Connect with us

ರಾಜಕೀಯ

Ayurveda Medical College-ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು; ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

Published

on

Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಆಯುಷ್ ಇಲಾಖೆಗೆ ಶಿಫಾರಸ್ಸು ಮಾಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಆಯುಷ್ ಇಲಾಖೆಗೆ ಶಿಫಾರಸ್ಸು ಮಾಡಿದೆ.

Ad Widget

Ad Widget alt="Ad Widget"/>

Ad Widget

ಸರಕಾರಿ ಮೆಡಿಕಲ್ ಕಾಲೇಜಿಗೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಇದರಲ್ಲಿ ಸುಮಾರು ೪೦ ಎಕ್ರೆ ಜಾಗವಿದ್ದು ಈ ಪೈಕಿ ೨೦ ಎಕ್ರೆ ಜಾಗ ಸರಕಾರಿ ಮೆಡಿಕಲ್ ಕಾಲೇಜಿಗೆ ಬಳಕೆಯಾಗುತ್ತದೆ. ಇದೇ ಜಾಗದಲ್ಲಿ ೫ ಎಕ್ರೆ ಜಾಗವನ್ನು ಆಯುರ್ವೆದ ಮೆಡಿಕಲ್ ಕಾಲೇಜಿಗೆ ನಿಗಧಿ ಮಾಡಲಾಗಿದೆ. ಆಯುರ್ವೆದ ಮೆಡಿಕಲ್ ಕಾಲೇಜು ಆಗಬೇಕೆಂದು ಬಹು ಬೇಡಿಕೆ ಇದ್ದು ಇದಕ್ಕೆ ಸರಕಾರ ಮತ್ತು ಆರೋಗ್ಯ ಇಲಾಖೆ ಮುತುವರ್ಜಿವಹಿಸಬೇಕು ಎಂದು ಆಗ್ರಹಿಸಿ ಶಾಸಕ ಅಶೋಕ್ ರೈ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿಕೊಂಢಿದ್ದರು.

Ad Widget

Ad Widget <> Ad Widget

ಆರೋಗ್ಯ ಸಚಿವಾಲಯ ಆಯುಷ್ ಇಲಾಖೆಗೆ ಈ ಬಗ್ಗೆ ಶಿಫಾರಸ್ಸು ಪತ್ರವನ್ನು ಕಳುಹಿಸಿದೆ. ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜಿನ ಮೊದಲ ಹಂತದ ಕಾರ್ಯ ಪೂರ್ಣಗೊಂಡಂತಾಗಿದ್ದು ಮುಂದಿನ ದಿನಗಳಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು ಮಂಜೂರು ಪ್ರಕ್ರಿಯೆ ನಡೆಯಲಿದೆ.

ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾದ ಬಳಿಕ ಆಯುರ್ವೆದ ಮೆಡಿಕಲ್ ಕಾಲೇಜಿಗೂ ಬೇಡಿಕೆ ಹೆಚ್ಚಾಗಿತ್ತು. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜು ಪಕ್ಕದಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ಆಗಬೇಕೆಂಬ ಉದ್ದೇಶದಿಂದ ನಾನು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಆಯುಷ್ ಇಲಾಖೆಗೆ ಈ ಬಗ್ಗೆ ಶಿಫಾರಸ್ಸು ಪತ್ರವನ್ನು ಕಳುಹಿಸಿದ್ದಾರೆ. ಬನ್ನೂರಿನಲ್ಲಿ ಸುಮಾರು ೩೦ ಕೋಟಿ ರೂ ವೆಚ್ಚದಲ್ಲಿ ಈ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ. ಜನತೆಯ ಬೇಡಿಕೆಯನ್ನು ಒಂದೊAದಾಗಿ ಈಡೇರಿಸಲಾಗುತ್ತಿದ್ದು ಪುತ್ತೂರು ಕ್ಷೇತ್ರಕ್ಕೆ ಇನ್ನಷ್ಟು ಕಾಲೇಜು, ಉದ್ಯಮಗಳನ್ನು ತರುವ ಉದ್ದೇಶ ಇದೆ. ಈ ಮೂಲಕಪುತ್ತೂರು ಅಭಿವೃದ್ದಿ ಮಾಡುವ ಕನಸು ಇದೆ ಅದು ನನಸಾಗಬೇಕು

Ad Widget

Ad Widget

ಅಶೋಕ್‌ ರೈ ಶಾಸಕರು ಪುತ್ತೂರು

Ad Widget
Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!