ಸ್ಥಳೀಯ
Dharmasthala-ಧರ್ಮಸ್ಥಳ: ಕಬ್ಬ ಶರಣ್ ವಿರುದ್ಧ ದೂರು; ಶಾಂತಿಭಂಗ, ಪ್ರಚೋದನಕಾರಿ ಹೇಳಿಕೆ ಆರೋಪ
ಕ್ಷೇತ್ರದ ಆವರಣದಲ್ಲಿ ಶಾಂತಿಭಂಗಕ್ಕೆ ಯತ್ನಿಸಿದ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹೋರಾಟಗಾರ ಶರಣ್ ಬಸಪ್ಪ (ಕಬ್ಬ ಶರಣ್), ಅಭಿ ಕನ್ನಡಿಗ ಮತ್ತು ಇತರರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧರ್ಮಸ್ಥಳ : ಕ್ಷೇತ್ರದ ಆವರಣದಲ್ಲಿ ಶಾಂತಿಭಂಗಕ್ಕೆ ಯತ್ನಿಸಿದ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹೋರಾಟಗಾರ ಶರಣ್ ಬಸಪ್ಪ (ಕಬ್ಬ ಶರಣ್), ಅಭಿ ಕನ್ನಡಿಗ ಮತ್ತು ಇತರರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧರ್ಮಸ್ಥಳ ಮೂಡಂಗಲ್ ನಿವಾಸಿ ಅಭಿದೇವ್ ಆರಿಗ ಎಂಬುವವರು ಈ ದೂರು ನೀಡಿದ್ದಾರೆ. ಜುಲೈ 21ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಆರೋಪಿಗಳು, ಇಲ್ಲಿನ ಗ್ರಾಮಸ್ಥರು ಹಾಗೂ ಭಕ್ತರನ್ನು ನಿಂದಿಸಿ, ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
“ಧರ್ಮಸ್ಥಳದ ಘಟನೆಗಳಿಗೆ ಸ್ಥಳೀಯರೇ ಹೊಣೆಗಾರರು” ಹಾಗೂ “ಭಾರತಕ್ಕೊಂದು ಸಂವಿಧಾನ, ಧರ್ಮಸ್ಥಳಕ್ಕೊಂದು ಸಂವಿಧಾನ” ಎಂಬಂತಹ ಆಧಾರರಹಿತ ಮಾತುಗಳನ್ನಾಡಿ, ಸಾರ್ವಜನಿಕರನ್ನು ಪ್ರಚೋದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
“ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ಹೇಳುವ ಮೂಲಕ, ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ, ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆಯೂ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಆದ್ದರಿಂದ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
-
ಬಿಗ್ ನ್ಯೂಸ್23 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ21 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ23 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ22 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್7 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ6 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ6 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಮಂಗಳೂರು23 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















