ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ
ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಮ್ಮೆಯ ಅಂಗಸಂಸ್ಥೆಯಾಗಿದೆ. ಈ ಸಂಸ್ಥೆಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಕಾರಣೀಭೂತರಾದ ಹಿರಿಯರಾದ ಉರಿಮಜಲು ಕೆ. ರಾಮ ಭಟ್ಟರ ಸವಿನೆನಪಿಗಾಗಿ 2025 ನೇ ಜುಲೈ 2ರಂದು ಕಾಲೇಜಿನಲ್ಲಿ ನವೀಕೃತ ಉರಿಮಜಲು ಕೆ. ರಾಮ ಭಟ್ ಸಭಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಜೊತೆಯಲ್ಲಿ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವವನ್ನು ಕೂಡ ನಡೆಸಲಾಯಿತು.
ಪುತ್ತೂರು : ಪುತ್ತೂರಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡುವ ಗುರಿಯನ್ನು ಇರಿಸಿಕೊಂಡು 1986ರಲ್ಲಿ ಸ್ಥಾಪನೆಗೊಂಡ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಮ್ಮೆಯ ಅಂಗಸಂಸ್ಥೆಯಾಗಿದೆ. ಈ ಸಂಸ್ಥೆಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಕಾರಣೀಭೂತರಾದ ಹಿರಿಯರಾದ ಉರಿಮಜಲು ಕೆ. ರಾಮ ಭಟ್ಟರ ಸವಿನೆನಪಿಗಾಗಿ 2025 ನೇ ಜುಲೈ 2ರಂದು ಕಾಲೇಜಿನಲ್ಲಿ ನವೀಕೃತ ಉರಿಮಜಲು ಕೆ. ರಾಮ ಭಟ್ ಸಭಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಜೊತೆಯಲ್ಲಿ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವವನ್ನು ಕೂಡ ನಡೆಸಲಾಯಿತು.
ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀರಘುನಾಥರಾವ್ ಮಾಲಕರು ರಾಜೇಶ್ ಪವರ್ ಪ್ರೆಸ್ ಪುತ್ತೂರು ನೂತನವಾಗಿ ನವೀಕರಿಸಿದ ಉರಿಮಜಲು ಕೆ ರಾಮ ಭಟ್ ಸಭಾಂಗಣದ ಉದ್ಘಾಟನೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ “ಇದೀಗ ಈ ಸಭಾಂಗಣದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಆಗಿದೆ. ರಾಮ ಭಟ್ಟರು ಅಜಾತಶತ್ರುವಾಗಿದ್ದರು. ಸಂಸ್ಥೆಗಳನ್ನು ಬೆಳೆಸುವಲ್ಲಿ ಹಗ್ಗದಂತೆ ಕೆಲಸ ಮಾಡಿದ್ದಾರೆ. ಈ ವಾತಾವರಣದಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ಕೋದಂಡನ ಶಕ್ತಿಗಳು ಉದ್ಭವಿಸಿ ದೇಶವನ್ನು ಹಳಿಗೆ ತರಲಿ” ಎಂದು ಶುಭ ಹಾರೈಸಿದರು…
ಇನ್ನೋರ್ವ ಅತಿಥಿಗಳಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ತನ್ನ ಅನುಭವಗಳನ್ನು ಹಂಚಿಕೊಳ್ಳುತ್ತಾ “ರಾಮನ ಹೆಸರಿಗೆ ಗೌರವ ತರುವಲ್ಲಿ ಉರಿಮಜಲು ಕೆ. ರಾಮ ಭಟ್ಟರ ಜೀವನವು ಸಾರ್ಥಕವಾಯಿತು. ಸಭಾಭವನದ ಲೋಕಾರ್ಪಣೆಯಿಂದ ರಾಮಭಟ್ಟರು ಮಾಡಿದ ಕೆಲಸಗಳನ್ನು ಮತ್ತೆ ಮತ್ತೆ ನೆನಪು ಮಾಡುತ್ತಾ ನಿರಂತರವಾಗಿ ನಡೆಯುವಂತಾಗಬೇಕು. ಸಾಮಾಜಿಕ ನಿರ್ಣಯಕ್ಕೆ ಬದ್ಧರಾಗಿದ್ದ ಅನೇಕ ಹಿರಿಯರ ಪೈಕಿ ರಾಮ ಭಟ್ಟರು ಒಬ್ಬರಾಗಿದ್ದರು. ಸ್ವಂತಕ್ಕೆ ಅಪೇಕ್ಷಿಸದೆ ಸಮಾಜಕ್ಕಾಗಿ ಬದುಕಿದ ರಾಮ ಭಟ್ಟರು ಬಹಳ ಎತ್ತರದಲ್ಲಿದ್ದಾರೆ” ಎಂದರು.
ಅತಿಥಿಗಳಾದ ರಂಗಮೂರ್ತಿ ಎಸ್.ಆರ್. ಮಾತನಾಡುತ್ತಾ “ಪುತ್ತೂರು ವಿದ್ಯಾವರ್ಧಕ ಸಂಘದ ಬೆಳವಣಿಗೆಗೆ ಮೂಲ ಪ್ರೇರಣೆ ರಾಮಭಟ್ಟರು. ವಿದ್ಯಾಸಂಸ್ಥೆಗಳನ್ನು ಅವರು ಭದ್ರಬುನಾದಿಯೊಂದಿಗೆ ಹಾಕಿಕೊಟ್ಟಿದ್ದಲ್ಲದೆ ಹಲವಾರು ಕಡೆಯಲ್ಲಿ ವಿಸ್ತರಿಸಿದ್ದಲ್ಲದೆ ಗುಣಮಟ್ಟದಲ್ಲಿ ಎತ್ತರಕ್ಕೇರಿಸಿ ಬೆಳೆಸುವಲ್ಲಿ ಕಾರಣಿಭೂತರಾದವರು. ಅವರ ಮಾರ್ಗದರ್ಶನದ ದಾರಿಯಲ್ಲಿ ನಡೆಯುವುದೇ ಅವರನ್ನು ನೆನಪು ಮಾಡುವ ಸ್ಥಿತಿ” ಎಂದು ನೆನಪುಗಳನ್ನು ಹಂಚಿಕೊಂಡರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ “ರಾಷ್ಟ್ರ ನಿರ್ಮಾಣದ ಕನಸಿನ ಮಾನಸಿಕತೆಯನ್ನು ಹೊತ್ತ ಕಾಲೇಜು ವಿವೇಕಾನಂದ ಪಾಲಿಟೆಕ್ನಿಕ್. ನಮ್ಮ ಕಾರ್ಯ ಪದ್ಧತಿಗೆ ಸರಿಯಾಗಿ ನಡೆದಲ್ಲಿ ಸಮಾಜದಲ್ಲಿ ಉತ್ತಮ ಸಂಸ್ಕೃತಿಯ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವಲ್ಲಿ ನಮ್ಮ ಸಂಸ್ಥೆಯಿಂದ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ ಎಂಬ ಭರವಸೆಯನ್ನು ನಾವು ಕೊಡುತ್ತೇವೆ” ಎಂದು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಾ ನುಡಿದರು.
ಕಾರ್ಯಕ್ರಮದ ಅಧ್ಯಕ್ಷರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಆದ ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡುತ್ತಾ ” ರಾಮ್ ಭಟ್ಟರು ಹಿಂದುತ್ವಕ್ಕೋಸ್ಕರ ಬದುಕಿದ ವ್ಯಕ್ತಿ. ಈ ಸಭಾಂಗಣಕ್ಕೆ ಅವರ ಹೆಸರನ್ನು ಇಟ್ಟಿರುವುದು ಪಾಲಿಟೆಕ್ನಿಕ್ ನ ಕಿರೀಟಕ್ಕೆ ಒಂದು ಗರಿ ಸೇರಿಸಿದಂತಾಗಿದೆ. ರಾಜಕೀಯ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ರಾಮ ಭಟ್ಟರ ಕೊಡುಗೆ ಅಪಾರ. ಶೈಕ್ಷಣಿಕ ಕ್ಷೇತ್ರದಲ್ಲಿ ಒಂದು ಬದಲಾವಣೆ ತರುವಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. ಪ್ರಾಮಾಣಿಕವಾಗಿ ಮುಂದುವರಿಸುವ ಸಲುವಾಗಿ ಸಿಕ್ಕಿದ ಭಟ್ರು ರಾಮಭಟ್ಟರು. ಈ ಸಭಾಂಗಣಕ್ಕೆ ಅವರ ಹೆಸರನ್ನಿಟ್ಟಿರೋದು ನಮಗೆಲ್ಲರಿಗೂ ಗೌರವವನ್ನು ತಂದುಕೊಟ್ಟಿದೆ. ರಾಷ್ಟ್ರೀಯ ಚಿಂತನೆಗಳನ್ನು ಇಟ್ಟುಕೊಂಡು ಕುಟುಂಬದ ಸಮಾಜದ ಉನ್ನತಿಗಾಗಿ ಶ್ರಮಿಸುವ ಪ್ರೇರಣೆಯ ಕೇಂದ್ರ ಈ ವಿದ್ಯಾಕೇಂದ್ರ. ಎಲ್ಲಾ ರೀತಿಯ ತಂತ್ರಗಾರಿಕೆಯನ್ನು ಕಲಿತು ರಾಷ್ಟ್ರ ಮೊದಲು ಎಂಬ ಚಿಂತನೆಯನ್ನು ಇಟ್ಟುಕೊಂಡು ನಾವೆಲ್ಲ ಒಟ್ಟು ಸೇರಿ ಒಂದು ವೈಜ್ಞಾನಿಕ ಬದಲಾವಣೆ ತರೋಣ” ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಖಜಾಂಜಿಯಾದ ನರಸಿಂಹ ಪೈ, ಸದಸ್ಯರುಗಳಾದ ರವಿ ಮುಂಗ್ಲಿ ಮನೆ, ಈಶ್ವರ ಚಂದ್ರ ಉಷಾಮಳಿಯ, ಸನತ್ ಕುಮಾರ್, ಅಚ್ಯುತ ಪ್ರಭು ಹಾಗೂ ಹಿರಿಯರಾದ ಕೆ ವಿ ನಾರಾಯಣ್ ವತ್ಸಲರಾಜ್, ಶ್ರೀನಿವಾಸ್ ಪೈ, ಬಲರಾಮ್ ಆಚಾರ್ಯ, ಮುಗುರೋಡಿ ಬಾಲಕೃಷ್ಣ ರೈ, ವೇದವ್ಯಾಸ, ಕಮಲಾ ಭಟ್, ಮಹೇಶ್ ಪ್ರಸನ್ನ, ರವೀಂದ್ರ ರೈ, ಸಂಧ್ಯಾ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ್ವಾಗತವನ್ನು ನೆರವೇರಿಸಿದ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಮುರಳೀಧರ ಯಸ್ ಮಾತನಾಡುತ್ತ “ಉರಿಮಜಲು ಕೆ ರಾಮ ಭಟ್ಟರು ನಮ್ಮೆಲ್ಲರ ಪ್ರೇರಕ ಶಕ್ತಿ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಸ್ಥಾಪಿತವಾದ ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ವಿದ್ಯಾಭ್ಯಾಸ ನೀಡಿ ದೇಶಭಕ್ತ ಪ್ರಜೆಯನ್ನಾಗಿಸುವುದೇ ನಮ್ಮ ಧ್ಯೇಯ” ಎಂದರು.
ಧನ್ಯವಾದ ಸಮರ್ಪಣೆಯನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ರವಿರಾಮ ಎಸ್ ಇವರು ನಡೆಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಹಿರಿಯ ಉಪನ್ಯಾಸಕಿ ಜಯಲಕ್ಷ್ಮೀ ಎಸ್. ಪ್ರಾರ್ಥಿಸಿದರು. ಸಂಪೂರ್ಣ ಕಾರ್ಯಕ್ರಮದ ನಿರೂಪಣೆಯನ್ನು ಆಟೋಮೊಬೈಲ್ ವಿಭಾಗದ ಉಪನ್ಯಾಸಕರಾದ ಗುರುರಾಜ್ ಹಾಗೂ ವಿಜ್ಞಾನ ವಿಭಾಗದ ಉಪನ್ಯಾಸಕಿಯಾದ ಸಹನಾ ಬಿ ಎಸ್ ನೆರವೇರಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಬಿಗ್ ನ್ಯೂಸ್21 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು23 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ21 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು22 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ23 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ22 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ3 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















