ರಾಜಕೀಯ
Ashok Rai-ಮುಂದಿನ ಮೂರು ತಿಂಗಳೊಳಗೆ ಬಿಜೆಪಿ ನಾಯಕರ ಸಹಿತ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ; ಶಾಸಕ ಅಶೋಕ್ ರೈ
ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರುದಿನಗಳಲ್ಲಿ ಸುಮಾರು 150 ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮುಂದಿನ ಅಜೆಂಡಾ ಕಾರ್ಯಕರ್ತರ ಸೇರ್ಪಡೆಯಾಗಿರುತ್ತದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಪುತ್ತೂರು: ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಗೃತಿ ಸಭೆಯ ಬಳಿಕ ಬಿಜೆಪಿ ನಿಜ ಬಣ್ಣಜನತೆಯ ಮುಂದೆ ಬಯಲು ಮಾಡಿದ್ದು , ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರುದಿನಗಳಲ್ಲಿ ಸುಮಾರು 150 ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮುಂದಿನ ಅಜೆಂಡಾ ಕಾರ್ಯಕರ್ತರ ಸೇರ್ಪಡೆಯಾಗಿರುತ್ತದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ಪುತ್ತೂರು ಶಾಸಕರ ಕಚೇರಿ ಸಭಾಂಗಣದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಸುಮಾರು ೩೦ ಮಂದಿ ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದರು.
ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಬಹುತೇಕ ಮಧ್ಯಮ ಮತ್ತು ಬಡ ವರ್ಗ ಕುಟುಮಬಗಳ ಮನೆ ಬೆಳಗುವಂತಾಗಿದೆ. ಬಡವರ ಪರ ಇರುವುದು ಕಾಂಗ್ರೆಸ್ ಸರಕಾರ ಮಾತ್ರ ಎಂದು ಎಲ್ಲರಿಗೂ ಗೊತ್ತಾಗಿದೆ. ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳು ಯುವ ಜನತೆಯನ್ನು ಕಾಂಗ್ರೆಸ್ನತ್ತ ಸೆಳೆಯುವಂತೆ ಮಾಡಿದೆ. ಬಿಜೆಪಿ ಅನೇಕ ವರ್ಷಗಳಿಂದ ಜನತೆಯ ಮುಂದೆ ಹೇಳುತ್ತಿರುವ ಸುಳ್ಳುಗಳು ಮತ್ತು ಸುಳ್ಳು ಭರವಸೆಗಳಿಂದ ರೋಸಿ ಹೋಗಿದ್ದು ಈ ಎಲ್ಲಾ ಕಾರಣಗಳಿಂದ ಬಿಜೆಪಿಯನ್ನು ತೊರೆದು ಹಲವು ಮಂದಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಚಾರವಾಗಿದೆ ಎಮದು ಹೇಳಿದರು.
ಬಿಜೆಪಿ ನಾಯಕರುಗಳು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹಲವಾರು ಬಿಜೆಪಿ ನಾಯಕರು ಈಗಾಗಲೇ ನನ್ನನ್ನು ಸಂಪರ್ಕ ಮಾಡಿದ್ದು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ಸ್ವ ಇಚ್ಚೆಯಿಂದ ಸೇರ್ಪಡೆಯಾಗುವ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಬೇಡಿಕೆಯನ್ನು ಮುಂದಿಟ್ಟು ಯಾರೂ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಬಿಜೆಪಿ ನಾಯಕರುಗಳನ್ನು ಸೂಕ್ತ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಿದರು. ಯಾರೂ ನಿರಿಕ್ಷೆ ಮಾಡದ ಕೆಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದು ಈ ಸೇರ್ಪಡೆ ಬಿಜೆಪಿಗೂ ಅಚ್ಚರಿಯನ್ನುಂಟು ಮಾಡಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.
ಸೋಮವಾರದಂದು ಮುಂಡೂರು, ಹಾಗೂ ಆರ್ಯಾಪು ಗ್ರಾಮದ ಸುಮಾರು ೪೦ ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು.
ಪುತ್ತೂರಿನಲ್ಲಿ ಪಕ್ಷ ಇನ್ನಷ್ಟು ಗಟ್ಟಿಯಾಗುತ್ತಿದೆ- ಕೆ ಪಿ ಆಳ್ವ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರವರು ಮಾತನಾಡಿ ಪುತ್ತೂರಿನಲ್ಲಿ ಪಕ್ಷ ಇನ್ನಷ್ಟು ಗಟ್ಟಿಯಾಗುತ್ತಿದೆ. ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಗಳು ಎಲ್ಲರನ್ನೂ ಅಚ್ಚರಿಗೊಳಿಸಿದೆ, ಈ ಹಿಂದೆ ಯಾವ ಶಾಸಕರೂ ಮಾಡದ ಅಭಿವೃದ್ದಿ ಕಾರ್ಯಗಳನ್ನು ಶಾಸಕರು ಮಾಡುತ್ತಿದ್ದಾರೆ. ಪಕ್ಷಾತೀತವಾಗಿ ಅವರು ಮಾಡುತ್ತಿರುವ ಅಕ್ರಮ ಸಕ್ರಮ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳು ಯುವ ಜನತೆಯನ್ನು ಪಕ್ಷದತ್ತ ಆಕರ್ಷಿಸುವಂತೆ ಮಾಡಿದೆ ಎಂದು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಹೇಳಿದರು.
ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀದರ್ ರೈ ಮಠಂತಬೆಟ್ಟು, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಾಯಬ್ಬೆ, ಪಾಣಜೆ ಉಸ್ತುವಾರಿ ಶಂಕರ ನಾರಾಯಣ ಭಟ್, ನೆಟ್ಟಣಿಗೆ ಮುಡ್ನೂರು ಗ್ರಾಪಮ ಸದಸ್ಯ ಶ್ರೀರಾಂ ಪಕ್ಕಳ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಗಿರೀಶ್ ರೈ , ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ್ ಆಚಾರ್ಯ, ಪುತ್ತೂರು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸುದೇಶ್ ಶೆಟ್ಟಿ ಶಾಂತಿನಗರ, ಸಿದ್ದಿಕ್ ಸುಲ್ತಾನ್ ಕೂಡುರಸ್ತೆ, ಮೊದಲಾದವರು ಉಪಸ್ಥಿತರಿದ್ದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಸ್ಥಳೀಯ19 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ12 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್18 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಮಂಗಳೂರು12 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್14 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು13 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ12 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ20 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















