ರಾಜಕೀಯ
Puttur-ಅಜಿತ್ ಮಡಿಕೇರಿ ಮೆರವಣಿಗೆ ಮಾಡುತ್ತೇವೆ, ತಾಕತ್ತಿದ್ದರೆ ಮಸಲ್ ಪವರ್ ತೋರಿಸಿ ‘ – ಶಾಸಕ ರೈಗೆ ಮಠಂದೂರ್ ಬಹಿರಂಗ ಸವಾಲು
ಹಿಂದೂ ಜಾಗರಣ ವೇದಿಕೆ ಮುಖಂಡ ಅಜಿತ್ ಮಡಿಕೇರಿಗೆ ‘ಬುದ್ಧಿ ಕಲಿಸುತ್ತಿದ್ದೇವು ಎಂದು ಎಚ್ಚರಿಕೆ ನೀಡಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ತೀವ್ರವಾಗಿ ತಿರುಗೇಟು ನೀಡಿರುವ ಮಾಜಿ ಶಾಸಕ ಸಂಜೀವ ಮಠಂದೂರು, “ನಾವು ಅಜಿತ್ ಮಡಿಕೇರಿಯನ್ನು ಪುತ್ತೂರಿನಲ್ಲಿ ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ, ತಾಕತ್ತಿದ್ದರೆ ಮಸಲ್ ಪವರ್ ತೋರಿಸಿ ತಡೆಯಿರಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ.
ಪುತ್ತೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಅಜಿತ್ ಮಡಿಕೇರಿಗೆ ‘ಬುದ್ಧಿ ಕಲಿಸುತ್ತಿದ್ದೇವು ಎಂದು ಎಚ್ಚರಿಕೆ ನೀಡಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ತೀವ್ರವಾಗಿ ತಿರುಗೇಟು ನೀಡಿರುವ ಮಾಜಿ ಶಾಸಕ ಸಂಜೀವ ಮಠಂದೂರು, “ನಾವು ಅಜಿತ್ ಮಡಿಕೇರಿಯನ್ನು ಪುತ್ತೂರಿನಲ್ಲಿ ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ, ತಾಕತ್ತಿದ್ದರೆ ಮಸಲ್ ಪವರ್ ತೋರಿಸಿ ತಡೆಯಿರಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ.
ಕೆಂಪುಕಲ್ಲು, ಮರಳು ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ಜನಾಕ್ರೋಶ’ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಶಾಸಕ ಅಶೋಕ್ ರೈ ವಿರುದ್ಧ ಕೆಂಡಾಮಂಡಲರಾದರು. “ಬಿಜೆಪಿ ಕಾರ್ಯಕರ್ತರು ಬಳೆಯಿಟ್ಟು ರಾಜಕೀಯ ಮಾಡಿದವರಲ್ಲ. ನಾವು ಸ್ವಾಭಿಮಾನಿಗಳು. ಹಣ, ಆಮಿಷಗಳಿಗೆ ಮರುಳಾಗುವವರು ಬಿಜೆಪಿಗರಲ್ಲ,” ಎಂದು ಅವರು ಗುಡುಗಿದರು.
“ಕಾಂಗ್ರೆಸ್ ಶಾಲು ಹಾಕಿ ಕೆಲಸ ಮಾಡುವ ಸಂಸ್ಕೃತಿ”
ಶಾಸಕ ಅಶೋಕ್ ರೈ ಅವರ ಕಾರ್ಯವೈಖರಿಯನ್ನು ಟೀಕಿಸಿದ ಮಠಂದೂರು, “ಇಂದು ಯಾರಾದರೂ ತಮ್ಮ ಕೆಲಸಕ್ಕಾಗಿ ಶಾಸಕರ ಬಳಿ ಹೋದರೆ, ಅವರಿಗೆ ಕಾಂಗ್ರೆಸ್ ಶಾಲು ಹಾಕಿ, ಪಕ್ಷದ ಧ್ವಜವನ್ನು ಕೈಗಿಡಲಾಗುತ್ತಿದೆ. ಸರ್ಕಾರಿ ಕೆಲಸ ಮಾಡಿಸಲು ಹೋದರೂ ಇದೇ ಪರಿಸ್ಥಿತಿ. ನಾನೂ ಶಾಸಕನಾಗಿದ್ದವನು, ನನ್ನ ಬಳಿ ಕಾಂಗ್ರೆಸ್ಸಿಗರು ಸೇರಿದಂತೆ ಬೇರೆ ಪಕ್ಷದವರೂ ಬರುತ್ತಿದ್ದರು. ನಾನೆಂದೂ ಅವರಿಗೆ ಬಿಜೆಪಿ ಶಾಲು ಹಾಕಿ ಕಳುಹಿಸಿಲ್ಲ, ಅವರ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ,” ಎಂದು ತಮ್ಮ ಹಾಗೂ ಹಾಲಿ ಶಾಸಕರ ನಡುವಿನ ವ್ಯತ್ಯಾಸವನ್ನು ವಿವರಿಸಿದರು.
“ಗೋಮುಖ ವ್ಯಾಘ್ರನ ಮುಖ ನೋಡಿಲ್ಲ”
ಶಾಸಕ ರೈ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, “ನೀವು ಶಾಸಕರ ಗೋಮುಖವನ್ನು ಮಾತ್ರ ನೋಡಿದ್ದೀರಿ, ಅವರ ವ್ಯಾಘ್ರ ಮುಖವನ್ನು ನೋಡಿಲ್ಲ. ಹಿಂದೆ ಪಿಸ್ತೂಲು ತೋರಿಸಿ ಜನರನ್ನು ಭಯಪಡಿಸಿದವರು ಅವರು. ಈಗ ಅದೇ ಮುಖವನ್ನು ಜನರಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.
ವಾಗ್ವಾದದ ಹಿನ್ನೆಲೆ
ಇತ್ತೀಚೆಗೆ ಹಿಂದೂ ಜಾಗರಣ ವೇದಿಕೆ ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಹಿಂಜಾವೇ ಮುಖಂಡ ಅಜಿತ್ ಮಡಿಕೇರಿ, ಶಾಸಕ ಅಶೋಕ್ ರೈ ಅವರನ್ನು ‘ಅಯೋಗ್ಯ’ ಎಂದು ನಿಂದಿಸಿದ್ದರು. ಇದಕ್ಕೆ ಸುಳ್ಯದಲ್ಲಿ ಪ್ರತಿಕ್ರಿಯಿಸಿದ್ದ ಶಾಸಕ ಅಶೋಕ್ ರೈ, “ಯಾವನೋ ಒಬ್ಬ ಮುಟ್ಟಾಳ ಎಲ್ಲಿಂದಲೋ ಬಂದು ಮಾತನಾಡುತ್ತಾನೆ. ಅವನು ಸ್ವಲ್ಪ ಹೊತ್ತು ಪುತ್ತೂರಿನಲ್ಲಿ ಇರಬೇಕಿತ್ತು, ಅವನಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತಿದ್ದೆ. ಕಾನೂನು, ನ್ಯಾಯ ಮತ್ತು ಮಸಲ್ ಪವರ್ ಬಳಸಿ ಬುದ್ಧಿ ಕಲಿಸುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದರು.
ಶಾಸಕರ ಈ ಹೇಳಿಕೆಯೇ ಇದೀಗ ಪುತ್ತೂರಿನಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಮಾಜಿ ಮತ್ತು ಹಾಲಿ ಶಾಸಕರ ನಡುವಿನ ಜಟಾಪಟಿ ತೀವ್ರಗೊಂಡಿದೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
Uncategorized23 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ರಾಜಕೀಯ23 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ23 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ದಕ್ಷಿಣ ಕನ್ನಡ8 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಮಂಗಳೂರು23 hours agoDakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
-
ಅಂತರ ರಾಜ್ಯ6 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ7 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized6 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ


















