ಸ್ಥಳೀಯ
Koppala-ಕೊಪ್ಪಳ: ಗವಿ ಮಠದಲ್ಲಿ ಮುಸ್ಲಿಂ ಮಹಿಳೆಯಿಂದ ಧ್ಯಾನ; ನಾಗದೇವರಿಗೆ 11 ದಿನಗಳ ಹರಕೆ
ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದ ನಿವಾಸಿ ಹಸೀನಾಬೇಗಂ ಕಳೆದ ಎಂಟು ದಿನಗಳಿಂದ ಗವಿ ಮಠಕ್ಕೆ ಆಗಮಿಸಿ, ನಾಗದೇವರ ಮುಂದೆ ಪ್ರತಿದಿನ ಒಂದು ಗಂಟೆ ಧ್ಯಾನ ಮಾಡುತ್ತಿದ್ದಾರೆ. ಬುರ್ಖಾ ಧರಿಸಿ ಧ್ಯಾನದಲ್ಲಿ ತೊಡಗಿರುವ ಇವರ ದೃಶ್ಯ ಶನಿವಾರ ಭಕ್ತರ ಕಣ್ಣಿಗೆ ಬಿದ್ದು, ಆಶ್ಚರ್ಯ ಮೂಡಿಸಿದೆ.
ಕೊಪ್ಪಳ: ಐತಿಹಾಸಿಕ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಮುಸ್ಲಿಂ ಮಹಿ ಳೆಯೊಬ್ಬರು ಧ್ಯಾನಕ್ಕೆ ಕುಳಿತ ಘಟನೆ ಜುಲೈ 26, 2025ರಂದು ಗಮನ ಸೆಳೆದಿದೆ.
ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದ ನಿವಾಸಿ ಹಸೀನಾಬೇಗಂ ಕಳೆದ ಎಂಟು ದಿನಗಳಿಂದ ಗವಿ ಮಠಕ್ಕೆ ಆಗಮಿಸಿ, ನಾಗದೇವರ ಮುಂದೆ ಪ್ರತಿದಿನ ಒಂದು ಗಂಟೆ ಧ್ಯಾನ ಮಾಡುತ್ತಿದ್ದಾರೆ. ಬುರ್ಖಾ ಧರಿಸಿ ಧ್ಯಾನದಲ್ಲಿ ತೊಡಗಿರುವ ಇವರ ದೃಶ್ಯ ಶನಿವಾರ ಭಕ್ತರ ಕಣ್ಣಿಗೆ ಬಿದ್ದು, ಆಶ್ಚರ್ಯ ಮೂಡಿಸಿದೆ.
ಗವಿ ಮಠಕ್ಕೆ ಸಾಮಾನ್ಯವಾಗಿ ಹಿಂದೂ ಭಕ್ತರೇ ಹೆಚ್ಚಾಗಿ ಭೇಟಿ ನೀಡುತ್ತಾರೆ. ಆದರೆ, ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರು ಮಾನಸಿಕ ಶಾಂತಿಗಾಗಿ ಇಲ್ಲಿ ಧ್ಯಾನ ಮಾಡುತ್ತಿರುವುದು ವಿಶೇಷವಾಗಿದೆ. ಹಸೀನಾಬೇಗಂ ಅವರು ಒಟ್ಟು 11 ದಿನಗಳ ಕಾಲ ನಾಗದೇವರ ಮುಂದೆ ಧ್ಯಾನ ಮಾಡುವ ಹರಕೆ ಹೊತ್ತಿದ್ದಾರೆ.
ಗವಿ ಮಠವು ಅನ್ನ, ಅಕ್ಷರ ಮತ್ತು ಆಧ್ಯಾತ್ಮದ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದು, 800-1000 ವರ್ಷಗಳ ಇತಿಹಾಸವನ್ನು ಹೊಂದಿದೆ. ಕೊಪ್ಪಳದ ಪೂರ್ವ ಬೆಟ್ಟದ ಮೇಲೆ ನೆಲೆಗೊಂಡಿರುವ ಈ ಮಠವನ್ನು ಶಾಸ್ತ್ರಾಧಿಕ ಶ್ರೀ ರುದ್ರಮುನಿ ಶಿವಯೋಗಿಗಳು ಸ್ಥಾಪಿಸಿದರು. 18 ಪೀಠಾಧಿಪತಿಗಳ ಪರಂಪರೆಯೊಂದಿಗೆ, ಇದು ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾಗಿದೆ.
ಪ್ರತಿ ವರ್ಷ ಸಂಕ್ರಾಂತಿಯ ಸಮಯದಲ್ಲಿ ನಡೆಯುವ ಗವಿಸಿದ್ದೇಶ್ವರ ಜಾತ್ರೆ, ದಕ್ಷಿಣ ಭಾರತದ ಕುಂಭಮೇಳವೆಂದೇ ಪ್ರಸಿದ್ಧವಾಗಿದ್ದು, ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಜಾತ್ರೆಯ ಮಹಾದಾಸೋಹದಲ್ಲಿ ಎಲ್ಲ ಜಾತಿ-ಮತಗಳ ಜನರು ಒಟ್ಟಿಗೆ ಪ್ರಸಾದ ಸ್ವೀಕರಿಸುತ್ತಾರೆ.
ಪ್ರಸ್ತುತ, ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು ಮಠದ ಪೀಠಾಧಿಪತಿಗಳಾಗಿ, ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಮುನ್ನಡೆಸುತ್ತಿದ್ದಾರೆ.
ಬಿಗ್ ನ್ಯೂಸ್
Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.
ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.
ನಿಧನ ವಾರ್ತೆ
Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.
ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
-
ಮಂಗಳೂರು23 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ನಿಧನ ವಾರ್ತೆ6 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized19 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ5 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಸ್ಥಳೀಯ5 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಕ್ರೀಡೆ23 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಮಂಗಳೂರು24 hours agoMangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
-
Uncategorized22 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ


















