ನಿಧನ ವಾರ್ತೆ
Fauja Singh-ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ 114ರ ಹರೆಯದ ಫೌಜಾ ಸಿಂಗ್ ವಾಕಿಂಗ್ ಮಾಡುವಾಗ ಕಾರು ಡಿಕ್ಕಿ ಹೊಡೆದು ಸಾವು
ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ (114) ಅವರು ಜಲಂಧರ್ನಲ್ಲಿ ತಮ್ಮ ಮನೆ ಬಳಿ ವಾಕಿಂಗ್ ಮಾಡುವಾಗ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಚಂಡೀಗಢ: ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ (114) ಅವರು ಜಲಂಧರ್ನಲ್ಲಿ ತಮ್ಮ ಮನೆ ಬಳಿ ವಾಕಿಂಗ್ ಮಾಡುವಾಗ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಘಟನೆಯು ಜುಲೈ 15, 2025ರ ಸಂಜೆ ನಡೆದಿದ್ದು, ಫೌಜಾ ಸಿಂಗ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
2000ದಲ್ಲಿ ತಮ್ಮ ಮ್ಯಾರಥಾನ್ ಪಯಣ ಆರಂಭಿಸಿದ್ದ ಫೌಜಾ ಸಿಂಗ್, 8 ಮ್ಯಾರಥಾನ್ಗಳಲ್ಲಿ ಭಾಗವಹಿಸಿ, ಅತ್ಯಂತ ಹಿರಿಯ ಓಟಗಾರ ಎಂದು ಜಾಗತಿಕ ಖ್ಯಾತಿ ಗಳಿಸಿದ್ದರು. ಆದರೆ, ಜನನ ಪ್ರಮಾಣಪತ್ರ ಇಲ್ಲದ ಕಾರಣ ಅವರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಅಧಿಕೃತವಾಗಿ ನೋಂದಾಯಿಸಲ್ಪಡಲಿಲ್ಲ. ಕೊನೆಯದಾಗಿ, 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಕಾಂಗ್ನ ಮ್ಯಾರಥಾನ್ನಲ್ಲಿ ಓಡಿದ್ದರು.
ಫೌಜಾ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಫೌಜಾ ಸಿಂಗ್ ಅವರ ದೃಢತೆ ಮತ್ತು ಸ್ಫೂರ್ತಿ ಕ್ರೀಡಾಪ್ರಿಯರಿಗೆ ಸದಾ ಸ್ಮರಣೀಯವಾಗಿರಲಿದೆ,” ಎಂದು ಅವರು ಹೇಳಿದ್ದಾರೆ.
ನಿಧನ ವಾರ್ತೆ
Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ.
ಕಾಸರಗೋಡು: ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ.
ನ. 24ರಂದು ಮುಂಜಾನೆ ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಮನ್ಗೆ ವೀಸಾ ನವೀಕರಣಕ್ಕಾಗಿ ತೆರಳಿ ವಾಪಸಾಗುತ್ತಿದ್ದ 41 ಪ್ರಯಾಣಿಕರಿದ್ದ ಬಸ್, ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 11 ಮಂದಿ ಭಾರತೀಯರು ಎಂದು ವರದಿಯಾಗಿದೆ.
ಅಶ್ರಫ್ ಅವರೊಂದಿಗೆ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಸ್ಥಳೀಯ23 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ23 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ23 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ23 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು21 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್24 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್6 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಬಿಗ್ ನ್ಯೂಸ್23 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

















