋರ್ಡ್ಗೆ ಇಂಟರ್‌ನೆಟ್ ವ್ಯವಸ್ಥೆಯೂ ಜೋಡಣೆಯಾಗಿದೆ. ಹಾಗಾಗಿ ಪಾಠದ ಜತೆ ಜತೆಗೆ ಪೂರಕ ಸಂಗತಿಗಳನ್ನು. ಪಾಠ ಪ್ರವಚನಕ್ಕೆ ಹೆಚ್ಚಿನ ಮೌಲ್ಯ ನೀಡುವ ಪ್ರಚಲಿತ ಸಂಗತಿಗಳನ್ನು ಕಾಣಿಸುವುದಕ್ಕೂ ಸಾಧ್ಯವಾಗುತ್ತಿದೆ. ದೇಶದಲ್ಲಿ ವೈಜ್ಞಾನಿಕ ಸಾಧನೆಗಳಾಗುವಾಗ, ವಿದ್ಯಾರ್ಥಿಗಳಿಗೆ ಗೊತ್ತಿರಬೇಕಾದ ಹತ್ತಾರು ವಿಚಾರಗಳು ಘಟಿಸುವಾಗ ನೇರ ಪ್ರಸಾರದಲ್ಲಿಯೂ ಅವುಗಳನ್ನು ಕಾಣಿಸುವುದಕ್ಕೆ ಈ ಸ್ಮಾರ್ಟ್ ಬೋರ್ಡ್ ನೆರವಾಗುತ್ತಿದೆ. ಈ ಬೋರ್ಡಿನ ಪರದೆ 4 ಕೆ ರೆಸಲ್ಯೂಶನ್ ಹೊಂದಿರುವುದರಿಂದ ಹೆಚ್ಚು ಸ್ಪಷ್ಟವಾಗಿರುವುದಲ್ಲದೆ 180 ಡಿಗ್ರಿ ಕೋನದಿಂದಲೂ ವೀಕ್ಷಿಸಲು ಅನುವು ಮಾಡಿಕೊಡುತ್ತದೆ.

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿರುವ ಈ ಅತ್ಯುತ್ತಮ ಸ್ಮಾರ್ಟ್ ಬೋರ್ಡ್ ಒಂದಕ್ಕೆ ಸರಿ ಸುಮಾರು ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿಗಳಷ್ಟು ವೆಚ್ಚ ತಗಲಿದೆ. ಪ್ರತಿ ತರಗತಿಯಲ್ಲೂ ಒಂದೊAದು ಇಂತಹ ಸ್ಮಾರ್ಟ್ ಬೋರ್ಡ್ಗಳಿವೆ. ಖರ್ಚು ವೆಚ್ಚದ ಮುಖ ನೋಡದೆ ಕೇವಲ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಳವಡಿಸಲಾದ ಈ ಸ್ಮಾರ್ಟ್ ಬೋರ್ಡ್ಗಳು ವಿದ್ಯಾರ್ಥಿಗಳ ಮನಗೆದ್ದಿವೆ. ಹೆಚ್ಚಿನ ಅಂಕ ಗಳಿಸುವಲ್ಲಿ ಸಹಕಾರಿಯಾಗಿವೆ.

ಅಂಬಿಕಾ ಶಿಕ್ಷಣ ಸಂಸ್ಥೆಗಳು ಹೀಗೆ ಹೊಸತನಕ್ಕೆ ಅಡಿಯಿರಿಸಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ತರಗತಿಗಳಿಗೆ ಎ.ಸಿ. ಅಳವಡಿಸುವ ಮುಖೇನ ಹವಾನಿಯಂತ್ರಿತ ತರಗತಿಗಳುಳ್ಳ ಪುತ್ತೂರಿನ ಮೊದಲ ಶಿಕ್ಷಣ ಸಂಸ್ಥೆ ಎಂಬ ಅಗ್ಗಳಿಕೆಗೆ ಪಾತ್ರವಾಗಿತ್ತು. ತನ್ನ ಆವರಣದಲ್ಲಿ ಸುಸಜ್ಜಿತ ಈಜು ಕೊಳವೊಂದನ್ನು ರೂಪಿಸಿ ಈಜು ಕೊಳ ಹೊಂದಿದ ತಾಲೂಕಿನ ಪ್ರಥಮ ಸಂಸ್ಥೆ ಎಂದು ಗುರುತಿಸಿಕೊಂಡಿತ್ತು. ಅಂತಹ ಸಾಲಿಗೆ ಇದೀಗ ಸ್ಮಾರ್ಟ್ ಬೋರ್ಡ್ಗಳೂ ಸೇರಿವೆ.

ಶಿಕ್ಷಣದಲ್ಲಿ ಸಂಸ್ಕಾರ, ದೇಶಭಕ್ತಿ, ಧರ್ಮ ಜಾಗೃತಿಯನ್ನು ಮೂಡಿಸುವುದರ ಜತೆಗೆ ಆಧುನಿಕ ವ್ಯವಸ್ಥೆಗಳನ್ನೂ ಕಾಲಕಾಲಕ್ಕೆ ಕಲ್ಪಿಸಿಕೊಡುವುದಕ್ಕೆ ಅಂಬಿಕಾ ಸಂಸ್ಥೆ ಬದ್ಧವಾಗಿದೆ. ನಮ್ಮ ಮೇಲೆ ವಿಶ್ವಾಸವಿಟ್ಟು ಹೆತ್ತವರು ತಮ್ಮ ಮಕ್ಕಳನ್ನು ನಮ್ಮ ಕೈಗೆ ಒಪ್ಪಿಸುತ್ತಾರೆ. ಹೀಗಿರುವಾಗ ಆ ಮಕ್ಕಳಿಗೆ ಸಹಾಯಕವಾಗುವ ಯಾವುದೇ ಸಂಗತಿಯನ್ನಾದರೂ ನೆರವೇರಿಸಬೇಕಾದದ್ದು ನಮ್ಮ ಕರ್ತವ್ಯ ಎಂಬುದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತು.

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!