Connect with us

ಪುತ್ತೂರು

ಸಂಜೀವ ಶೆಟ್ಟಿ ಆಷಾಡ BIGGEST ಸೇಲ್ ಗೆ ಹರಿದು ಬಂದ ಗ್ರಾಹಕರು : ಬೃಹತ್ ಶೋರೂಮ್ ಹೌಸ್ ಫುಲ್ : ಶಟರ್ ಡೌನ್ ಮಾಡಿ ವ್ಯಾಪಾರ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಪ್ರತಿಷ್ಠಿತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿಯಲ್ಲಿ ಏರ್ಪಡಿಸಿದ್ದ ‘ಮಾನ್ಸೂನ್ ಆಷಾಢ ಬಿಗ್ಗೆಸ್ಟ್ ಸೇಲ್’ಗೆ ಜು.12 ಶನಿವಾರ ಸಂಜೆ ಜನಸಾಗರವೇ ಹರಿದುಬಂದಿತ್ತು. ಗ್ರಾಹಕರ ಮಹಾಪೂರಕ್ಕೆ ವಿಶಾಲವಾದ ಶೋರೂಮ್ ತುಂಬಿ ತುಳುಕಿದ್ದು, ಜನರ ನೂಕುನುಗ್ಗಲು, ಖರೀದಿಯ ಭರಾಟೆ ಎಷ್ಟಿತ್ತೆಂದರೆ, ಗ್ರಾಹಕರ ಒತ್ತಡವನ್ನು ನಿಯಂತ್ರಿಸಲು ಮಳಿಗೆಯ ಶಟರ್‌ಗಳನ್ನೇ ಕೆಳಗಿಳಿಸಿ ವ್ಯಾಪಾರ ನಡೆಸುವ ಅಭೂತಪೂರ್ವ ಸನ್ನಿವೇಶ ಸೃಷ್ಟಿಯಾಗಿತ್ತು!

Ad Widget

Ad Widget

Ad Widget

Ad Widget

ಜನಜಾತ್ರೆಗೆ ಕಾರಣವೇನು?
ಅಷ್ಟಕ್ಕೂ ಈ ಜನಜಾತ್ರೆಗೆ ಕಾರಣ, ಎಂ. ಸಂಜೀವ ಶೆಟ್ಟಿ ಮಳಿಗೆಯಲ್ಲಿ ನಡೆಯುತ್ತಿರುವ ವರ್ಷದ ಅತಿದೊಡ್ಡ ರಿಯಾಯಿತಿ ಮಾರಾಟ..! 81 ವರ್ಷಗಳ ವಸ್ತ್ರ ಪರಂಪರೆಯ ನಂಬಿಕೆಗೆ ಪಾತ್ರವಾಗಿರುವ ಈ ಮಳಿಗೆ, ದೇಶದ ಪ್ರಖ್ಯಾತ ಮಿಲ್‌ಗಳಿಂದ ನೇರವಾಗಿ ಖರೀದಿಸಿದ ಹೊಚ್ಚಹೊಸ ವಿನ್ಯಾಸದ, ಬ್ರಾಂಡೆಡ್ ವಸ್ತ್ರಗಳನ್ನು ನಂಬಲಾಗದಷ್ಟು ಕಡಿಮೆ ಬೆಲೆಗೆ ನೀಡುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಜು 7 ರಂದು ಈ ಮಹಾ ಡಿಸ್ಕೌಂಟ್ ಸೇಲ್ ಆರಂಭಗೊಂಡಿದ್ದು ಗ್ರಾಹಕರ ಅಭೂತಪೂರ್ವ ರೆಸ್ಪಾನ್ಸ್ ಸಿಕ್ಕಿತ್ತು . ಆದರೇ ಶನಿವಾರ ಮಾತ್ರ ಭರ್ಜರಿ ವ್ಯಾಪಾರ ನಡೆದಿದ್ದು, ವಿಸ್ತ್ರತ ಮಳಿಗೆ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಳಿಗೆಯ ಶಟರ್ ಡೌನ್ ಮಾಡಿ ವ್ಯಾಪಾರ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು

Ad Widget

Ad Widget <> Ad Widget

  • ಸೀರೆಗಳ ವೈಭವ: ಮನಸೆಳೆಯುವ ಡಿಸೈನರ್ ಸೀರೆಗಳು, ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ ಸಂಗ್ರಹಗಳು.
  • ರೆಡಿಮೇಡ್ ಧಮಾಕಾ: ಮಹಿಳೆಯರಿಗಾಗಿ ಹೊಚ್ಚಹೊಸ ಡ್ರೆಸ್‌ಗಳು, ಮಕ್ಕಳಿಗಾಗಿ ಆಕರ್ಷಕ ಉಡುಪುಗಳು.
  • ಜಂಟ್ಸ್ ಕಲೆಕ್ಷನ್: ಬ್ರ್ಯಾಂಡೆಡ್ ಶರ್ಟ್, ಪ್ಯಾಂಟ್‌ಗಳ ಅದ್ಭುತ ಸಂಗ್ರಹ.
  • ಗೃಹಾಲಂಕಾರ: ಬೆಡ್ ಸ್ಪ್ರೆಡ್ಸ್ ಮತ್ತು ಬ್ಲಾಂಕೇಟ್‌ಗಳ ಹೊಸ ಕಲೆಕ್ಷನ್ಸ್.

  • ಕೇವಲ ವ್ಯಾಪಾರವಲ್ಲ, ಇದೊಂದು ವಿಶ್ವಾಸದ ಹಬ್ಬ!
    ಹಲವು ವರ್ಷಗಳಿಂದ ಆಟಿ (ಆಷಾಢ) ಸೇಲ್ ಆಯೋಜಿಸುತ್ತಾ ಬಂದಿರುವ ಸಂಜೀವ ಶೆಟ್ಟಿ ಮಳಿಗೆ, ವರ್ಷದಿಂದ ವರ್ಷಕ್ಕೆ ಗ್ರಾಹಕರ ಪ್ರೀತಿ ಮತ್ತು ವಿಶ್ವಾಸವನ್ನು ಗಳಿಸುತ್ತಿದೆ. ಜನದಟ್ಟಣೆಯ ನಡುವೆಯೂ ನಗುಮೊಗದಿಂದ ಸೇವೆ ನೀಡುವ ಸಿಬ್ಬಂದಿ, ಗ್ರಾಹಕರ ಪ್ರತಿಯೊಂದು ಅಗತ್ಯಕ್ಕೂ ಸ್ಪಂದಿಸುತ್ತಿರುವುದು ಇಲ್ಲಿನ ವಿಶೇಷ.



Ad Widget

ನಿಮ್ಮ ಭೇಟಿಗಾಗಿ ಸಿದ್ಧವಾಗಿದೆ ಸಂಜೀವ ಶೆಟ್ಟಿ – ಈ ಸುವರ್ಣಾವಕಾಶ ಇನ್ನೂ ಮುಗಿದಿಲ್ಲ..! ವಾರದ ಎಲ್ಲಾ ದಿನವೂ ತೆರೆದಿರುವ ಈ ಬೃಹತ್ ಶೋರೂಮ್‌ನಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯೂ ಇದೆ. ನೀವು ಇನ್ನೂ ಸಂಜೀವ ಶೆಟ್ಟಿ ಮಳಿಗೆಗೆ ಭೇಟಿ ನೀಡಿಲ್ಲವೇ? ಹಾಗಾದರೆ ತಡವೇಕೆ?

Ad Widget

Ad Widget


ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಮೀಪವಿರುವ ಎಂ. ಸಂಜೀವ ಶೆಟ್ಟಿ ಮಳಿಗೆಗೆ ಇಂದೇ ಭೇಟಿ ನೀಡಿ, ಗುಣಮಟ್ಟದ ಬಟ್ಟೆಗಳನ್ನು ಅತೀ ಕಡಿಮೆ ದರದಲ್ಲಿ ಖರೀದಿಸಿ, ನಿಮ್ಮ ವಾರ್ಡ್‌ರೋಬ್‌ಗೆ ಹೊಸ ಮೆರುಗು ನೀಡುವ ಅವಕಾಶ ಕಲ್ಪಿಸಿದೆ..

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

Published

on



Ad Widget

Ad Widget

Ad Widget

Ad Widget

ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



Ad Widget

ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.

ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.

ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.

ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.

ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.

ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.

ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು

Published

on



Ad Widget

Ad Widget

Ad Widget

Ad Widget

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.



Ad Widget

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತರು ಪತ್ನಿ ಶಶಿಕಲಾ, ಪುತ್ರರಾದ ಹರ್ಷಿತ್ ಹಾಗೂ ರಕ್ಷಿತ್, ಸಹೋದರರು ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ

Published

on



Ad Widget

Ad Widget

Ad Widget

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.

Ad Widget

Ad Widget <> Ad Widget

ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.



Ad Widget

ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget

ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading