ಬಿಗ್ ನ್ಯೂಸ್
Dharmasthala | ಧರ್ಮಸ್ಥಳ ಪ್ರಕರಣ : ಎಸ್ಐಟಿ ತಂಡಕ್ಕೆ 20 ಅಧಿಕಾರಿಗಳ ಸೇರ್ಪಡೆಗೊಳಿಸಿ ಡಿಜಿಪಿ ಆದೇಶ
ಬೆಂಗಳೂರು: ಧರ್ಮಸ್ಥಳದ (Dharmasthala) ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಸಹಜ ಸಾವುಗಳು ಹಾಗೂ ಶವ ಹೂತಿರುವುದರ ಕುರಿತು ತನಿಖೆಗೆ ಭಾರೀ ಒತ್ತಾಯ ಕೇಳಿ ಬಂದಿದೆ. ಈ ಹಿನ್ನೆಲೆ ಸೂಕ್ತ ತನಿಖೆಗೆಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ತಂಡವನ್ನ ರಚಿಸಿದೆ. ಇದೀಗ ಈ ತಂಡದ ಜೊತೆಗಿರುವ 20 ಅಧಿಕಾರಿಗಳು ಯಾರೆಂದು ಮಾಹಿತಿ ನೀಡಿದೆ.
ಎಸ್ಐಟಿ ತಂಡಕ್ಕೆ ಹೆಚ್ಚುವರಿಯಾಗಿ 20 ಮಂದಿ ಅಧಿಕಾರಿ, ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಕ್ಕೆ 20 ಮಂದಿ ನಿಯೋಜನೆಯಾಗಿದೆ. ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ತಂಡವನ್ನು ರಾಜ್ಯ ಡಿಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ತನಿಖಾ ತಂಡದ ಇತರೆ ಸಿಬ್ಬಂದಿಗಳು
ಮಂಗಳೂರು ಡಿಸಿಆರ್ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್ಪಿ ಮಂಜುನಾಥ್, ಸಿಎಸ್ಪಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್, ಸಿಎಸ್ಪಿ ಇನ್ಸ್ಪೆಕ್ಟರ್ ಇಸಿ ಸಂಪತ್, ಸಿಎಸ್ಪಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಸುಮಧರ್ ತಂಡದಲ್ಲಿದ್ದಾರೆ.
ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರು ತೇಜ್, ಸಿಎಸ್ಪಿ ಸಬ್ಇನ್ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್ಪಿ ಸಬ್ಇನ್ಸ್ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್ಪಿ ಸಬ್ಇನ್ಸ್ಪೆಕ್ಟರ್ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆರ್.ಸುಹಾಸ್ ಇದ್ದಾರೆ.
ಉತ್ತರ ಕನ್ನಡ ಮುಂಡಗೋಡು ಸಬ್ಇನ್ಸ್ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್ಇನ್ಸ್ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಹರೀಶ್ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್ಕಾನ್ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್ಕಾನ್ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್ಎಂಎಸ್ ಹೆಡ್ಕಾನ್ಸ್ಟೆಬಲ್ ದೇವರಾಜ್ ಅವರನ್ನು ನಿಯೋಜನೆ ಮಾಡಲಾಗಿದೆ.
ಬಿಗ್ ನ್ಯೂಸ್
Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.
ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.
ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.
ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.
ಬಿಗ್ ನ್ಯೂಸ್
Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.
ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ
Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.
ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ
ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.
ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.
ಹಣ ಪಾವತಿಸದಿದ್ದರೆ ಒಡವೆ ಹರಾಜು?
ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.
ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.
ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.
-
Uncategorized17 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ22 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ22 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ರಾಜಕೀಯ22 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ22 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಶಿಕ್ಷಣ22 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















