ಶಿಕ್ಷಣ
Ambika-ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆ; ಹೊಸದನ್ನು ಅನ್ವೇಷಣೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು : ಕೃಷ್ಣ ಎನ್.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೂತನವಾಗಿ ರೂಪಿಸಿರುವ ಗಣಕಯಂತ್ರ ಪ್ರಯೋಗಾಲಯವನ್ನು ಉದ್ಘಾಟಿಸಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಸಾಫ್ಟ್‌ವೇರ್ ಇಂಜಿನಿಯರ್ ಕೃಷ್ಣ ಎನ್. ಮಾತನಾಡಿದರು.
ಪುತ್ತೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಬ್ಬ ಆದರ್ಶ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಹೊಸದನ್ನು ಅನ್ವೇಷಣೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಸಂವಹನಾ ಕೌಶಲ್ಯ ಹಾಗೂ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಆಗ ಅವಕಾಶಗಳು ಅರಸಿಕೊಂಡು ಬರುತ್ತವೆ ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಸಾಫ್ಟ್‌ವೇರ್ ಇಂಜಿನಿಯರ್ ಕೃಷ್ಣ ಎನ್. ಹೇಳಿದರು.

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೂತನವಾಗಿ ರೂಪಿಸಿರುವ ಗಣಕಯಂತ್ರ ಪ್ರಯೋಗಾಲಯವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು.
ಪ್ರತಿಯೊಬ್ಬರಿಗೂ ಒಳ್ಳೆಯ ಅವಕಾಶಗಳು ದೊರೆಯುತ್ತವೆ. ಸತತವಾದ ಸಾಧನೆಯ ಮೂಲಕವಾಗಿ ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ. ಸಚಿನ್ ತೆಂಡೂಲ್ಕರ್ ತನ್ನ ಬಾಲ್ಯದಿಂದಲೇ ಕ್ರಿಕೆಟ್ ಆಟದ ಮೇಲೆ ಆಸಕ್ತಿ ವಹಿಸಿ ಅದನ್ನೇ ಮುಖ್ಯ ಗುರಿಯನ್ನಾಗಿಸಿ ಮುನ್ನಡೆದ ಕಾರಣದಿಂದ ಅಪೂರ್ವವಾದ ಸಾಧನೆ ನಿರ್ಮಾಣ ಮಾಡುವುದಕ್ಕೆ ಸಾಧ್ಯವಾಗಿದೆ. ನಿರಂತರ ಶ್ರಮ ಹಾಗೂ ಅಪರಿಮಿತ ಆಸಕ್ತಿಯೇ ಯಶಸ್ಸಿನ ಮೆಟ್ಟಿಲು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಶಕ್ತಿ ಇದೆ. ಅದನ್ನು ಉಪಯೋಗಿಸಿ ಹೆಚ್ಚಿನ ಯೋಗ್ಯ ಪ್ರತಿಭಾವಂತರಾಗಿ ವಿದ್ಯಾರ್ಥಿಗಳು ಹೊರಹೊಮ್ಮಬೇಕು. ನೂತನವಾಗಿ ನಿರ್ಮಾಣಗೊಂಡಿರುವ ಪ್ರಯೋಗಾಯದ ಲಾಭವನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮದಾಗಿಸಿಕೊಳ್ಳಬೇಕು ಎಂದು ನುಡಿದರು.
ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿಯೂ ಆಧುನಿಕ ತಂತ್ರಜ್ಞಾನದ ಬಳಕೆಯಿಂದಾಗಿ ಮಹತ್ತರವಾದ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಪ್ರತಿಯೊಬ್ಬರೂ ಜೀವನದಲ್ಲಿ ಯಶಸ್ಸಿನ ತುದಿಯನ್ನು ಮುಟ್ಟಬೇಕಾದರೆ ಕಂಪ್ಯೂಟರ್ ಜ್ಞಾನ ಅತೀ ಅವಶ್ಯಕ ಎಂದು ಹೇಳಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಾಂಕ್ ಎಲ್. ಅತಿಥಿಗಳ ಪರಿಚಯ ಮಾಡಿದರು. ವಿದ್ಯಾರ್ಥಿನಿಯರಾದ ಶಿಶಿರ ಮತ್ತು ಬಳಗದವರು ಪ್ರಾರ್ಥಿಸಿ, ಹೃತ್ವಿಕ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪ ಪ್ರಾಂಶುಪಾಲ ಪ್ರದೀಪ್ ಕೆ ಎನ್ ಸ್ವಾಗತಿಸಿ, ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ11 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು10 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು7 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ11 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ11 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ11 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ11 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ12 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















