ಅಪರಾಧ
ದರೋಡೆ ಆರೋಪಿಗೆ ಪೊಲೀಸರ ಹೆಸರೇಳಿ 3 ಲಕ್ಷ ಟೋಪಿ ಹಾಕಿದ ಜನಪ್ರತಿನಿಧಿ …! ಮಂಗಳೂರಿನಲ್ಲೊಂದು ವಿಶೇಷ ಪ್ರಕರಣ
ಮಂಗಳೂರು : ವಿಶೇಷ ಪ್ರಕರಣವೊಂದರಲ್ಲಿ ದರೋಡೆ ಆರೋಪಿಯೊಬ್ಬನಿಗೆ ಜನ ಪ್ರತಿನಿಧಿಯೊಬ್ಬ ವಂಚಿಸಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪಾವೂರು ಗ್ರಾಮದ ಮಲಾರ್ ನಿವಾಸಿ ಅಬ್ದುಲ್ ಖಾದರ್ ರಿಝ್ವಾನ್ (28) ಬಂಧಿತ ಗ್ರಾ. ಪಂ ಸದಸ್ಯ .
ದರೋಡೆ ಆರೋಪಿಯೊಬ್ಬನಿಂದ ರಿಝ್ವಾನ್ ಹಾಗೂ ಇನ್ನೊಬ್ಬ ಆರೋಪಿಯು ಆತನ ಮೇಲಿರುವ ಪ್ರಕರಣದಿಂದ ಹೆಸರನ್ನು ತೆಗೆಸುವುದಾಗಿ ಭರವಸೆ ನೀಡಿ 2.95 ಲ.ರೂ.ವನ್ನು ಸುಲಿಗೆ ಮಾಡಿದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಅಬ್ದುಲ್ ಖಾದರ್ ರಿಝ್ವಾನ್ನನ್ನು ಬಂಧಿಸಿದ್ದಾರೆ. ಪ್ರಕರಣದ ಇನ್ನೋರ್ವ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಏನಿದು ಪ್ರಕರಣ ?
2021ರ ಡಿಸೆಂಬರ್ ತಿಂಗಳಿನಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದಲ್ಲಿನ ಆರೋಪಿಯು ತಲೆಮರೆಸಿಕೊಂಡಿದ್ದ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಈ ವೇಳೆ ದರೋಡೆ ಆರೋಪಿಯನ್ನು ಇಬ್ಬರು ಸಂಪರ್ಕಿಸಿದ್ದಾರೆ. ಅದರಲ್ಲಿ ಒಬ್ಬಾತ ರಿಜ್ವಾನ್ ಎನ್ನಲಾಗಿದೆ. ಈ ಇಬ್ಬರು ನಮಗೆ ಸುರತ್ಕಲ್ʼನ ಪೊಲೀಸರ ಪರಿಚಯವಿರುವುದಾಗಿ ತಿಳಿಸಿ, ಹಣ ನೀಡಿದರೆ ಪೊಲೀಸರ ಮೇಲೆ ಪ್ರಭಾವ ಬೀರಿ ದರೋಡೆ ಪ್ರಕರಣದ FIR ನಿಂದ ಹೆಸರು ತೆಗೆಸುವುದಾಗಿ ಆಮಿಷವೊಡ್ಡಿದ್ದಾರೆ.

ಅವರು 3 ಲ.ರೂ.ಗೆ ಬೇಡಿಕೆ ಇಟ್ಟಿದ್ದು ದರೋಡೆ ಆರೋಪಿಯು ಹಂತ ಹಂತವಾಗಿ 2.95 ಲಕ್ಷ ರೂ. ನೀಡಿದ್ದ. ಹಣವನ್ನು ಪಡೆದ ಬಳಿಕವೂ ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದರು. ಈ ಮಾಹಿತಿ ಪಡೆದ ಆತ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಳಿಕ ತಾನು ಮೋಸ ಹೋದ ವಿಷಯ ತಿಳಿದ ದರೋಡೆ ಪ್ರಕರಣದ ಆರೋಪಿಯು ಹಣ ಪಡೆದುಕೊಂಡ ವ್ಯಕ್ತಿಗಳಿಂದ ಹಣ ವಾಪಸ್ ಮಾಡುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಅವರು ಹಣದ ವಿಚಾರದಲ್ಲಿ ಕರೆ ಮಾಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಹಾಗೂ ಪುನ : 30 ಸಾವಿರ ರೂ.ವನ್ನು ನೀಡುವಂತೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಹಾಗಾಗಿ ಹಣವನ್ನು ಸುಲಿಗೆ ಮಾಡಿದ ಆರೋಪಿಗಳ ವಿರುದ್ಧ ಹಣವನ್ನು ಕಳೆದುಕೊಂಡ ವ್ಯಕ್ತಿಯು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದ..
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಶಿಕ್ಷಣ13 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ6 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ11 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ12 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ11 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ರಾಜಕೀಯ6 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಅಪರಾಧ12 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ11 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















