Connect with us

ಮಂಗಳೂರು

Mangalore-BIG BREAKING: ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಇಂದು ಮತ್ತೆ ವಿಚಾರಣೆಗೆ ಬಂದ ನಿರೀಕ್ಷಣಾ ಜಾಮೀನು ಅರ್ಜಿ; ಸಂತ್ರಸ್ತೆಯ ಪರ ಆಕೆಯ ತಾಯಿ ಕೋರ್ಟಿಗೆ ಹಾಜರು – ನ್ಯಾಯಾಲಯದಲ್ಲಿ ಇವತ್ತು ಏನೇನಾಯಿತು ?

Published

on



Ad Widget

Ad Widget

Ad Widget

Ad Widget

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಮಂಗಳೂರು, ಜುಲೈ 03: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾದ ಸಂತ್ರಸ್ತೆಯ ತಾಯಿ, “ನನ್ನ ಮಗಳು ಮೂರು ದಿನಗಳ ಹಿಂದೆಯಷ್ಟೇ ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯಲ್ಲಿದ್ದಾಳೆ. ಈ ಕಾರಣದಿಂದ ಆಕೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಆರೋಪಿಗೆ ಜಾಮೀನು ನೀಡಬಾರದು,” ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.

Ad Widget

Ad Widget <> Ad Widget

ಸಂತ್ರಸ್ತೆಯ ತಾಯಿಯ ಆಕ್ಷೇಪಣೆಯನ್ನು ಪರಿಗಣಿಸಿದ ಸರ್ಕಾರಿ ಅಭಿಯೋಜಕರು (PP), ಈ ಕುರಿತು ಲಿಖಿತ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು, ಅರ್ಜಿಯ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು.



Ad Widget

ಪ್ರಕರಣದ ಹಿನ್ನೆಲೆ:
ಆರೋಪಿ ಶ್ರೀಕೃಷ್ಣ ಜೆ. ರಾವ್ ವಿರುದ್ಧ ಜೂನ್ 24 ರಂದು ಪ್ರಕರಣ ದಾಖಲಾಗಿದ್ದು, ಅಂದಿನಿಂದ ಬಂಧನ ಭೀತಿಯಲ್ಲಿರುವ ಆತ ತಲೆಮರೆಸಿಕೊಂಡಿದ್ದಾನೆ. ಕಳೆದ 10 ದಿನಗಳಿಂದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Click to comment

Leave a Reply

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಮಂಗಳೂರು

Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

Ad Widget

Ad Widget <> Ad Widget

“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.



Ad Widget

ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.

Ad Widget

Ad Widget

ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.

“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading