Connect with us

Uncategorized

Dharmasthala | ಧರ್ಮಸ್ಥಳದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಎಫ್ಐಆರ್ : ದೇಶದಲ್ಲೇ ಅಪರೂಪದಲ್ಲಿ ಅಪರೂಪದ ಪ್ರಕರಣ..! ಸೂಕ್ತ ರಕ್ಷಣೆ ಕೊಟ್ಟರೆ ಶವ ಹೂತಿಟ್ಟ ಸ್ಥಳ ತೋರಿಸುತ್ತೇನೆ ಎಂದ ‘ಆ’ ವ್ಯಕ್ತಿ..!

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ, ಜುಲೈ 04 : ಧರ್ಮಸ್ಥಳದಲ್ಲಿ (Dharmasthala) ಈ ಹಿಂದೆ ನಡೆದ ಹಲವು ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ, ತಾನೇ ಮೃತದೇಹಗಳನ್ನು ವಿಲೇವಾರಿ ಮಾಡಿರುವುದಾಗಿ ವ್ಯಕ್ತಿಯೊಬ್ಬರು ಸ್ಫೋಟಕ ದೂರು ನೀಡಿದ್ದು, ಇಡೀ ನಾಡನ್ನೆ ಬೆಚ್ಚಿ ಬೀಳಿಸಿದೆ.

Ad Widget

Ad Widget

Ad Widget

Ad Widget

ಪಾಪಪ್ರಜ್ಞೆಯಿಂದ ತಾನು ಪೊಲೀಸ್‌ ಠಾಣೆ ಮೆಟ್ಟಿಲೇರಿರುವುದಾಗಿ ಹೇಳಿಕೊಂಡಿರುವ ದೂರುದಾರ, ತನಗೆ ಮತ್ತು ತನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿದರೆ ಅಪರಾಧಿಗಳ ಸಂಪೂರ್ಣ ಮಾಹಿತಿ ಹಾಗೂ ಶವಗಳನ್ನು ಹೂತಿಟ್ಟ ಸ್ಥಳಗಳನ್ನು ತೋರಿಸುವುದಾಗಿ ತಿಳಿಸಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget


ದೂರಿನ ವಿವರಗಳು:
ಪೊಲೀಸ್ ಮೂಲಗಳ ಪ್ರಕಾರ, ಜುಲೈ 3ರಂದು ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಹಾಗೂ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ, “ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದ ಅನೇಕ ಕೊಲೆಗಳ ನಂತರ, ಪ್ರಭಾವಿ ವ್ಯಕ್ತಿಗಳು ನನಗೆ ಜೀವಬೆದರಿಕೆ ಒಡ್ಡಿ, ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಲು ನನ್ನನ್ನು ಬಳಸಿಕೊಂಡಿದ್ದಾರೆ. ನಾನು ಈ ರೀತಿ ಹಲವಾರು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದ್ದು, ಸತ್ಯವನ್ನು ಹೊರಹಾಕಲು ಬಯಸಿದ್ದೇನೆ” ಎಂದು ವಿವರಿಸಿದ್ದಾರೆ.

Ad Widget

Ad Widget <> Ad Widget


ತನ್ನ ಮತ್ತು ತನ್ನ ಕುಟುಂಬದ ಜೀವಕ್ಕೆ ಅಪಾಯವಿರುವುದರಿಂದ, ಕಾನೂನುಬದ್ಧ ರಕ್ಷಣೆ ಸಿಕ್ಕ ತಕ್ಷಣವೇ ಕೊಲೆಗಡುಕರ ವಿವರಗಳನ್ನು ಹಾಗೂ ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಖುದ್ದಾಗಿ ತೋರಿಸಲು ಸಿದ್ಧವಿರುವುದಾಗಿಯೂ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಪೊಲೀಸರ ಕ್ರಮ:
ಈ ಗಂಭೀರ ದೂರನ್ನು ಆಧರಿಸಿ, ಪೊಲೀಸರು ಮಾನ್ಯ ನ್ಯಾಯಾಲಯದಿಂದ ಅಗತ್ಯ ಅನುಮತಿ ಪಡೆದು, ದಿನಾಂಕ 04.07.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 39/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಕಲಂ 211(a) ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget


ದೂರುದಾರರ ಮಾಹಿತಿ ಗೌಪ್ಯ:
ದೂರುದಾರರು ತಮ್ಮ ಹೆಸರು ಮತ್ತು ವೈಯಕ್ತಿಕ ಮಾಹಿತಿಯನ್ನು ಗೌಪ್ಯವಾಗಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅವರ ಸುರಕ್ಷತೆಯ ದೃಷ್ಟಿಯಿಂದ, ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.ಈ ಪ್ರಕರಣವು ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದು, ಒಂದು ವೇಳೆ ದೂರುದಾರರ ಆರೋಪಗಳು ನಿಜವೇ ಆದಲ್ಲಿ, ಧರ್ಮಸ್ಥಳದಲ್ಲಿ ಮುಚ್ಚಿಹೋಗಿದ್ದ ಹಲವು ಗಂಭೀರ ಅಪರಾಧ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!