Connect with us

ಅಪರಾಧ

ಉಡುಪಿ : ತಾಯಿ –ಮಗಳ ನಿಗೂಢ ಸಾವಿನ ಪ್ರಕರಣ | ಪತಿ ತೊರೆದ ಮಹಿಳೆಯ ಬಗ್ಗೆ ಪೊಸೆಸಿವ್‌ ಆಗಿ ಹತ್ಯೆ – ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ಉಡುಪಿ, (ಮೇ.10):  ಹಲವು ಅನುಮಾನಗಳನ್ನು ಹುಟ್ಟು ಹಾಕಿದ ಉಡುಪಿಯ ಹಿರಿಯಡ್ಕ ಸಮೀಪದ ಅತ್ರಾಡಿಯ ಮನೆಯೊಂದರಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತೆಯಾದ ಪ್ರಕರಣವನ್ನು ಪೊಲೀಸರು 48 ಗಂಟೆಯೊಳಗಡೆ  ಬೇಧಿಸಿದ್ದಾರೆ. ಆರಂಭದಲ್ಲಿ  ತಾಯಿಯು ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯ ಮೂಡಿತ್ತಾದರು ಪೊಲೀಸ್‌ ತನಿಖೆಯಲ್ಲಿ ಇದು ಜೋಡಿ ಕೊಲೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು.   

Ad Widget

Ad Widget

Ad Widget

Ad Widget

ಮಣಿಪಾಲ ಹೊರವಲಯದಲ್ಲಿರುವ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ವಾಸಿಸುತ್ತಿದ್ದ ಹಾಗೂ ಮಣಿಪಾಲದ ಆಸ್ಪತ್ರೆಯಲ್ಲಿ ಸ್ಟಾಪ್‌ ನರ್ಸ್‌ ಆಗಿದ್ದ  ಚೆಲುವಿ ( 28 ವರ್ಷ ) ಹಾಗೂ ಆಕೆಯ 10 ವರ್ಷದ ಮಗಳು ಪ್ರಿಯಾ ಮೃತಪಟ್ಟವರು.  ಚೆಲುವಿಯವರ ದೂರದ ಸಂಬಂಧಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಹರೀಶ್ ಆರ್. ಯಾನೆ ಗಣೇಶ (29) ಬಂಧಿತ ಆರೋಪಿ.    ಆರೋಪಿಗೆ ಚೆಲುವಿಯೆಡೆಗಿದ್ದ ವಿಪರೀತ ಪೊಸೆಸಿವ್‌ʼನೆಸ್‌ ( ಕೈ ತಪ್ಪಿ ಹೋಗಬಹುದು ಎಂಬ ಭಯ) ಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ

Ad Widget

Ad Widget alt="Ad Widget"/>

Ad Widget

 ಇಬ್ಬರು ಮಕ್ಕಳ ತಾಯಿಯಾಗಿರುವ ಚೆಲುವಿಯವರು ಪತಿ ಆಕೆಯನ್ನು ತೊರೆದ ಬಳಿಕ  ಮಕ್ಕಳ ಜತೆ  ಸರಕಾರದಿಂದ ಮಂಜೂರಾದ 3 ಸೆನ್ಸ್ ಭೂಮಿಯಲ್ಲಿ ಮನೆ ನಿರ್ಮಿಸಿ ಸ್ವಾವಲಂಭಿ ಜೀವನ ಸಾಗಿಸುತ್ತಿದ್ದರು. ತಮಿಳುನಾಡಿನ ಸಮಗಾರ ಸಮುದಾಯದ ಕೆಲ ಕುಟುಂಬಗಳು ಹಲವಾರು ವರ್ಷಗಳಿಂದ ಈ ಪರಿಸರದಲ್ಲಿ ವಾಸಮಾಡುತ್ತಿದ್ದು  ಚೆಲುವಿ ಕೂಡ ಇದೆ ಕುಟುಂಬಕ್ಕೆ ಸೇರಿದವರು.

Ad Widget

Ad Widget <> Ad Widget

 ಚೆಲುವಿಯವರ ಮನೆಯಿಂದ ಕೂಗಳತೆಯ ದೂರದಲ್ಲಿ ತಾಯಿಯ ಮನೆ ಇದೆ. ಮೇ 8 ರಂದು  ತಾಯಿಯ  ಸಂಬಂಧಿಯೊಬ್ಬರು ಭದ್ರಾವತಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರು ಅಲ್ಲಿಗೆ  ತೆರಳಿದ್ದರು. ತಾಯಿಯ ಜೊತೆ ಚೆಲುವಿಯ ಮಗನು ಕೂಡ ಹೋಗಿದ್ದ. ಹಾಗಾಗಿ ಈ ಪುಟ್ಟ ಮನೆಯಲ್ಲಿ ಆ ನತದೃಷ್ಟ ದಿನದಂದು  ತಾಯಿ ಮತ್ತು ಮಗಳು ಮಾತ್ರ ವಾಸವಾಗಿದ್ದರು.

 ಸೋಮವಾರ ಬೆಳಿಗ್ಗೆ ಚೆಲುವಿಯವರ ತಾಯಿಆಕೆಗೆ  ಕರೆ ಮಾಡಿದ್ದು,   ಕರೆ ಸ್ವೀಕರಿಸದಿದ್ದಾಗ  ಹತ್ತಿರದ ಸಂಬಂಧಿಕರಲ್ಲಿ ಮನೆಗೆ ಹೋಗಿ ನೋಡುವಂತೆ ತಿಳಿಸಿದ್ದಾರೆ.  ಮನೆಯವರು ಬಂದು  ಬಾಗಿಲು ತೆರೆದು ನೋಡಿದಾಗ ತಾಯಿ ಮತ್ತು ಮಗಳ ಶವ ಕೋಣೆಯೊಂದರಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡು ಬಂದಿದೆ.

Ad Widget

Ad Widget

 ಇದೊಂದು ಆತ್ಮಹತ್ಯೆ ಪ್ರಕರಣ ಇರಬಹುದು ಎಂದು ಆರಂಭದಲ್ಲಿ ಶಂಕೆ ವ್ಯಕ್ತವಾಗಿತ್ತು.  ಶವವನ್ನು ಸೂಕ್ಷ್ಮವಾಗಿ ಗಮನಿಸಿದಾಗ  ಕುತ್ತಿಗೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿತ್ತು.ಹಾಗೂ ಮನೆಯಲ್ಲಿದ್ದ ಚಿನ್ನಾಭರಣ, ಫೋಟೋಗಳು, ಮತ್ತು ಮೊಬೈಲ್ ಕೂಡ  ಕಾಣೆಯಾಗಿತ್ತು. ಹೀಗಾಗಿ  ಇದೊಂದು ಕೊಲೆ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದರು. ಅಲ್ಲದೇ  ರಾತ್ರಿಯ ನಂತರ ಮನೆಗೆ ಬಂದ ಪರಿಚಯಸ್ಥರೇ  ಯಾರೋ ಈ ಕೃತ್ಯವನ್ನು ಎಸಗಿದ್ದಾರೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಗಮನಕ್ಕೆ ಬಂದಿತ್ತು.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಳಿಸರು ಹತ್ಯೆ ಬೆಳಕಿಗೆ ಬಂದ 48 ಗಂಟೆಯೊಳಗಡೆ ಆರೋಪಿ ಹರೀಶನನ್ನು ಹೆಡೆಮುರಿ ಕಟ್ಟಿದ್ದಾರೆ.  ಚೆಲುವಿಯ ದೂರದ ಸಂಬಂಧಿಯಾಗಿದ್ದ ಹರೀಶ್‌ ಗೆ  ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.  ಈಕೆ ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು  ಆತ ಆಗಾಗ ಆಕೆಯ ಮನೆಗೆ ಬರುತ್ತಿದ್ದ ಹಾಗೂ   ಚೆಲುವಿಯನ್ನು ಮದುವೆ ಆಗುವಂತೆ ಒತ್ತಾಯಿಸುತ್ತಿದ್ದ. ಆದರೇ ಇದಕ್ಕೆ ಚೆಲುವಿ ಸಕಾರತ್ಮಕವಾಗಿ ಸ್ಪಂದಿಸಿರಲಿಲ್ಲ ಎನ್ನಲಾಗಿದೆ.

ಇತ್ತೀಚೆಗೆ ಚೆಲುವಿಯು ಬೇರೆ ಗಂಡಸರೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದಾಳೆ ಎಂಬ ಸಂಶಯ ಹರೀಶ್ ಗೆ ಬಂದಿತ್ತು. ಇದು ಅವನ ಅಸಹನೆಗೂ ಕಾರಣವಾಗಿತ್ತು.  ಮೇ 8ರಂದು ರಾತ್ರಿಯು ಹರೀಶ್‌  ಚೆಲುವಿಯ  ಮನೆಗೆ ಬಂದಿದ್ದ. ಅಲ್ಲಿ ಊಟ ಕೂಡ ಮಾಡಿದ್ದಾನೆ. ಚೆಲುವಿಯ  ಮಗಳು ಮಲಗಿದ ಬಳಿಕ,  ಚೆಲುವಿ ಬೇರೆಯವರೊಂದಿಗೆ ಫೋನ್‌ ನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ  ಹರೀಶ್‌ ತಗಾದೆ ತೆಗೆದಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ  ಗಲಾಟೆ ನಡೆದಿದೆ.  ಬಳಿಕ ಚೆಲುವಿ ಮಲಗುವುದನ್ನೆ ಈತ ಕಾದಿದ್ದಾನೆ.   ಚೆಲುವಿ ನಿದ್ದೆಗೆ ಜಾರುತ್ತಲೇ ಶಾಲಿನಿಂದ ಆಕೆಯ  ಕುತ್ತಿಗೆಯನ್ನು ಜೋರಾಗಿ  ಬಿಗಿದು ಕೊಲೆ ಮಾಡಿದ್ದಾನೆ , ನಂತರ  ನಿದ್ರೆಯಲ್ಲಿದ್ದ ಮಗಳು ತನ್ನ  ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ  ಎಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ  ಮೊಬೈಲ್ ಪೋನ್‌ನ್ನು ಹರೀಶ್ ಸುಲಿಗೆ ಮಾಡಿಕೊಂಡು ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ ಹಿರಿಯಡ್ಕ ಎಸ್ಸೈ ಅನಿಲ್ ಬಿ.ಮಾದರ, ಕೋಟ ಎಸ್ಸೈ ಮಧು ಬಿ.ಇ. ಪ್ರೊಬೆಷನರಿ ಎಸ್ಸೈಗಳಾದ ಮಂಜುನಾಥ, ರವಿ ಬಿ.ಕಾರಗಿ ಸಿಬ್ಬಂದಿ ರಾಘವೇಂದ್ರ ಮತ್ತು ನಿತಿನ್ ಅವರನ್ನು ಒಳಗೊಂಡ  ವಿಶೇಷ ತಂಡವು ಈ ಪ್ರಕರಣವನ್ನು ಭೇದಿಸಿದ್ದು ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ತಂಡವನ್ನು ಅಭಿನಂದಿಸಿದ್ದಾರೆ

Ad Widget
Click to comment

Leave a Reply

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!