Connect with us

ಮಂಗಳೂರು

Bijai Shootout-ಬಿಜೈ ಶೂಟೌಟ್: 10 ವರ್ಷಗಳ ಬಳಿಕ ರವಿ ಪೂಜಾರಿಯ ಶಾರ್ಪ್‌ಶೂಟರ್ ಖೆಡ್ಡಾಕ್ಕೆ!; ಮಂಗಳೂರು ಪೊಲೀಸರ ಬಲೆಗೆ ಬಿದ್ದ ಮಹಾರಾಷ್ಟ್ರದ ಕುಖ್ಯಾತ ಆರೋಪಿ

Published

on

Ad Widget

Ad Widget

Ad Widget

Ad Widget

ನಗರವನ್ನು ಬೆಚ್ಚಿಬೀಳಿಸಿದ್ದ ದಶಕದ ಹಿಂದಿನ ಬಿಜೈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ರವಿ ಪೂಜಾರಿಯ ಬಲಗೈ ಬಂಟನಂತಿದ್ದ ಶಾರ್ಪ್‌ಶೂಟರ್‌ನನ್ನು ಬರೋಬ್ಬರಿ 10 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಕುಖ್ಯಾತ ಶೂಟರ್ ಗಣೇಶ್ ಲಕ್ಷ್ಮಣ್ ಸಕಟ್ (42) ಬಂಧಿತ ಆರೋಪಿಯಾಗಿದ್ದು, ಈತನ ಬಂಧನದಿಂದಾಗಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಜುಲೈ 27: ನಗರವನ್ನು ಬೆಚ್ಚಿಬೀಳಿಸಿದ್ದ ದಶಕದ ಹಿಂದಿನ ಬಿಜೈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ರವಿ ಪೂಜಾರಿಯ ಬಲಗೈ ಬಂಟನಂತಿದ್ದ ಶಾರ್ಪ್‌ಶೂಟರ್‌ನನ್ನು ಬರೋಬ್ಬರಿ 10 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಕುಖ್ಯಾತ ಶೂಟರ್ ಗಣೇಶ್ ಲಕ್ಷ್ಮಣ್ ಸಕಟ್ (42) ಬಂಧಿತ ಆರೋಪಿಯಾಗಿದ್ದು, ಈತನ ಬಂಧನದಿಂದಾಗಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
2014ರಲ್ಲಿ ಮಂಗಳೂರಿನ ಹೃದಯ ಭಾಗವಾದ ಬಿಜೈನಲ್ಲಿರುವ ಭಾರತಿ ಬಿಲ್ಡರ್ಸ್ ಕಚೇರಿಗೆ ನುಗ್ಗಿ, ರವಿ ಪೂಜಾರಿ ಹೆಸರಿನಲ್ಲಿ ಗುಂಡಿನ ದಾಳಿ ನಡೆಸಿ ನಗರದಲ್ಲಿ ಭೀತಿಯ ವಾತಾವರಣ ಸೃಷ್ಟಿಸಲಾಗಿತ್ತು. ಈ ಸಂಬಂಧ ಉರ್ವಾ ಪೊಲೀಸ್ ಠಾಣೆಯಲ್ಲಿ ಹತ್ಯಾಯತ್ನ, ಸಂಚು ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ (23/2014) ದಾಖಲಾಗಿತ್ತು.

Ad Widget

Ad Widget <> Ad Widget

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ:
ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಗಣೇಶ್, 2015ರಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಪೊಲೀಸರ ಕಣ್ಣುತಪ್ಪಿಸಿ ತಲೆಮರೆಸಿಕೊಂಡಿದ್ದ. ಕಳೆದ 9 ವರ್ಷಗಳಿಂದ ಮಹಾರಾಷ್ಟ್ರದ ವಿವಿಧೆಡೆ ವೇಷ ಮರೆಸಿಕೊಂಡು, ತನ್ನ ವಿಳಾಸ ಬದಲಿಸುತ್ತಾ ಪೊಲೀಸರಿಗೆ ಸವಾಲಾಗಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯವು ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಪಂಢರಾಪುರದಲ್ಲಿ ಸಾಹಸಿಕ ಕಾರ್ಯಾಚರಣೆ:
ಆರೋಪಿಯ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದ ಮಂಗಳೂರು ಪೊಲೀಸರು, ಖಚಿತ ಸುಳಿವಿನ ಮೇರೆಗೆ ಮಹಾರಾಷ್ಟ್ರದ ಪಂಢರಾಪುರದಲ್ಲಿ ಕಾರ್ಯಾಚರಣೆ ನಡೆಸಿದರು. ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರ ನೇತೃತ್ವದಲ್ಲಿ ಎಎಸ್‌ಐ ವೇಣುಗೋಪಾಲ್, ಎಚ್‌ಸಿ ಪ್ರಮೋದ್, ಎಚ್‌ಸಿ ನಾರಾಯಣ ಮತ್ತು ಎಚ್‌ಸಿ ಗೋವಿಂದರಾಜ್ ಅವರನ್ನೊಳಗೊಂಡ ತಂಡವು, ಆರೋಪಿಯನ್ನು ಸೆರೆಹಿಡಿದು ಮಂಗಳೂರಿಗೆ ಕರೆತಂದಿದೆ.

Ad Widget

Ad Widget

ಅಪರಾಧಗಳ ಸರದಾರ:
ಬಂಧಿತ ಗಣೇಶ್‌ನನ್ನು ಜುಲೈ 27ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತ ಕೇವಲ ಬಿಜೈ ಶೂಟೌಟ್ ಪ್ರಕರಣದಲ್ಲಿ ಮಾತ್ರವಲ್ಲದೆ, ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಮತ್ತೊಂದು ಬೆದರಿಕೆ ಪ್ರಕರಣದಲ್ಲಿ (44/2014) ಭಾಗಿಯಾಗಿದ್ದ. ಅಲ್ಲದೆ, ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾಡ್‌ನಲ್ಲೂ ಈತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಶಕದ ಬಳಿಕ ಪ್ರಮುಖ ಆರೋಪಿಯ ಬಂಧನದಿಂದಾಗಿ, ಮಂಗಳೂರನ್ನು ನಡುಗಿಸಿದ್ದ ಬಿಜೈ ಶೂಟೌಟ್ ಪ್ರಕರಣದ ತನಿಖೆಗೆ ಮರುಜೀವ ಬಂದಂತಾಗಿದ್ದು, ರವಿ ಪೂಜಾರಿ ಗ್ಯಾಂಗ್‌ನ ಇನ್ನಷ್ಟು ಕರಾಳ ಮುಖಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Click to comment

Leave a Reply

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!