Connect with us

ಸುಳ್ಯ

Sullia-ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಯ್ಕೆ ವಿವಾದ ಕುರಿತು ವೀಕ್ಷಕರಿಂದ ಮಾಹಿತಿ ಸಂಗ್ರಹ; ಒಮ್ಮತದಿಂದ ಸಮರ್ಥ ನಾಯಕನ ಆಯ್ಕೆ-ನಾರಾಯಣ ಸ್ವಾಮಿ

Published

on

Ad Widget

Ad Widget

Ad Widget

Ad Widget

“ಸುಳ್ಯದಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ, ಭಿನ್ನಮತವಿಲ್ಲ, ಕೇವಲ ಭಿನ್ನಾಭಿಪ್ರಾಯಗಳಿವೆ. ಮುಂದಿನ ಚುನಾವಣೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಯಶಸ್ಸು ಸಾಧಿಸಲು ಸಮರ್ಥ ನಾಯಕನನ್ನು ಒಮ್ಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗುವುದು” ಎಂದು ಕೆಪಿಸಿಸಿ ವೀಕ್ಷಕ ಎಂ. ನಾರಾಯಣ ಸ್ವಾಮಿ ಅವರು ಭರವಸೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಸುಳ್ಯ, ಜುಲೈ 8: ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯ ವೈಫಲ್ಯದಿಂದ ಕಳೆದ 30 ವರ್ಷಗಳಿಂದ ಚುನಾವಣೆಗಳಲ್ಲಿ ಸತತ ಸೋಲು ಕಾಣುತ್ತಿರುವ ಬಗ್ಗೆ ಕೆಪಿಸಿಸಿ ವೀಕ್ಷಕ ಎಂ. ನಾರಾಯಣ ಸ್ವಾಮಿ ಗಂಭೀರ ಚಿಂತನೆ ವ್ಯಕ್ತಪಡಿಸಿದ್ದಾರೆ. “ಸುಳ್ಯದಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ, ಭಿನ್ನಮತವಿಲ್ಲ, ಕೇವಲ ಭಿನ್ನಾಭಿಪ್ರಾಯಗಳಿವೆ. ಮುಂದಿನ ಚುನಾವಣೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಯಶಸ್ಸು ಸಾಧಿಸಲು ಸಮರ್ಥ ನಾಯಕನನ್ನು ಒಮ್ಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗುವುದು” ಎಂದು ಅವರು ಭರವಸೆ ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷತೆ ವಿವಾದ ಸಂಬಂಧಿಸಿ ಸುಳ್ಯದಲ್ಲಿ ಮುಖಂಡರಿಂದ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮೂರು ದಿನಗಳ ಒಳಗಾಗಿ ವೀಕ್ಷಕರ ತಂಡ ವರದಿ ತಯಾರಿಸಿ ರಾಜ್ಯಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

Ad Widget

Ad Widget <> Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಚಾರವಾಗಿ ಉಂಟಾದ ವಿವಾದದ ಕುರಿತು ವೀಕ್ಷಕರ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಮಂಗಳವಾರ ಸುಳ್ಯದ ಖಾಸಗಿ ಹೋಟೇಲ್ ವೀಕ್ಷಕರಾದ ಎಂ ನಾರಾಯಣ ಸ್ವಾಮಿ, ಡಿಸಿಸಿ ಅದ್ಯಕ್ಷರ ಹರೀಶ್ ಕುಮಾ‌ರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಗೇರು ನಿಗಮ ಅಧ್ಯಕ್ಷೆ ಮಮತ ಗಟ್ಟಿ ನೇತೃತ್ವದ ವೀಕ್ಷಕರು ಆಗಮಿಸಿ ಸುಳ್ಯ ತಾಲೂಕಿನಿಂದ ರಾಜ್ಯ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದ ನಾಯಕರುಗಳ ಅಭಿಪ್ರಾಯವನ್ನು ಪಡೆದರು.

ಬಳಿಕ ಕಾರ್ಯಕರ್ತರು ಮತ್ತು ನಿಯೋಜಿತ ಅಧ್ಯಕ್ಷ ರಾಧಕೃಷ್ಣ ಬೊಳ್ಳುರು, ಆಕಾಂಕ್ಷಿ ಸೋಮಶೇಖರ ಕೊಯಿಂಗಾಜೆ, ಸರಸ್ವತಿ ಕಾಮತ್, ಮುಖಂಡರಾದ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್ ಸೇರಿದಂತೆ ನಾಯಕರು ಹಾಗೂ ಕಾರ್ಯಕರ್ತರು, ಪ್ರಮುಖರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.

Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!