ಸುಳ್ಯ
SulIia-ಸುಳ್ಯ: ಜ್ವರ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿಯೆಂದು ವರದಿ ನೀಡಿದ ವೈದ್ಯಾಧಿಕಾರಿ ವಿರುದ್ಧ ದೂರು
ಜ್ವರದಿಂದ ಬಳಲುತ್ತಿದ್ದ 13 ವರ್ಷದ ಶಾಲಾ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದ ವೇಳೆ, ವೈದ್ಯಾಧಿಕಾರಿಯು ಆಕೆ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ದಾಖಲಾಗಿದೆ.
ಸುಳ್ಯ: ಜ್ವರದಿಂದ ಬಳಲುತ್ತಿದ್ದ 13 ವರ್ಷದ ಶಾಲಾ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದ ವೇಳೆ, ವೈದ್ಯಾಧಿಕಾರಿಯು ಆಕೆ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ದಾಖಲಾಗಿದೆ.
2025ರ ಜುಲೈ 1ರಂದು, ಬಾಲಕಿಯ ಹೆತ್ತವರು ಆಕೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರದ ಚಿಕಿತ್ಸೆಗಾಗಿ ಕರೆದೊಯ್ದಿದ್ದರು. ಅಲ್ಲಿನ ವೈದ್ಯಾಧಿಕಾರಿಯು ಬಾಲಕಿಯನ್ನು ತಪಾಸಿದ ನಂತರ, ಹೊರರೋಗಿಗಳ ದಾಖಲಾತಿಯಲ್ಲಿ ಯುಪಿಟಿ ಪಾಸಿಟಿವ್ (ಗರ್ಭಿಣಿ) ಎಂದು ದಾಖಲಿಸಿ, ಮುಂದಿನ ತಪಾಸಣೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದರು.
ಈ ವರದಿಯಿಂದ ಆತಂಕಕ್ಕೊಳಗಾದ ಹೆತ್ತವರು, ಬಾಲಕಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಗರ್ಭಿಣಿಯಲ್ಲ ಎಂಬ ವರದಿ ಬಂದಿತು. ಸುಳ್ಯ ಸರಕಾರಿ ಆಸ್ಪತ್ರೆಯಲ್ಲೂ ಗರ್ಭಧಾರಣೆಗೆ ಸಂಬಂಧಿಸಿದ ಯಾವುದೇ ದೃಢೀಕರಣ ಸಿಗಲಿಲ್ಲ. ಆದರೆ, ವೈದ್ಯಾಧಿಕಾರಿಯು ಬಾಲಕಿ ಗರ್ಭಿಣಿ ಎಂದು ಎಲ್ಲರಿಗೂ ತಿಳಿಸಿದ್ದಾರೆ ಎಂಬ ಆರೋಪವಿದ್ದು, ಈ ಸುಳ್ಳು ಮಾಹಿತಿಯು ಸಾರ್ವಜನಿಕವಾಗಿ ಹರಡಿದ್ದರಿಂದ ಬಾಲಕಿಯ ಕುಟುಂಬಕ್ಕೆ ಮಾನಸಿಕ ನೋವುಂಟಾಗಿದೆ. ಇದರಿಂದ ಬಾಲಕಿಯು ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾಳೆ ಎಂದು ಹೆತ್ತವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದಾರೆ.
ಈ ಘಟನೆಯ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ. ಎಚ್.ಆರ್. ತಿಮ್ಮಯ್ಯ ಅವರು ತನಿಖೆಗಾಗಿ ತಂಡ ರಚಿಸಿದ್ದಾರೆ. ಈ ತಂಡವು ಜುಲೈ 10ರಂದು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ತನಿಖೆಯ ನಂತರ ತಪ್ಪು ಕಂಡುಬಂದರೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಚ್ಒ ತಿಳಿಸಿದ್ದಾರೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ಬಿಗ್ ನ್ಯೂಸ್20 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ19 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ14 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ17 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ18 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ17 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ14 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ19 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















