ಕೊಡಗು
Koyanadu-Big Breaking News: ಕೊಯನಾಡು ಬಳಿ ಭೀಕರ ಅಪಘಾತ: ಲಾರಿಗೆ ಕಾರು ಢಿಕ್ಕಿ, ನಾಲ್ವರು ಯುವಕರ ದಾರುಣ ಸಾವು; ಉಳ್ಳಾಲದಿಂದ ವಾಪಸ್ಸು ಹೋಗುತ್ತಿದ್ದಾಗ ದುರ್ಘಟನೆ
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಮಡಿಕೇರಿ, ಜುಲೈ 25– ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಗೊಣಿಕೊಪ್ಪ ನಿವಾಸಿಗಳಾದ ನಿಹಾದ್, ರಿಝಾನ್ ಮತ್ತು ಹುಣಸೂರಿನ ರಾಖಿಬ್ ಮೃತಪಟ್ಟವರು. ಮತ್ತೊಬ್ಬ ಮೃತನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರ:
ಗೊಣಿಕೊಪ್ಪ ಮತ್ತು ಹುಣಸೂರು ಮೂಲದ ಈ ಯುವಕರು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲಕ್ಕೆ ತೆರಳಿದ್ದು, ಇಂದು ತಮ್ಮ ಊರುಗಳಿಗೆ ವಾಪಸಾಗುತ್ತಿದ್ದರು. ಈ ವೇಳೆ, ಮಡಿಕೇರಿಯಿಂದ ಸುಳ್ಯದ ಕಡೆಗೆ ಸಾಗುತ್ತಿದ್ದ ಲಾರಿ, ಇವರ ಕಾರಿಗೆ ರಭಸವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುದ್ದಿ ತಿಳಿದ ತಕ್ಷಣ ಕೊಡಗು ಜಿಲ್ಲಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು
Kodagu-ಕೊಡಗಿನಲ್ಲಿ ವರುಣನ ಅಬ್ಬರ: ಮರಳಿ ಮೈದುಂಬಿದ ಭಾಗಮಂಡಲದ ತ್ರಿವೇಣಿ ಸಂಗಮ..!
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಜಲಾವೃತಗೊಂಡ ತಟದ ಪ್ರದೇಶಗಳು:
ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ತಟದಲ್ಲಿರುವ ಪ್ರವಾಸಿ ಉದ್ಯಾನವನ ಹಾಗೂ ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ನಿವಾಸಿಗಳು ಮತ್ತು ರೈತರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.
-
ನಿಧನ ವಾರ್ತೆ20 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಮಂಗಳೂರು23 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
Uncategorized18 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ20 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್20 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು19 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ರಾಜಕೀಯ18 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ18 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ


















