ಮೈಸೂರು
Dharmasthala case-ಧರ್ಮಸ್ಥಳ ಪ್ರಕರಣ: ಪೊಲೀಸರ ವರದಿ ಬಳಿಕವಷ್ಟೇ ಮುಂದಿನ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ತನಿಖಾ ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕಂಡುಬಂದಲ್ಲಿ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ತನಿಖಾ ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕಂಡುಬಂದಲ್ಲಿ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸರ್ಕಾರವು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಂಪೂರ್ಣವಾಗಿ ಕಾನೂನಿನ ಚೌಕಟ್ಟಿನಲ್ಲಿಯೇ ಕ್ರಮ ಜರುಗಿಸಲಿದೆ” ಎಂದು ಭರವಸೆ ನೀಡಿದರು.
ವರದಿ ಆಧರಿಸಿ ಮುಂದಿನ ಕ್ರಮ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರು ಎಸ್‌ಐಟಿ ರಚನೆಗೆ ಸಲಹೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಸರ್ಕಾರವು ಆ ಸಲಹೆಯ ಪರವಾಗಿಯೂ ಇಲ್ಲ, ವಿರೋಧವಾಗಿಯೂ ಇಲ್ಲ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ವರದಿ ಬಂದ ನಂತರ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು” ಎಂದರು.
10 ವರ್ಷಗಳ ಬಳಿಕ ದೂರುದಾರನ ಹೇಳಿಕೆ
ಪ್ರಕರಣದ ಮಹತ್ವದ ಬೆಳವಣಿಗೆಯೊಂದನ್ನು ವಿವರಿಸಿದ ಸಿಎಂ, “ಕಳೆದ ಹತ್ತು ವರ್ಷಗಳಿಂದ ನಾಪತ್ತೆಯಾಗಿದ್ದ ದೂರುದಾರ ಇದೀಗ ಪತ್ತೆಯಾಗಿದ್ದು, 164ನೇ ಕಲಂ ಅಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿದ್ದಾನೆ. ತಾನೇ ಶವವನ್ನು ಹೂತಿರುವುದಾಗಿ ಆತ ಹೇಳಿಕೊಂಡಿದ್ದಾನೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಇಂದು ಅಥವಾ ನಾಳೆ ವರದಿ ಬರುವ ನಿರೀಕ್ಷೆಯಿದೆ,” ಎಂದು ಮಾಹಿತಿ ನೀಡಿದರು.
ಟೀಕೆಗಳಿಗೆ ತೀಕ್ಷ್ಣ ಉತ್ತರ
‘ತನಿಖೆ ಸರಿಯಾಗಿ ನಡೆಯುತ್ತಿಲ್ಲ’ ಎಂಬ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡಬೇಕಲ್ಲವೇ? ಕಾನೂನು ಬಿಟ್ಟು ಮಾಡಲು ಸಾಧ್ಯವೇ? ಎತ್ತು ಈಯ್ತು ಅಂದರೆ ಕೊಟ್ಟಿಗೆಗೆ ಕಟ್ಟು ಎನ್ನಲಾಗುತ್ತದೆಯೇ? ಎಲ್ಲವನ್ನೂ ಕಾನೂನುಬದ್ಧವಾಗಿಯೇ ಮಾಡುತ್ತೇವೆ,” ಎಂದು ಸ್ಪಷ್ಟಪಡಿಸಿದರು.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
ಮಂಗಳೂರು14 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ18 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ20 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್12 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ13 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಬಿಗ್ ನ್ಯೂಸ್20 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು13 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ15 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















