Connect with us

ಅಂತರ ರಾಜ್ಯ

Russian woman-ಗೋಕರ್ಣ ಗುಹೆಯಲ್ಲಿ ರಷ್ಯಾದ ಮಹಿಳೆ ಮತ್ತು ಮಕ್ಕಳ ರಕ್ಷಣೆ: ಕೌನ್ಸೆಲಿಂಗ್ ವೇಳೆ ಮಹಿಳೆಯ ಪತಿ ಇಸ್ರೇಲ್ ಉದ್ಯಮಿಯ ವಿವರ ಬಹಿರಂಗ; ಹಲವು ಕಡೆ ಗುಹೆಯಲ್ಲಿ ವಾಸಿಸಿದ್ದ ಮಹಿಳೆ

Published

on

Ad Widget

Ad Widget

Ad Widget

Ad Widget

ಕರ್ನಾಟಕದ ಗೋಕರ್ಣದ ಬಳಿಯ ರಾಮತೀರ್ಥ ಗುಹೆಯಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಪತ್ತೆಯಾದ ರಷ್ಯಾದ ಮಹಿಳೆ ನೀನಾ ಕುಟಿನಾ (40), ಗೋವಾದ ಗುಹೆಯೊಂದರಲ್ಲಿ ಒಂದು ಮಗುವಿಗೆ ಜನ್ಮ ನೀಡಿದ್ದಾಗಿ ಹೇಳಿಕೊಂಡಿದ್ದಾಳೆ. ಮಕ್ಕಳ ತಂದೆ ಎಂದು ಆಕೆ ಗುರುತಿಸಿರುವ ಇಸ್ರೇಲ್ ಉದ್ಯಮಿಯನ್ನು ಅಧಿಕಾರಿಗಳು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕರ್ನಾಟಕದ ಗೋಕರ್ಣದ ಬಳಿಯ ರಾಮತೀರ್ಥ ಗುಹೆಯಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಪತ್ತೆಯಾದ ರಷ್ಯಾದ ಮಹಿಳೆ ನೀನಾ ಕುಟಿನಾ (40), ಗೋವಾದ ಗುಹೆಯೊಂದರಲ್ಲಿ ಒಂದು ಮಗುವಿಗೆ ಜನ್ಮ ನೀಡಿದ್ದಾಗಿ ಹೇಳಿಕೊಂಡಿದ್ದಾಳೆ. ಮಕ್ಕಳ ತಂದೆ ಎಂದು ಆಕೆ ಗುರುತಿಸಿರುವ ಇಸ್ರೇಲ್ ಉದ್ಯಮಿಯನ್ನು ಅಧಿಕಾರಿಗಳು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget alt="Ad Widget"/>

Ad Widget

ಜುಲೈ 9, 2025ರಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಹೆಯಲ್ಲಿ ನೀನಾ ಕುಟಿನಾ ಮತ್ತು ಆಕೆಯ ಆರು ಹಾಗೂ ನಾಲ್ಕು ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಗೋಕರ್ಣ ಪೊಲೀಸರು ರಕ್ಷಿಸಿದ್ದಾರೆ. ಆಕೆಯ ವೀಸಾ 2017ರಲ್ಲಿ ಮುಗಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ, ನೀನಾ ಮತ್ತು ಆಕೆಯ ಮಕ್ಕಳನ್ನು ಬೆಂಗಳೂರಿನ ವಿದೇಶಿಯರ ಕೇಂದ್ರದಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ನೀನಾ, ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ನಾನು ಬಹಳ ಹಿಂದೆಯೇ ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಗೋಕರ್ಣಕ್ಕೆ ಧ್ಯಾನಕ್ಕಾಗಿ ಬಂದಿಲ್ಲ, ಆದರೆ ಪ್ರಕೃತಿಯು ಒಳ್ಳೆಯ ಆರೋಗ್ಯವನ್ನು ನೀಡುತ್ತದೆ,” ಎಂದು ಹೇಳಿದ್ದಾರೆ. ಆಕೆ ತನ್ನ ಮಕ್ಕಳೊಂದಿಗೆ ಕಾಡಿನಲ್ಲಿ ಸಂತೋಷವಾಗಿದ್ದೆವು ಎಂದು ವಿವರಿಸಿದ್ದಾರೆ.

“ನಮಗೆ ಕಾಡಿನಲ್ಲಿ ವಾಸಿಸುವ ದೊಡ್ಡ ಅನುಭವವಿದೆ. ನಾವು ಸಾಯುತ್ತಿರಲಿಲ್ಲ. ನನ್ನ ಮಕ್ಕಳನ್ನು ಕಾಡಿನಲ್ಲಿ ಸಾಯಲು ಕರೆತಂದಿರಲಿಲ್ಲ. ಅವರು ಜಲಪಾತದಲ್ಲಿ ಈಜುತ್ತಿದ್ದರು, ಮಲಗಲು ಒಳ್ಳೆಯ ಸ್ಥಳವಿತ್ತು. ಜೇಡಿಮಣ್ಣಿನಿಂದ ಕಲಾಕೃತಿಗಳನ್ನು ರಚಿಸುವುದು, ಚಿತ್ರಕಲೆಯಲ್ಲಿ ತೊಡಗಿಸಿಕೊಳ್ಳುವುದು ಸೇರಿದಂತೆ ಹಲವು ಪಾಠಗಳನ್ನು ಕಲಿತಿದ್ದಾರೆ. ನಾವು ರುಚಿಕರ ಆಹಾರವನ್ನು ಬೇಯಿಸಿ ತಿನ್ನುತ್ತಿದ್ದೆವು. ನಾನು ಕನಿಷ್ಠ 20 ದೇಶಗಳಿಗೆ ಪ್ರಯಾಣಿಸಿದ್ದೇನೆ ಮತ್ತು ವಿವಿಧ ಕಾಡುಗಳಲ್ಲಿ ವಾಸಿಸಿದ್ದೇನೆ. ನಾವು ಪ್ರಕೃತಿಯನ್ನು ಪ್ರೀತಿಸುತ್ತೇವೆ. ಆ ಗುಹೆ ದಟ್ಟ ಕಾಡಿನೊಳಗಿರಲಿಲ್ಲ ಮತ್ತು ಚಿಕ್ಕದಾಗಿಯೂ ಇರಲಿಲ್ಲ.

Ad Widget

Ad Widget

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಯೊಬ್ಬರು, “ಮಕ್ಕಳ ತಂದೆ ಇಸ್ರೇಲ್ ಪ್ರಜೆಯಾಗಿದ್ದು, ಅವರು ವ್ಯಾಪಾರ ವೀಸಾದ ಮೇಲೆ ಭಾರತದಲ್ಲಿದ್ದಾರೆ. ಟಿಕೆಟ್ ವ್ಯವಸ್ಥೆಗಾಗಿ ಆತನೊಂದಿಗೆ ಮಾತುಕತೆ ನಡೆಸಿದ್ದೇವೆ,” ಎಂದು ತಿಳಿಸಿದ್ದಾರೆ. ಆರಂಭದಲ್ಲಿ ನೀನಾ ಮಕ್ಕಳ ತಂದೆಯ ಬಗ್ಗೆ ಮಾಹಿತಿ ನೀಡಿರಲಿಲ್ಲ, ಆದರೆ ಕೌನ್ಸೆಲಿಂಗ್ ಬಳಿಕ ಇಸ್ರೇಲ್ ಉದ್ಯಮಿಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

FRRO ಅಧಿಕಾರಿಗಳು ರಷ್ಯಾದ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ. ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನೀನಾ ಮತ್ತು ಆಕೆಯ ಮಕ್ಕಳನ್ನು ರಷ್ಯಾಕ್ಕೆ ಕಳುಹಿಸಲು ಸುಮಾರು ಒಂದು ತಿಂಗಳು ಬೇಕಾಗಬಹುದು. ರಷ್ಯಾದಲ್ಲಿ ನೀನಾಳಿಗೆ ಇನ್ನೊಂದು ಮಗುವಿದೆ ಎಂದು ತಿಳಿದುಬಂದಿದ್ದು, ಚೆನ್ನೈನ ರಷ್ಯಾದ ರಾಯಭಾರ ಕಚೇರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Ad Widget

ಅಂತರ ರಾಜ್ಯ

CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?

Published

on

Ad Widget

Ad Widget

Ad Widget

Ad Widget

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget

Ad Widget

Ad Widget

ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget alt="Ad Widget"/>

Ad Widget

ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

Ad Widget

Ad Widget

“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್–ಎಸ್‌ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್‌ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್‌ಪಿ ವಿರುದ್ಧ ಕಿಡಿಕಾರಿದ್ದಾರೆ.

ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್‌ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

Ad Widget
Continue Reading

ಅಂತರ ರಾಜ್ಯ

Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ

Published

on

Ad Widget

Ad Widget

Ad Widget

Ad Widget

ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.

Ad Widget

Ad Widget <> Ad Widget

ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.

ಏನೇನು ಪ್ರಸ್ತಾವಗಳಿವೆ?

Ad Widget

Ad Widget
  • ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
  • ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
  • ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
  • ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
  • ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್‌ಗಳಲ್ಲಿ ಆರಂಭಿಸಲು ಸಲಹೆ.
  • ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
Ad Widget
Continue Reading

ಅಂತರ ರಾಜ್ಯ

WhatsApp-ವಾಟ್ಸಾಪ್‌ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ಸೌಲಭ್ಯವೊಂದನ್ನು ಪರಿಚಯಿಸುತ್ತಿದೆ. ಇನ್ಮುಂದೆ ಬಳಕೆದಾರರು ತಾವು ಕಳುಹಿಸಬೇಕಾದ ಸಂದೇಶಗಳನ್ನು ಮೊದಲೇ ಟೈಪ್ ಮಾಡಿ, ನಿರ್ದಿಷ್ಟ ದಿನಾಂಕ ಮತ್ತು ಸಮಯಕ್ಕೆ ಸ್ವಯಂಚಾಲಿತವಾಗಿ ತಲುಪುವಂತೆ ಶೆಡ್ಯೂಲ್ ಮಾಡಬಹುದು.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ಸೌಲಭ್ಯವೊಂದನ್ನು ಪರಿಚಯಿಸುತ್ತಿದೆ. ಇನ್ಮುಂದೆ ಬಳಕೆದಾರರು ತಾವು ಕಳುಹಿಸಬೇಕಾದ ಸಂದೇಶಗಳನ್ನು ಮೊದಲೇ ಟೈಪ್ ಮಾಡಿ, ನಿರ್ದಿಷ್ಟ ದಿನಾಂಕ ಮತ್ತು ಸಮಯಕ್ಕೆ ಸ್ವಯಂಚಾಲಿತವಾಗಿ ತಲುಪುವಂತೆ ಶೆಡ್ಯೂಲ್ ಮಾಡಬಹುದು.

Ad Widget

Ad Widget alt="Ad Widget"/>

Ad Widget

ಹುಟ್ಟುಹಬ್ಬದ ಶುಭಾಶಯಗಳು, ವಿಶೇಷ ದಿನಗಳ ಸಂದೇಶಗಳು, ಪ್ರಮುಖ ನೆನಪಿನ ಸೂಚನೆಗಳು ಸೇರಿದಂತೆ ವಿವಿಧ ಸಂದೇಶಗಳನ್ನು ಸಮಯಕ್ಕೆ ಸರಿಯಾಗಿ ಕಳುಹಿಸಲು ಈ ಸೌಲಭ್ಯ ಸಹಕಾರಿಯಾಗಲಿದೆ. ವೈಯಕ್ತಿಕ ಚಾಟ್‌ಗಳು ಹಾಗೂ ಗ್ರೂಪ್ ಚಾಟ್‌ಗಳೆರಡರಲ್ಲೂ ಈ ಆಯ್ಕೆ ಲಭ್ಯವಾಗಲಿದೆ ಎಂದು ಮೆಟಾ ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಒಮ್ಮೆ ಸಂದೇಶವನ್ನು ಶೆಡ್ಯೂಲ್ ಮಾಡಿದರೆ ಸಾಕು, ನಿಗದಿತ ಸಮಯದಲ್ಲಿ ಬಳಕೆದಾರರು ವಾಟ್ಸಾಪ್ ತೆರೆಯದಿದ್ದರೂ ಸಂದೇಶ ಸ್ವಯಂಚಾಲಿತವಾಗಿ ರವಾನೆಯಾಗಲಿದೆ. ಫೋನ್‌ನಲ್ಲಿ ಇಂಟರ್ನೆಟ್ ಸಂಪರ್ಕ ಇಲ್ಲದಿದ್ದರೂ ಸಂದೇಶ ತಲುಪಲಿದೆ ಎಂದು ವರದಿಯಾಗಿದೆ.

ವಾಟ್ಸಾಪ್‌ನಲ್ಲಿ ಮೆಸೇಜ್ ಶೆಡ್ಯೂಲ್ ಮಾಡುವುದು ಹೇಗೆ?
ಬಳಕೆದಾರರು ಕನಿಷ್ಠ 10 ನಿಮಿಷಗಳಿಂದ ಗರಿಷ್ಠ ಎರಡು ವಾರಗಳ ಮುಂಚಿತವಾಗಿ ಸಂದೇಶಗಳನ್ನು ಶೆಡ್ಯೂಲ್ ಮಾಡಬಹುದು. ಇದಕ್ಕಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

Ad Widget

Ad Widget
  1. ವಾಟ್ಸಾಪ್ ತೆರೆಯಿರಿ ಮತ್ತು ಸಂದೇಶ ಕಳುಹಿಸಬೇಕಾದ ವ್ಯಕ್ತಿಯ ಚಾಟ್ ಅಥವಾ ಗ್ರೂಪ್ ಆಯ್ಕೆಮಾಡಿ.
  2. ಕಳುಹಿಸಬೇಕಾದ ಸಂದೇಶವನ್ನು ಟೈಪ್ ಮಾಡಿ ಅಥವಾ ಫೋಟೋ, ವಿಡಿಯೋ ಆಯ್ಕೆಮಾಡಿ.
  3. ‘Send’ ಬಟನ್ ಅನ್ನು ಸ್ವಲ್ಪ ಹೊತ್ತು ಒತ್ತಿ ಹಿಡಿಯಿರಿ.
  4. ಕಾಣಿಸಿಕೊಳ್ಳುವ ಆಯ್ಕೆಯಲ್ಲಿ ಸಂದೇಶ ತಲುಪಬೇಕಾದ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  5. ಕೊನೆಯಲ್ಲಿ ‘Confirm’ ಆಯ್ಕೆಯನ್ನು ಒತ್ತಿ ಖಚಿತಪಡಿಸಿ.
    ಇಷ್ಟಾದರೆ ಸಾಕು, ನಿಗದಿಪಡಿಸಿದ ಸಮಯಕ್ಕೆ ಸಂದೇಶ ಸ್ವಯಂಚಾಲಿತವಾಗಿ ರವಾನೆಯಾಗಲಿದೆ.

ಯಾವೆಲ್ಲ ಸಂದೇಶಗಳನ್ನು ಶೆಡ್ಯೂಲ್ ಮಾಡಬಹುದು?
ಸದ್ಯಕ್ಕೆ ಪಠ್ಯ ಸಂದೇಶಗಳು, ಲಿಂಕ್‌ಗಳು, ಫೋಟೋಗಳು ಹಾಗೂ ವಿಡಿಯೋಗಳನ್ನು ಮೊದಲೇ ನಿಗದಿಪಡಿಸಿ ಕಳುಹಿಸಬಹುದು. ಇವು ವಾಟ್ಸಾಪ್‌ನ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಸುರಕ್ಷತಾ ವ್ಯವಸ್ಥೆಯಡಿ ರವಾನೆಯಾಗಲಿವೆ. ಆದರೆ ಪಿಡಿಎಫ್ ಸೇರಿದಂತೆ ಇತರ ದಾಖಲೆಗಳನ್ನು ಶೆಡ್ಯೂಲ್ ಮಾಡುವ ಆಯ್ಕೆ ಸದ್ಯಕ್ಕೆ ಲಭ್ಯವಿಲ್ಲ.

ಶೆಡ್ಯೂಲ್ ಮಾಡಿದ ಮೆಸೇಜ್ ಅಳಿಸಲು ಅವಕಾಶವಿದೆಯೇ?
ಹೌದು. ನಿಗದಿಪಡಿಸಿದ ಸಂದೇಶ ರವಾನೆಯಾಗುವ ಮೊದಲು ಅದನ್ನು ಪರಿಶೀಲಿಸುವುದರ ಜೊತೆಗೆ ಅಗತ್ಯವಿದ್ದರೆ ಅಳಿಸಬಹುದು. ಚಾಟ್ ಮಾಹಿತಿ (Chat Info) ವಿಭಾಗದಲ್ಲಿ ಕಳುಹಿಸಲು ಬಾಕಿ ಇರುವ ಸಂದೇಶಗಳ ಪಟ್ಟಿ ಕಾಣಿಸಿಕೊಳ್ಳುತ್ತದೆ. ಅಲ್ಲಿಂದಲೇ ಸಂದೇಶವನ್ನು ರದ್ದುಗೊಳಿಸಬಹುದು ಅಥವಾ ಅಳಿಸಬಹುದು. ಸಂದೇಶ ಇನ್ನೂ ರವಾನೆಯಾಗದಿರುವುದರಿಂದ ಅದನ್ನು ಅಳಿಸಿದರೆ ಎದುರಿನವರಿಗೆ ಯಾವುದೇ ಮಾಹಿತಿ ಹೋಗುವುದಿಲ್ಲ.

ಗ್ರೂಪ್ ಚಾಟ್‌ಗಳಿಗೆ ಏನು ನಿಯಮ?
ಗ್ರೂಪ್‌ಗಳಲ್ಲಿ ಸಂದೇಶ ಶೆಡ್ಯೂಲ್ ಮಾಡುವಾಗಲೂ ಕೆಲವು ನಿಯಮಗಳಿವೆ. ಸಂದೇಶವನ್ನು ನಿಗದಿಪಡಿಸಿದ ಸಮಯದಲ್ಲಿ ಗ್ರೂಪ್‌ನಲ್ಲಿರುವ ಸದಸ್ಯರಿಗೆ ಮಾತ್ರ ಅದು ತಲುಪಲಿದೆ. ಆನಂತರ ಗ್ರೂಪ್‌ಗೆ ಸೇರುವ ಹೊಸ ಸದಸ್ಯರಿಗೆ ಮೊದಲೇ ಶೆಡ್ಯೂಲ್ ಮಾಡಿರುವ ಸಂದೇಶ ಕಾಣಿಸುವುದಿಲ್ಲ.

ಎಲ್ಲರಿಗೂ ಯಾವಾಗ ಲಭ್ಯ?
ವಾಟ್ಸಾಪ್ ಈಗಾಗಲೇ ಆಂಡ್ರಾಯ್ಡ್ ಮತ್ತು ಐಫೋನ್‌ನ ಆಯ್ದ ಬಳಕೆದಾರರಿಗೆ ಈ ಸೌಲಭ್ಯವನ್ನು ಪ್ರಾಯೋಗಿಕವಾಗಿ ಪರಿಚಯಿಸಿದೆ. ನವೆಂಬರ್ 25ರಂದು ತನ್ನ ಅಧಿಕೃತ ‘X’ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಹೊಸ ಫೀಚರ್ ಬಗ್ಗೆ ಮಾಹಿತಿ ನೀಡಿದೆ. ಸದ್ಯ ಹಂತ ಹಂತವಾಗಿ ಬಳಕೆದಾರರಿಗೆ ಈ ಆಯ್ಕೆಯನ್ನು ಒದಗಿಸಲಾಗುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಬಳಕೆದಾರರಿಗೂ ಲಭ್ಯವಾಗುವ ನಿರೀಕ್ಷೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!