ದಕ್ಷಿಣ ಕನ್ನಡ
Dakshina Kannada District Congress : ಕರಾವಳಿ ‘ಕೈ’ ಪಾಳಯದಲ್ಲಿ ಮಹತ್ವದ ಬದಲಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಿಭಜನೆಗೆ ರಂಗ ಸಜ್ಜು ! ದಕ ಜಿಲ್ಲೆಗೆ ಇಬ್ಬರು ಜಿಲ್ಲಾಧ್ಯಕ್ಷರು ! ಯಾರ ಹೆಸರು ಮುಂಚೂಣಿಯಲ್ಲಿ ?

ಮಂಗಳೂರು: ಒಂದು ಕಾಲದಲ್ಲಿ ತನ್ನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದುಹೋದ ಪ್ರಾಬಲ್ಯವನ್ನು ಮರಳಿ ಸ್ಥಾಪಿಸಲು ಕಾಂಗ್ರೆಸ್ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಸುಮಾರು ಮೂರು ದಶಕಗಳಿಂದ ಜಿಲ್ಲೆಯ ರಾಜಕೀಯದ ಮೇಲಿನ ಹಿಡಿತವನ್ನು ಸಡಿಲಿಸಿಕೊಂಡಿರುವ ‘ಕೈ’ ಪಡೆ, ಪಕ್ಷಕ್ಕೆ ಹೊಸ ಚೈತನ್ಯ ತುಂಬಲು ಸಂಘಟನಾತ್ಮಕ ಸರ್ಜರಿಗೆ ಮುಂದಾಗಿದೆ. ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಜಿಲ್ಲಾ ಕಾಂಗ್ರೆಸ್ ಸಮಿತಿಯನ್ನು (ಡಿಸಿಸಿ) ಎರಡು ಭಾಗಗಳಾಗಿ ವಿಭಜಿಸಲು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನಿಸಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಖಚಿತಪಡಿಸಿವೆ.
ಈ ಮಹತ್ವದ ಬದಲಾವಣೆಯಂತೆ, ‘ಮಂಗಳೂರು ನಗರ’ ಹಾಗೂ ‘ದಕ್ಷಿಣ ಕನ್ನಡ ಗ್ರಾಮಾಂತರ’ ಎಂಬ ಎರಡು ಪ್ರತ್ಯೇಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಅಸ್ತಿತ್ವಕ್ಕೆ ಬರಲಿದ್ದು, ಎರಡೂ ಘಟಕಗಳಿಗೆ ಪ್ರತ್ಯೇಕ ಅಧ್ಯಕ್ಷರನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಈ ಮೂಲಕ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳ ರಾಜಕೀಯ ಸೂಕ್ಷ್ಮತೆಗಳಿಗೆ ತಕ್ಕಂತೆ ಕಾರ್ಯತಂತ್ರ ರೂಪಿಸುವುದು ಹೈಕಮಾಂಡ್ನ ಉದ್ದೇಶವಾಗಿದೆ.
ವಿಭಜನೆಯ ಸೂತ್ರ ಹೀಗಿದೆ :
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳನ್ನು ತಲಾ ನಾಲ್ಕರಂತೆ ಎರಡು ಸಮಿತಿಗಳಿಗೆ ಹಂಚಿಕೆ ಮಾಡಲಾಗುತ್ತದೆ.
ಮಂಗಳೂರು ನಗರ ಜಿಲ್ಲಾ ಸಮಿತಿ: ಮಂಗಳೂರು (ಉಳ್ಳಾಲ), ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳು.
ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಸಮಿತಿ: ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳು.
ಮಹಿಳಾ ಘಟಕದಲ್ಲಿ ಈಗಾಗಲೇ ಜಾರಿ
ಈ ವಿಭಜನೆಯ ಸೂತ್ರಕ್ಕೆ ಈಗಾಗಲೇ ಮಹಿಳಾ ಕಾಂಗ್ರೆಸ್ ಘಟಕದಲ್ಲಿ ಚಾಲನೆ ನೀಡಿರುವುದು ಈ ವದಂತಿಗೆ ಪುಷ್ಟಿ ನೀಡಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಗುರುವಾರವಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ಗೆ ಇಬ್ಬರು ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ನಗರ ಘಟಕಕ್ಕೆ ಉಷಾ ಆಂಚನ್ ಹಾಗೂ ದಕ್ಷಿಣ ಕನ್ನಡ ಗ್ರಾಮಾಂತರ ಘಟಕಕ್ಕೆ ಅಪ್ಪಿ ಎಸ್. ಅವರನ್ನು ನೇಮಕ ಮಾಡಲಾಗಿದೆ. ಇದೇ ಮಾದರಿಯಲ್ಲಿ ಶೀಘ್ರದಲ್ಲೇ ಜಿಲ್ಲಾ ಕಾಂಗ್ರೆಸ್ ಸಮಿತಿಗೂ ಇಬ್ಬರು ಅಧ್ಯಕ್ಷರು ನೇಮಕಗೊಳ್ಳಲಿದ್ದಾರೆ ಎನ್ನಲಾಗಿದೆ.
ಅಧ್ಯಕ್ಷ ಗಾದಿಗೆ ಯಾರ ಹೆಸರು?
ಈ ಮಹತ್ವದ ಹುದ್ದೆಗಳಿಗೆ ಸಂಭಾವ್ಯರ ಪಟ್ಟಿಯೂ ಸಿದ್ಧವಾಗಿದ್ದು, ಪ್ರಬಲ ಜಾತಿ ಸಮೀಕರಣ ಹಾಗೂ ಸಂಘಟನಾ ಚಾಕಚಕ್ಯತೆಯನ್ನು ಮಾನದಂಡವಾಗಿಟ್ಟುಕೊಂಡು ಹೆಸರುಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆದಿದೆ. ಸದ್ಯ ಇರುವ ಡಿಸಿಸಿ ಅಧ್ಯಕ್ಷರ ಅವಧಿ ಈಗಾಗಲೇ ಮುಗಿದು 2 ವರ್ಷ ಕಳೆದಿದ್ದು, ಅವರಿಗೆ ಇನ್ನಷ್ಟು ಅವಧಿ ವಿಸ್ತರಣೆ ಸಿಗುವ ಸಾಧ್ಯತೆಯಿಲ್ಲ.
ಮಂಗಳೂರಿಗೆ ಪದ್ಮರಾಜ್?:
ಮಂಗಳೂರು ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದರೂ ಪ್ರಬಲ ಪೈಪೋಟಿ ನೀಡಿದ್ದ ಪದ್ಮರಾಜ್ ಆರ್. ಪೂಜಾರಿ ಅವರ ಹೆಸರು ಮುಂಚೂಣಿಯಲ್ಲಿದೆ. ಜಿಲ್ಲೆಯ ಪ್ರಬಲ ಬಿಲ್ಲವ ಸಮುದಾಯದ ಯುವ ನಾಯಕರಾಗಿರುವ ಅವರು, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಗರಡಿಯಲ್ಲಿ ಪಳಗಿದವರು. ನಗರ ಸಮಿತಿ ವ್ಯಾಪ್ತಿಯಲ್ಲಿ ನಿರ್ಣಾಯಕ ಸಂಖ್ಯೆಯಲ್ಲಿರುವ ಬಿಲ್ಲವ ಮತಗಳನ್ನು ಸೆಳೆಯಲು ಪದ್ಮರಾಜ್ ನೇಮಕ ಸಹಕಾರಿಯಾಗಲಿದೆ ಎಂಬುದು ಹೈಕಮಾಂಡ್ನ ಲೆಕ್ಕಾಚಾರ.
ಗ್ರಾಮಾಂತರಕ್ಕೆ ವಿಶ್ವನಾಥ ರೈ?:
ಇನ್ನು, ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಶಿಸ್ತಿನ ಗೂಡಾಗಿದ್ದ ಸ್ಥಳೀಯ ಕಾಂಗ್ರೆಸ್ನಲ್ಲಿ ಶಿಸ್ತು ಮತ್ತು ಒಗ್ಗಟ್ಟು ತಂದ ಕೀರ್ತಿ ಅವರದ್ದು. ಅವರ ಸಂಘಟನಾ ಕೌಶಲ್ಯವು ಗ್ರಾಮಾಂತರ ಭಾಗದಲ್ಲಿ ಪಕ್ಷದ ಬೇರುಗಳನ್ನು ಬಲಪಡಿಸಲು ನೆರವಾಗಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ಹೊಂದಿದ್ದಾರೆ. ಅಲ್ಲದೇ ಇವರು ಬಂಟ ಸಮುದಾಯಕ್ಕೆ ಸೇರಿದ್ದು ಜಿಲ್ಲೆಯಲ್ಲಿನಿರ್ಣಾಯಕ ಸಂಖ್ಯೆಯಲ್ಲಿರುವ ಆ ಸಮುದಾಯಕ್ಕೂ ಮನ್ನಣೆ ನೀಡಿದಂತಾಗುತ್ತದೆ.
ವಿಭಜನೆಯ ಹಿಂದಿನ ಲೆಕ್ಕಾಚಾರ
ನಗರ ಮತ್ತು ಗ್ರಾಮೀಣ ಪ್ರದೇಶಗಳ ರಾಜಕೀಯ ಸವಾಲುಗಳು ವಿಭಿನ್ನವಾಗಿರುವುದರಿಂದ ಒಂದೇ ಘಟಕದ ಅಡಿಯಲ್ಲಿ ಎರಡನ್ನೂ ನಿಭಾಯಿಸುವುದು ಕಷ್ಟಕರ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿತ್ತು. ಈ ವಿಭಜನೆಯಿಂದಾಗಿ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚು ಗಮನ ಹರಿಸಲು ಹಾಗೂ ನಿರ್ದಿಷ್ಟ ಕಾರ್ಯತಂತ್ರಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ಈ “ವಿಭಜಿಸಿ, ಬಲಪಡಿಸುವ” ತಂತ್ರವು ಕರಾವಳಿಯಲ್ಲಿ ಕಾಂಗ್ರೆಸ್ಗೆ ಎಷ್ಟರಮಟ್ಟಿಗೆ ಫಲ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
Uncategorized9 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized8 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized6 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized10 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized9 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized8 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















