ಪುತ್ತೂರು
ಪುತ್ತೂರು: ಇಂದು (ಜು.24) ಶಾಲೆಗಳಿಗೆ ರಜೆ ಘೋಷಣೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿಗೂ ರಜೆ ಘೋಷಣೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಉಡುಪಿ ಜಿಲ್ಲೆಗೆ ರಜೆ ಘೋಷಣೆ ಯಾಗಿದೆ. ಮಂಗಳೂರು ತಾಲೂಕಿಗೂ ರಜೆ ಘೋಷಣೆಯಾಗಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ನಿಧನ ವಾರ್ತೆ16 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು14 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು12 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ16 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ15 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ15 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ15 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ17 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















