ಸ್ಥಳೀಯ
FIR-ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪ; ಈಶ್ವರಪ್ಪ, ಪುತ್ರ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ಎಫ್‌ಐಆರ್
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದೆ. ಈ ಬೆಳವಣಿಗೆಯಿಂದ ಈಶ್ವರಪ್ಪ ಕುಟುಂಬಕ್ಕೆ ಕಾನೂನು ಸಂಕಷ್ಟ ಎದುರಾಗಿದೆ.
ಶಿವಮೊಗ್ಗ, ಜುಲೈ 3: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದೆ.
ವಕೀಲ ಬಿ. ವಿನೋದ್ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತನಿಖೆಗೆ ಆದೇಶಿಸಿತ್ತು. ಇದರಂತೆ, ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ, ಜುಲೈ 4ರಂದು ವಿಚಾರಣೆಗೆ ಹಾಜರಾಗುವಂತೆ ಈಶ್ವರಪ್ಪ ಕುಟುಂಬಕ್ಕೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಬೆಳವಣಿಗೆಯಿಂದ ಈಶ್ವರಪ್ಪ ಕುಟುಂಬಕ್ಕೆ ಕಾನೂನು ಸಂಕಷ್ಟ ಎದುರಾಗಿದೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13(1)(d), 13(1)(e), ಜೊತೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120(B) ಮತ್ತು 420ರ ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಶಿವಮೊಗ್ಗ ಲೋಕಾಯುಕ್ತವು ನಾಳೆಯೇ (ಜು. 4) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆದರೆ, ಈಶ್ವರಪ್ಪ ಕುಟುಂಬವು ಪ್ರಸ್ತುತ ಕೇರಳ ಪ್ರವಾಸದಲ್ಲಿದೆ.
ವಕೀಲ ಬಿ. ವಿನೋದ್ ಸಲ್ಲಿಸಿದ ಖಾಸಗಿ ದೂರಿನ ವಿಚಾರಕ್ಕೆ ಸಂಬಂಧಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 24ರಂದು ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಈ ತನಿಖೆಗೆ ಡಿವೈಎಸ್‌ಪಿ ಚಂದ್ರಶೇಖರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಕಾನೂನು ತಜ್ಞರ ಸಲಹೆ ಪಡೆದ ಲೋಕಾಯುಕ್ತ ಪೊಲೀಸರು ಈಗ ಎಫ್‌ಐಆರ್ ದಾಖಲಿಸಿ, ತನಿಖೆಯನ್ನು ಮುಂದುವರೆಸಿದ್ದಾರೆ.
ಪ್ರಕರಣದ ಹಿನ್ನೆಲೆ
ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(1)(d), 13(1)(e) ಮತ್ತು ಭಾರತೀಯ ದಂಡ ಸಂಹಿತೆ 1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ವಿನೋದ್ ಅವರು 2026ರಲ್ಲಿ ಸಲ್ಲಿಸಿದ ಖಾಸಗಿ ದೂರನ್ನು ಲೋಕಾಯುಕ್ತ ನ್ಯಾಯಾಲಯವು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಿ, ದೂರಿನ ಮರುಪರಿಶೀಲನೆಗೆ ಆದೇಶಿಸಿತ್ತು.
ದಕ್ಷಿಣ ಕನ್ನಡ
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.
ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್‌ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
-
ಕ್ರೈಂ16 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ16 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ14 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ10 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್16 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ11 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ15 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















