ನಿಧನ ವಾರ್ತೆ
Mangalore-ಮಂಗಳೂರು: ಯುವ ಇನ್ಫೋಸಿಸ್ ಉದ್ಯೋಗಿ ಹೃದಯಾಘಾತದಿಂದ ನಿಧನ
ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಇಂದು ಬೆಳಗ್ಗೆ ಕೇರಳದ ವಯನಾಡ್‌ನಲ್ಲಿ ಹೃದಯಾಘಾತದಿಂದ ನಿಧನರಾದರು.
ಮಂಗಳೂರು: ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಇಂದು ಬೆಳಗ್ಗೆ ಕೇರಳದ ವಯನಾಡ್‌ನಲ್ಲಿ ಹೃದಯಾಘಾತದಿಂದ ನಿಧನರಾದರು.
ಕೇರಳದ ವಯನಾಡ್ ನಲ್ಲಿ ಇನ್ಫೋಸಿಸ್ ನ ಉದ್ಯೋಗಿಯಾಗಿದ್ದ ಮುಹಮ್ಮದ್ ಹಾಶೀರ್ ಅವರು ಮಂಗಳೂರಿನ ಪ್ರಕಾಶ್ ಬೀಡಿ ಉದ್ಯಮಿ G.B. ಹಸನಬ್ಬ ( G.B. ಬಾವ ) ಹಾಗೂ ಮುಲಾರಪಟ್ಣ ಮರ್ಹೂಮ್ ಹಸನ್ ಮುಸ್ಲಿಯಾರ್ ಅವರ ಮಗಳ ಹಿರಿಯ ಮಗ.
ಮೃತರು ಪತ್ನಿ, ಒಂದು ವರ್ಷದ ಹೆಣ್ಣು ಮಗು, ತಂದೆ-ತಾಯಿ ಹಾಗೂ ಅನೇಕ ಬಂಧು-ಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
Sullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ನಿಧನ ವಾರ್ತೆ
Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ
ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.
ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.
ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.
ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ನಿಧನ ವಾರ್ತೆ
Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
-
ಮಂಗಳೂರು21 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್22 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
Uncategorized17 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಮಂಗಳೂರು22 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ನಿಧನ ವಾರ್ತೆ4 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಕ್ರೀಡೆ21 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಮಂಗಳೂರು21 hours agoMangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
-
ಸ್ಥಳೀಯ3 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!




















