Connect with us

ಶಿಕ್ಷಣ

Vidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ; ಮಕ್ಕಳು ಬಾಲ್ಯದಲ್ಲೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿ. ಅಕಾಡೆಮಿ ದಾರಿ ದೀಪವಾಗಿದೆ- ಮಾಲಿನಿ ಕಶ್ಯಪ್; ಭವಿಷ್ಯದ ಅಧಿಕಾರಿಗಳನ್ನು ಚಿಕ್ಕಂದಿನಲ್ಲೇ ತಯಾರಿ ಮಾಡಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ- ಭಾಗ್ಯೇಶ್ ರೈ

Published

on



Ad Widget

Ad Widget

Ad Widget

Ad Widget

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳು ಪ್ರಾರಂಭಗೊಂಡವು.

Ad Widget

Ad Widget

Ad Widget

Ad Widget

ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ ಹಲವಾರು ಸರಕಾರಿ ನೇಮಕಾತಿಗಳಲ್ಲಿ ನೇಮಕಗೋಳ್ಳುವಂತೆ ಮಾಡಿದ ಕೀರ್ತಿಯನ್ನು ಹೊತ್ತು ಮುನ್ನಡೆಯುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳು ಪ್ರಾರಂಭಗೊಂಡವು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತಾರಾಗಿದ್ದ ಜೆ ಸಿ ಐ ಪುತ್ತೂರು ಇದರ ಸದಸ್ಯರು, ಶಿಶು ಮಂದಿರ ಪುತ್ತೂರು ಇದರ ಶ್ರೀ ಕೃಷ್ಣ ಜನ್ಮಾಷ್ಠಮಿ 2025ರ ಉಪಾಧ್ಯಕ್ಷರು, ಲಶ್ ಪ್ಯಾಶನ್ ಇದರ ಮಾಲಿಕರಾದ ಮಾಲಿನಿ ಕಶ್ಯಪ್ ರವರು ಮಾತನಾಡಿ “ಸ್ಥಳೀಯ ಮಟ್ಟದಲ್ಲಿ ಚಿಕ್ಕ ವಯಸ್ಸಿನ ಮಕ್ಕಳಿಗೆ ಪೂರಕವಾದ ತರಬೇತಿ ನೀಡಿ ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿರುವ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದ್ದು ನಾವೆಲ್ಲರೂ ವಿದ್ಯಾಮಾತಾ ಅಕಾಡೆಮಿಯ ಕಾರ್ಯಕ್ಕೆ ಕೈ ಜೋಡಿಸಬೇಕು” ಎಂದು ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿ. ಅಕಾಡೆಮಿ ಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ” “ಮಕ್ಕಳು ದಾರಿ ತಪ್ಪುವ ಈ ಕಾಲಘಟ್ಟದಲ್ಲಿ ಬಾಲ್ಯದಲ್ಲೇ ಭವಿಷ್ಯದ ಕನಸನ್ನು ಬಿತ್ತಿ ಉನ್ನತವಾದ ಸ್ಥಾನಮಾನವನ್ನು ಹೊಂದಲು ನವೋದಯ, ಸೈನಿಕದಂತಹ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಮಕ್ಕಳಲ್ಲಿ ಅರಿವು ಮೂಡಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ನಮಗೆ ಅತೀವ ಸಂತಸದ ಸಂಗತಿ ಇದು ಇನ್ನಷ್ಟು ಯೋಜನೆಗಳಿಗೆ ಆದರ್ಶವಾಗಿದ್ದು,ವಿದ್ಯಾರ್ಥಿಗಳಿಗೂ ಇನ್ನಷ್ಟು ಇದರ ಅರಿವನ್ನು ಹೆಚ್ಚಿಸಲಿದೆ” ಎಂದು ವಿದ್ಯಾಮಾತಾ ಅಕಾಡೆಮಿಯಲ್ಲಿರುವ ವಿವಿಧ ರೀತಿಯ ತರಬೇತಿಗಳ ಕುರಿತು ಮಾಹಿತಿ ಹಂಚಿಕೊಂಡರು.



Ad Widget

ಪ್ರಮಾಣ ಪತ್ರ ವಿತರಣೆ:
ಸಂಸ್ಥೆಯಲ್ಲಿ ಕಂಪ್ಯೂಟರ್, ಪ್ರಾಕ್ಟಿಕಲ್ ಅಕೌಂಟಿಂಗ್ ಸೇರಿದಂತೆ ವಿವಿಧ ವಿಷಯಗಳ ಕುರಿತು ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಲಿನಿ ಕಶ್ಯಪ್ ರವರು ವಿತರಿಸಿ ಅಭಿನಂದಿಸಿದರು.

Ad Widget

Ad Widget

ಕಾರ್ಯಕ್ರಮವನ್ನು ಸಂಸ್ಥೆಯ ತರಬೇತುದಾರ ಚಂದ್ರಕಾಂತ್ ರವರು ನಿರೂಪಿಸಿದರು, ತರಬೇತುದರರಾದ ಸ್ವಾತಿ, ಸ್ನೇಹ, ಸಿಬ್ಬಂದಿ ಮಿಥುನ್ ರೈ ರವರು ಸಹಕರಿಸಿದರು ಕಾರ್ಯಕ್ರಮದಲ್ಲಿ ನವೋದಯ, ಸೈನಿಕ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿಯ ವಿದ್ಯಾರ್ಥಿಗಳು, ವಿವಿಧ ರೀತಿಯ ತರಬೇತಿ ಪಡೆದು ಪ್ರಮಾಣ ಪತ್ರ ಪಡೆದ ವಿದ್ಯಾರ್ಥಿಗಳು, ಸಶಸ್ತ್ರ ಪಡೆಗಳ ನೇಮಕಾತಿ ಪೂರ್ವ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು, ಪೋಷಕರು,ಸಂಸ್ಥೆಯ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.



Ad Widget
Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.

Ad Widget

Ad Widget <> Ad Widget

ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.



Ad Widget

ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

Ad Widget

Ad Widget

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.

ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading