ಬಿಗ್ ನ್ಯೂಸ್
GST registration-ಬೆಂಗಳೂರು: ವಾರ್ಷಿಕ ವಹಿವಾಟು 40 ಲಕ್ಷ ರೂ. ಮೀರಿದರೆ ಜಿಎಸ್ಟಿ ನೋಂದಣಿ ಕಡ್ಡಾಯ
ವಾಣಿಜ್ಯ ತೆರಿಗೆ ಇಲಾಖೆಯು, ಸರಕು ಪೂರೈಕೆದಾರರ ವಾರ್ಷಿಕ ವಹಿವಾಟು (ನಗದು, ಯುಪಿಐ, ಪಿಒಎಸ್, ಬ್ಯಾಂಕ್ ಖಾತೆ ಅಥವಾ ಇತರ ವಿಧಾನಗಳ ಮೂಲಕ) 40 ಲಕ್ಷ ರೂ. ಮೀರಿದರೆ ಅಥವಾ ಸೇವೆ ಪೂರೈಕೆದಾರರ ವಹಿವಾಟು 20 ಲಕ್ಷ ರೂ. ಮೀರಿದರೆ, ಜಿಎಸ್ಟಿ ನೋಂದಣಿ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ.
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು, ಸರಕು ಪೂರೈಕೆದಾರರ ವಾರ್ಷಿಕ ವಹಿವಾಟು (ನಗದು, ಯುಪಿಐ, ಪಿಒಎಸ್, ಬ್ಯಾಂಕ್ ಖಾತೆ ಅಥವಾ ಇತರ ವಿಧಾನಗಳ ಮೂಲಕ) 40 ಲಕ್ಷ ರೂ. ಮೀರಿದರೆ ಅಥವಾ ಸೇವೆ ಪೂರೈಕೆದಾರರ ವಹಿವಾಟು 20 ಲಕ್ಷ ರೂ. ಮೀರಿದರೆ, ಜಿಎಸ್ಟಿ ನೋಂದಣಿ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ.
ಇಲಾಖೆಯ ಪತ್ರಿಕಾ ಪ್ರಕಟಣೆಯ ಪ್ರಕಾರ, ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇರುವ ವ್ಯಾಪಾರಿಗಳು ಜಿಎಸ್ಟಿ ನೋಂದಣಿಯೊಂದಿಗೆ ರಾಜಿ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡರೆ, ವಹಿವಾಟಿನ ಮೇಲೆ ಶೇ.0.5 ಎಸ್ಜಿಎಸ್ಟಿ ಮತ್ತು ಶೇ.0.5 ಸಿಜಿಎಸ್ಟಿ ತೆರಿಗೆ ಪಾವತಿಸಬಹುದು. ಆದರೆ, ನೋಂದಣಿಯಿಲ್ಲದ ವಹಿವಾಟಿಗೆ ಈ ಪದ್ಧತಿ ಅನ್ವಯಿಸುವುದಿಲ್ಲ.
ವರ್ತಕರು ಗೊಂದಲಕ್ಕೆ ಒಳಗಾಗದೆ, ನೋಟಿಸ್ ಸ್ವೀಕರಿಸಿದ ಕಚೇರಿಗೆ ಭೇಟಿ ನೀಡಿ, ಸೂಕ್ತ ದಾಖಲೆಗಳೊಂದಿಗೆ ವಿವರಣೆ ನೀಡಿದರೆ, ಅಧಿಕಾರಿಗಳು ಜಿಎಸ್ಟಿ ನಿಯಮಗಳನ್ನು ವಿವರಿಸಿ, ತೆರಿಗೆ ವಿನಾಯಿತಿ ಸರಕು/ಸೇವೆಗಳನ್ನು ಹೊರತುಪಡಿಸಿ, ತೆರಿಗೆ ವಿಧಿಸಬಹುದಾದ ವಹಿವಾಟಿಗೆ ಮಾತ್ರ ತೆರಿಗೆ ವಿಧಿಸುತ್ತಾರೆ.
ನಿವ್ವಳ ತೆರಿಗೆ ಪಾವತಿ:
ಜಿಎಸ್ಟಿ ಅಡಿಯಲ್ಲಿ ಸಾಮಾನ್ಯ ನೋಂದಣಿ ಪಡೆದ ವರ್ತಕರಿಗೆ, ತೆರಿಗೆ ಬಾಧ್ಯತೆಯು ತೆರಿಗೆ ವಿಧಿಸಬಹುದಾದ ಸರಕು/ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ಖರೀದಿಯ ಮೇಲಿನ ಹೂಡಿಕೆ ತೆರಿಗೆಯನ್ನು ಮಾರಾಟದ ತೆರಿಗೆಗೆ ಹೊಂದಾಣಿಕೆ ಮಾಡಿಕೊಂಡು, ನಿವ್ವಳ ತೆರಿಗೆಯನ್ನು ಪಾವತಿಸಬೇಕು. ಇದರಿಂದ ಮೌಲ್ಯವರ್ಧನೆಯ ತೆರಿಗೆ ಮೊತ್ತ ಕಡಿಮೆಯಾಗಿರುತ್ತದೆ.
ನಗದು ವಹಿವಾಟು:
ಕೆಲವು ವರ್ತಕರು ನೋಟಿಸ್ ಬಂದ ನಂತರ ಯುಪಿಐ ಬದಲು ನಗದಿನಲ್ಲಿ ಹಣ ಸ್ವೀಕರಿಸುತ್ತಿದ್ದಾರೆ ಎಂದು ಇಲಾಖೆ ಗಮನಿಸಿದೆ. ಆದರೆ, ಯಾವುದೇ ರೂಪದಲ್ಲಿ ಪಡೆದ ವಹಿವಾಟಿನ ಮೇಲೆ ಜಿಎಸ್ಟಿ ತೆರಿಗೆ ಅನ್ವಯವಾಗುತ್ತದೆ. ಇದಕ್ಕೆ ಇಲಾಖೆಯು ಕಾನೂನು ಕ್ರಮ ಕೈಗೊಳ್ಳಲಿದೆ.
ಶೇ.90 ವರ್ತಕರಿಂದ ತೆರಿಗೆ ಪಾವತಿ:
ರಾಜ್ಯದಲ್ಲಿ 98,915 ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ನೋಂದಣಿಯಾಗಿ ವ್ಯಾಪಾರ ನಡೆಸುತ್ತಿದ್ದಾರೆ. 40 ಲಕ್ಷ ರೂ. (ಸರಕು) ಅಥವಾ 20 ಲಕ್ಷ ರೂ. (ಸೇವೆ) ಮೀರಿದ ವಹಿವಾಟಿನ ನೋಂದಣಿಯಿಲ್ಲದ ವರ್ತಕರಿಗೆ ನೋಟಿಸ್ಗಳನ್ನು ನೀಡಲಾಗುತ್ತಿದೆ. ಶೇ.90 ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ಶೇ.1 ತೆರಿಗೆ ಪಾವತಿಸುತ್ತಿದ್ದು, ಉಳಿದ ಶೇ.10 ವರ್ತಕರು ತೆರಿಗೆ ಪಾವತಿಸದಿರುವುದು ಸರಿಯಲ್ಲ ಎಂದು ಇಲಾಖೆ ತಿಳಿಸಿದೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















