ಅಪರಾಧ
Mangalore-ಮಂಗಳೂರು: ಪೋಷಕರ ದೂರಿನಿಂದ ಡ್ರಗ್ಸ್ ಜಾಲ ಭೇದ; ಐವರು ಆರೋಪಿಗಳ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ನಡೆದಿದೆ. ಮಂಗಳೂರು ಸೆನ್ ಕ್ರೈಮ್ ಠಾಣೆಯ ಪೊಲೀಸರು, ಪೋಷಕರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ವ್ಯವಹಾರದ ಜಾಲವನ್ನು ಬಯಲಿಗೆಳೆದಿದ್ದಾರೆ.
ಮಂಗಳೂರು, ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ನಡೆದಿದೆ.
ಈ ದೂರಿನಿಂದ ಒಳ್ಳೆಯ ಫಲಿತಾಂಶ ದೊರೆತಿದ್ದು, ನೂರಾರು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲವೊಂದು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದೆ. ಮಂಗಳೂರು ಸೆನ್ ಕ್ರೈಮ್ ಠಾಣೆಯ ಪೊಲೀಸರು, ಪೋಷಕರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ವ್ಯವಹಾರದ ಜಾಲವನ್ನು ಬಯಲಿಗೆಳೆದಿದ್ದಾರೆ.
ಪಡುಶೆಡ್ಡೆ ಗ್ರಾಮದ ಹಾಲಾಡಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, 200ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಾದ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ಮತ್ತು ವಿಘ್ನೇಶ್ ಕಾಮತ್ (24) ಗಾಂಜಾವನ್ನು ಸಣ್ಣ ಪ್ಯಾಕೆಟ್ಗಳಲ್ಲಿ ಪ್ಯಾಕ್ ಮಾಡಿ ಮಾರಾಟಕ್ಕೆ ಸಿದ್ಧಪಡಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಪೊಲೀಸರು 5.20 ಲಕ್ಷ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಗಾಂಜಾವನ್ನು ಪ್ಯಾಕೆಟ್ಗೆ 1000 ರೂ. ದರದಲ್ಲಿ ಮಂಗಳೂರು ನಗರದ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಗಾಂಜಾದ ಮೂಲದ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರೆ.
ಪೊಲೀಸ್ ಆಯುಕ್ತರಿಂದ ಪೋಷಕರಿಗೆ ಮನವಿ
ಎರಡು ದಿನಗಳ ಹಿಂದೆ ಇಬ್ಬರು ಪೋಷಕರು ತಮ್ಮ ಮಕ್ಕಳು ಡ್ರಗ್ಸ್ಗೆ ದಾಸರಾಗಿದ್ದಾರೆಂದು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ತನಿಖೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಫಲಿತಾಂಶವಾಗಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
“ಒಬ್ಬ ಪೋಷಕರ ದೂರಿನಿಂದ 200 ಜನರಿಗೆ ಡ್ರಗ್ಸ್ ಪೂರೈಕೆ ತಡೆಯಲಾಯಿತು. ಹತ್ತು ಜನ ದೂರು ಕೊಟ್ಟರೆ, 2000 ಜನರಿಗೆ ಡ್ರಗ್ಸ್ ಸರಬರಾಜು ತಡೆಗಟ್ಟಬಹುದು. ಸಾರ್ವಜನಿಕರು ಖಚಿತ ಮಾಹಿತಿ ನೀಡಿದರೆ, ಮಂಗಳೂರನ್ನು ಡ್ರಗ್ಸ್-ಮುಕ್ತವಾಗಿಸಬಹುದು. ಡ್ರಗ್ಸ್ಗೆ ಒಳಗಾದವರನ್ನು ಸಂತ್ರಸ್ತರೆಂದು ಪರಿಗಣಿಸಿ, ಪೂರೈಕೆದಾರರನ್ನು ಜೈಲಿಗೆ ಕಳುಹಿಸುತ್ತೇವೆ” ಎಂದು ಆಯುಕ್ತರು ಭರವಸೆ ನೀಡಿದ್ದಾರೆ.
ಬಂಧಿತ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಮುಂದೆ ಡ್ರಗ್ಸ್ ವ್ಯವಹಾರಕ್ಕೆ ಕಡಿವಾಣ ಹಾಕಲು ಪೊಲೀಸರು ಕಟಿಬದ್ಧರಾಗಿದ್ದಾರೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ21 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್5 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು21 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















