ನಿಧನ ವಾರ್ತೆ
Uppinangadi-ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜೂನ್ 7 ರಂದು ಸುಭಾಶ್ನಗರದಿಂದ ಮಸೀದಿಗೆ ಬೈಕ್ನಲ್ಲಿ ತೆರಳುವಾಗ ಬೊಳ್ತಾರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಣಿ ಕಡೆಯಿಂದ ಬಂದ ಇನ್ನೊಂದು ಬೈಕ್ ಢಿಕ್ಕಿಯಾಗಿತ್ತು. ಈ ವೇಳೆ ರಸ್ತೆಗೆಸೆಯಲ್ಪಟ್ಟ ನೌಶಾದ್ರ ತಲೆ ವಿಭಾಜಕಕ್ಕೆ ಬಡಿದು ಕೋಮಾ ಸ್ಥಿತಿಗೆ ತಲುಪಿದ್ದರು. ಆರಂಭದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಕೆಯ ಲಕ್ಷಣಗಳು ಕಾಣದಿದ್ದಾಗ ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 9 ರಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ.
ಶ್ರಮಜೀವಿಯಾಗಿದ್ದ ನೌಶಾದ್, ನೆಕ್ಕಿಲಾಡಿಯ ತಂಪು ಪಾನೀಯ ಘಟಕದಲ್ಲಿ ಲೈನ್ ಸೇಲ್ ಕೆಲಸ ಮಾಡುತ್ತಿದ್ದರು ಮತ್ತು ಬಿಡುವಿನ ವೇಳೆ ಶಾಮಿಯಾನ ಕೆಲಸಗಳಿಗೆ ತೆರಳುತ್ತಿದ್ದರು. ಅವರು ಪತ್ನಿ ಹಾಗೂ 6 ಮತ್ತು 4 ವರ್ಷದ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ನಿಧನ ವಾರ್ತೆ
Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.
ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.
ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.
ನಿಧನ ವಾರ್ತೆ
Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ.
ಕಾಸರಗೋಡು: ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ.
ನ. 24ರಂದು ಮುಂಜಾನೆ ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಮನ್ಗೆ ವೀಸಾ ನವೀಕರಣಕ್ಕಾಗಿ ತೆರಳಿ ವಾಪಸಾಗುತ್ತಿದ್ದ 41 ಪ್ರಯಾಣಿಕರಿದ್ದ ಬಸ್, ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 11 ಮಂದಿ ಭಾರತೀಯರು ಎಂದು ವರದಿಯಾಗಿದೆ.
ಅಶ್ರಫ್ ಅವರೊಂದಿಗೆ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
-
ನಿಧನ ವಾರ್ತೆ18 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್12 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ18 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ18 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ18 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್13 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ18 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ16 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

















