[…]" /> […]"> Guru Purnima-ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ; ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ - Nikhara News | Kannada News Website
Connect with us

ಶಿಕ್ಷಣ

Guru Purnima-ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ; ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ವೇ.ಮೂ. ಶ್ರೀಕೃಷ್ಣ ಉಪಾಧ್ಯಾಯ ಭಾಗವಹಿಸಿ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ನಾವು ಮಾಡುವ ಪ್ರತಿ ಕೆಲಸಕ್ಕೆ ಪ್ರತಿಫಲವಿದೆ. ಜನ್ಮಜನ್ಮಾಂತರದ ಕರ್ಮಫಲ ನಮ್ಮ ಬದುಕನ್ನು ರೂಪಿಸುತ್ತದೆ. ಕರ್ಮ ಬಂಧನದಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ. ಗುರುಗಳ ಆಶೀರ್ವಾದಕ್ಕೆ ಮಾತ್ರ ಕರ್ಮ ಬಂಧನವನ್ನು ತಪ್ಪಿಸುವ ಶಕ್ತಿ ಇದೆ. ಶಿವ ಪಥವರಿಯಲು ಗುರು ಪಥವೇ ಮೊದಲು. ಅಜ್ಞಾನಾಂಧಕಾರವನ್ನು ಹೊಡೆದೋಡಿಸುವವನು ಗುರು ಎಂದು ವೇ.ಮೂ. ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Ad Widget

Ad Widget <> Ad Widget

ವೇದಗಳ ವಿಂಗಡಣೆ ಮಾಡಿದ, ಅಷ್ಟಾದಶ ಪುರಾಣ ಮುಂತಾದ ಕೃತಿಗಳನ್ನು, ಮಹಾಕಾವ್ಯಗಳನ್ನು ರಚಿಸಿದ ವೇದವ್ಯಾಸರು ಹುಟ್ಟಿದ್ದು ಹಾಗೂ ದೇಹ ತ್ಯಜಿಸಿದ್ದು ಆಷಾಡ ಹುಣ್ಣಿಮೆಯಂದು. ಆದುದರಿಂದ ಅಂತಹ ವಿಶೇಷ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸುವುದು ಸಂಪ್ರದಾಯ. ಪ್ರತಿನಿತ್ಯ ಹೆತ್ತ ತಾಯಿ, ತಂದೆ, ಗುರುಗಳ ಆಶೀರ್ವಾದಕ್ಕಾಗಿ ವಿದ್ಯಾರ್ಥಿಗಳು ಹಂಬಲಿಸುತ್ತಿರಬೇಕು. ಆಗ ಭಗವಂತನ ಅನುಗ್ರಹವೂ ದೊರೆಯುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಶ್ರೀದೇವಿ ಸ್ವಾಗತಿಸಿ, ಶ್ರೀಜಲ್ ವಂದಿಸಿದರು. ಜಾನ್ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ್ ಸಹಕರಿಸಿದರು.

Click to comment

Leave a Reply

ಶಿಕ್ಷಣ

Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ವಾರ್ಷಿಕೋತ್ಸವ

Published

on

Ad Widget

Ad Widget

Ad Widget

Ad Widget

ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

Ad Widget

Ad Widget alt="Ad Widget"/>

Ad Widget

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

Ad Widget

Ad Widget <> Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.

Ad Widget

Ad Widget

ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.

ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.

ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!