Connect with us

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ – ಯೋಧ ನಮನ

Published

on



Ad Widget

Ad Widget

Ad Widget

Ad Widget

ಭಾರತ ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವಾದ ಜುಲೈ 26ರಂದು ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ – ಯೋಧ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget

Ad Widget

ಭಾರತ ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವಾದ ಜುಲೈ 26ರಂದು ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ – ಯೋಧ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ಅವರು ವಹಿಸಿಕೊಂಡು “ಕಾರ್ಗಿಲ್ ವಿಜಯ ದಿವಸವು ಕೇವಲ ಸಂಭ್ರಮಾಚರಣೆ ಅಲ್ಲ,ಬದಲಿಗೆ ಹಗಲು-ಇರುಳು, ಮಳೆ-ಗಾಳಿ ಎನ್ನದೆ ಗಡಿ ಕಾಯುವ ಯೋಧರ ಬಲಿದಾನವನ್ನು ಸ್ಮರಿಸುವ ಅಪೂರ್ವ ಸಂದರ್ಭವಾಗಿದೆ. ಸೈನಿಕರು ಕೇವಲ ಹೊಟ್ಟೆಪಾಡಿಗಾಗಿ ಸೈನ್ಯ ಸೇರುತ್ತಾರೆ ಎಂಬ ಮೂರ್ಖತನದ ಹೇಳಿಕೆ ಸಲ್ಲದು. ಈ ದೇಶದ ಪ್ರತಿಯೊಬ್ಬ ಭಾರತೀಯನಿಗೂ ತಾವು ಜನ್ಮವೆತ್ತ ಈ ನಾಡಿನ ಬಗ್ಗೆ ಹೆಮ್ಮೆ ಹಾಗೂ ಅಭಿಮಾನ ಇರಬೇಕು.” ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಸಬ್ ಇನ್ ಸ್ಪೆಕ್ಟರ್ ಬಾಲಕೃಷ್ಣ ಎನ್. ಎ. ಹಾಗೂ ನಿವೃತ್ತ ಸಹಾಯಕ ಸಬ್ ಇನ್ ಸ್ಪೆಕ್ಟರ್ ಪದ್ಮನಾಭ ಸೊರಂಜಾ ಇವರು ಪಾಲ್ಗೊಂಡರು.

Ad Widget

Ad Widget <> Ad Widget

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಬಾಲಕೃಷ್ಣ ಎನ್. ಎ. ಅವರು “ದೇಶ ಸೇವೆ ಎಂಬುದು ಅತ್ಯಂತ ಶ್ರೇಷ್ಠವಾದ ಸೇವೆ. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಸೈನ್ಯಕ್ಕೆ ಸೇರಿ ದೇಶಕ್ಕಾಗಿ ದುಡಿಯಲು ಹಲವು ವಿಧದ ಸೌಲಭ್ಯಗಳಿವೆ. ಅದೇ ರೀತಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಪುರುಷರಿಗೆ ಹಾಗೂ ಮಹಿಳೆಯರಿಗೆ ಸಮಾನವಾದ ಅವಕಾಶಗಳಿವೆ. ಅದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಂಡು, ದೇಶದ ಸಂರಕ್ಷಣೆ ತನ್ನ ಕರ್ತವ್ಯ ಎಂಬುದನ್ನು ಮನಗಂಡು ಸಾಧ್ಯವಾದಷ್ಟು ಸಂಖ್ಯೆಯಲ್ಲಿ ಸೈನ್ಯವನ್ನು ಸೇರುವ ಕಡೆ ನಮ್ಮ ಗಮನವನ್ನು ಕೇಂದ್ರೀಕರಿಸಬೇಕು” ಎಂದರು.



Ad Widget

ಕಾರ್ಗಿಲ್ ಯುದ್ಧದ ಹಿನ್ನಲೆ, ಆ ಸಂದರ್ಭದಲ್ಲಿ ಭಾರತವು ಎದುರಿಸಬೇಕಾಗಿ ಬಂದ ಹಲವು ಸನ್ನಿವೇಶಗಳ ಕುರಿತಾದ ಸವಿವರವಾದ ಮಾಹಿತಿಯನ್ನು ಇಲೆಕ್ಟ್ರಾನಿಕ್ಸ್ ವಿಭಾಗದ ಭೀಮ ಭಾರದ್ವಾಜ್ ನೀಡಿದರು. ಬಳಿಕ ನಿವೃತ್ತ ಯೋಧರಾದ ಬಾಲಕೃಷ್ಣ ಎನ್. ಎ. ಹಾಗೂ ಪದ್ಮನಾಭ ಸೊರಂಜಾ ಇವರನ್ನು ಕಾಲೇಜಿನ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು. ಜತೆಗೆ ದೇಶಕ್ಕಾಗಿ ಪ್ರಾಣವನ್ನರ್ಪಿಸಿದ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗಿಯಾದರು. ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುತ್ತಾ ಸೇನಾ ನಮನ ಗೀತೆಯನ್ನು ಹಾಡಿದರು. ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಎ. ಎಂ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.



Ad Widget

ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

Ad Widget

Ad Widget

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.

ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.

‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Ad Widget
Continue Reading

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ -ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲಕಿಯರ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ೪೪ ಕೆ.ಜಿ, ದ್ರಿಶ್ಯ 68 ಕೆ .ಜಿ ವಿಭಾಗ ಬೆಳ್ಳಿ ಪದಕ, ಪ್ರಥಮ ವಾಣಿಜ್ಯ ವಿಭಾಗದ ಸಾನ್ವಿ 64 ಕೆ. ಜಿ ವಿಭಾಗ ಕಂಚಿನ ಪದಕ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಘನಶ್ಯಾಮ್ ೫೦ ಕೆ.ಜಿ ವಿಭಾಗ ಬೆಳ್ಳಿ ಪದಕ ಪಡೆದಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Vivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 14 ವರ್ಷಗಳ ಬೋಧನಾನುಭವ ಹೊಂದಿರುವ ಸಹಾಯಕ ಪ್ರಾಧ್ಯಾಪಕ ಪ್ರಮೋದ್ ಕುಮಾರ್.ಪಿ.ಎಮ್ ಅರೇಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಎಂಡ್ ಕ್ಲಾಸಿಫಿಕೇಶನ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್(Areca Plant Disease identification and classification using deep learning techniques) ಎನ್ನುವ ವಿಷಯದ ಬಗ್ಗೆ ತಿಪಟೂರಿನ ಕಲ್ಪತರು ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಡಾ.ರವಿಪ್ರಕಾಶ್.ಎಮ್.ಎಲ್ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ಶ್ರೀಮತಿ ಅಕ್ಷಯ.ಡಿ.ಶೆಟ್ಟಿ ಇವರು ಡಿಸೈನ್ ಎಂಡ್ ವ್ಯಾಲಿಡೇಶನ್ ಆಫ್ ಗ್ಯಾಲ್ವೇನಿಕ್ ಸ್ಕಿನ್ ರೆಸ್ಪೊನ್ಸ್ ಡಿವೈಸ್ ಫಾರ್ ಟ್ರೀಟ್‌ಮೆಂಟ್ ಆಫ್ ನ್ಯೂರೋಲಾಜಿಕಲ್ ಎಂಡ್ ಸೈಕಿಯಾಟ್ರಿಕ್ ಡಿಸಾರ್ಡರ್ಸ್ (Design and Validation of galvanic skin response (GSR) device for treatment of neurological and psychiatric disorders) ಎನ್ನುವ ವಿಷಯದ ಬಗ್ಗೆ ಎಸ್.ಇ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರೊಫೆಸರ್ ಹಾಗೂ ಡೀನ್(ಆರ್&ಡಿ) ಆಗಿರುವ ಡಾ.ಉಷಾ ದೇಸಾಯಿ ಮತ್ತು ಸೆಂಟ್ರಲ್ ಯುನಿವರ್ಸಿಟಿ ಹರ್ಯಾಣದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಡಾ.‌ ಆಕಾಶ್ ಸಕ್ಸೇನ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.



Ad Widget

ಇವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದಲ್ಲಿ 9 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಸಾಧನೆಗೆ ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್.ಎಸ್.ಕೆ ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading