ಸ್ಥಳೀಯ
Dharmasthala-ಧರ್ಮಸ್ಥಳ ಶವ ಪ್ರಕರಣ: ಎಸ್ಐಟಿ ತನಿಖೆಗೆ ಮಹಿಳಾ ಆಯೋಗ ಆಗ್ರಹ – ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆತಂಕಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ, ಕಳೆದ ಎರಡು ದಶಕಗಳಿಂದ ನಡೆದಿರುವ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಅನುಮಾನಾಸ್ಪದ ಸಾವು ಹಾಗೂ ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸರ್ಕಾರವನ್ನು ಬಲವಾಗಿ ಆಗ್ರಹಿಸಿದೆ.
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆತಂಕಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ, ಕಳೆದ ಎರಡು ದಶಕಗಳಿಂದ ನಡೆದಿರುವ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಅನುಮಾನಾಸ್ಪದ ಸಾವು ಹಾಗೂ ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸರ್ಕಾರವನ್ನು ಬಲವಾಗಿ ಆಗ್ರಹಿಸಿದೆ.
ಈ ಸಂಬಂಧ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸಾಕ್ಷಿದಾರರೊಬ್ಬರು ನ್ಯಾಯಾಲಯಕ್ಕೆ ನೀಡಿರುವ ಹೇಳಿಕೆ, ಇತ್ತೀಚೆಗೆ ಪತ್ತೆಯಾದ ತಲೆಬುರುಡೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ನೋವಿನ ವರದಿಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ತನಿಖೆಗೆ ಆಗ್ರಹಿಸಲು ಕಾರಣವೇನು?
ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳ ವ್ಯಾಪ್ತಿಯಲ್ಲಿ ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆಯಂತಹ ಗಂಭೀರ ಸ್ವರೂಪದ ಪ್ರಕರಣಗಳು ನಡೆದಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸಂತ್ರಸ್ತ ಕುಟುಂಬಗಳು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಯಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂಬ ಗಂಭೀರ ಆರೋಪಗಳೂ ಇವೆ. ಈ ಎಲ್ಲಾ ಪ್ರಕರಣಗಳ ಸತ್ಯಾಂಶ ಹೊರತರಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ನಿಷ್ಪಕ್ಷಪಾತ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಯೋಗ ಒತ್ತಾಯಿಸಿದೆ.
ಜಿಲ್ಲಾ ಎಸ್ಪಿಗೆ ಕಟ್ಟುನಿಟ್ಟಿನ ಸೂಚನೆ
ಪ್ರಕರಣದ ಗಂಭೀರತೆಯನ್ನು ಅರಿತು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವ ಆಯೋಗ, ಏಳು ದಿನಗಳೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ವರದಿಯಲ್ಲಿ ಈ ಕೆಳಗಿನ ಮಾಹಿತಿಗಳನ್ನು ಕಡ್ಡಾಯವಾಗಿ ನೀಡುವಂತೆ ತಿಳಿಸಲಾಗಿದೆ.
• ಕಳೆದ 20 ವರ್ಷಗಳಲ್ಲಿ ನಾಪತ್ತೆಯಾದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸಂಖ್ಯೆ.
• ಪತ್ತೆಯಾದ ಮತ್ತು ಇನ್ನೂ ಪತ್ತೆಯಾಗದ ಪ್ರಕರಣಗಳ ವಿವರ.
• ನೋಂದಣಿಯಾದ ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು.
• ಈ ಪ್ರಕರಣಗಳಲ್ಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಸಂಪೂರ್ಣ ಮಾಹಿತಿ.
ಸೌಜನ್ಯಾ ಪ್ರಕರಣದ ಬಳಿಕ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಅನುಮಾನಾಸ್ಪದ ಸಾವುಗಳ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಿದ್ದು, ಇದೀಗ ಮಹಿಳಾ ಆಯೋಗದ ಮಧ್ಯಪ್ರವೇಶದಿಂದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸರ್ಕಾರದ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.
“ಧರ್ಮಸ್ಥಳದ ಘಟನೆಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಮಾತು ಸಮಾಜದಲ್ಲಿ ಆತಂಕ ಮೂಡಿಸಿದೆ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಲು ಮತ್ತು ಸತ್ಯಾಂಶವನ್ನು ಜನರ ಮುಂದಿಡಲು ಎಸ್ಐಟಿ ತನಿಖೆ ಅತ್ಯಗತ್ಯ. ಸರ್ಕಾರ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು.”
- ಡಾ. ನಾಗಲಕ್ಷ್ಮೀ ಚೌಧರಿ, ಅಧ್ಯಕ್ಷರು, ರಾಜ್ಯ ಮಹಿಳಾ ಆಯೋಗ
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized11 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized10 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized8 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized12 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized10 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized10 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















