ಆರೋಗ್ಯ
Dragon fruit-ಪೋಷಕಾಂಶಗಳ ಗನಿ ಡ್ರಾಗನ್ ಫ್ರೂಟ್; ನಿಯಮಿತ ಸೇವನೆಯಿಂದ ಮಹಿಳೆಯರಿಗೆ ಹಲವು ಪ್ರಯೋಜನ
ಡ್ರಾಗನ್ ಹಣ್ಣು ಕೇವಲ ರುಚಿಕರವಷ್ಟೇ ಅಲ್ಲ, ಪೋಷಕಾಂಶಗಳ ಗನಿಯೂ ಆಗಿದೆ. ಇದು ಫೈಬರ್ ಮತ್ತು ಪ್ರೋಟೀನ್‌ನಿಂದ ಸಮೃದ್ಧವಾಗಿದ್ದು, ಮೆಗ್ನೀಸಿಯಮ್, ಕ್ಯಾಲ್ಸಿಯಮ್, ಕಬ್ಬಿಣ ಮತ್ತು ರಂಜಕದಂತಹ ಖನಿಜಗಳು ಮತ್ತು ಜಾಡಿನ ಅಂಶಗಳನ್ನು ಹೊಂದಿದೆ.
ಡ್ರಾಗನ್ ಹಣ್ಣು ಕೇವಲ ರುಚಿಕರವಷ್ಟೇ ಅಲ್ಲ, ಪೋಷಕಾಂಶಗಳ ಗನಿಯೂ ಆಗಿದೆ. ಇದು ಫೈಬರ್ ಮತ್ತು ಪ್ರೋಟೀನ್‌ನಿಂದ ಸಮೃದ್ಧವಾಗಿದ್ದು, ಮೆಗ್ನೀಸಿಯಮ್, ಕ್ಯಾಲ್ಸಿಯಮ್, ಕಬ್ಬಿಣ ಮತ್ತು ರಂಜಕದಂತಹ ಖನಿಜಗಳು ಮತ್ತು ಜಾಡಿನ ಅಂಶಗಳನ್ನು ಹೊಂದಿದೆ.
ಈ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಜೊತೆಗೆ, ವಿಟಮಿನ್ ಬಿ1, ಬಿ2, ಮತ್ತು ಬಿ3ಗಳನ್ನೂ ಒಳಗೊಂಡಿದೆ. ಪೌಷ್ಟಿಕತಜ್ಞರ ಪ್ರಕಾರ, ಡ್ರಾಗನ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ವಿಶೇಷವಾಗಿ ಮಹಿಳೆಯರಿಗೆ ಈ ಹಣ್ಣು ಅತ್ಯಂತ ಪ್ರಯೋಜನಕಾರಿಯಾಗಿದೆ.
ಮಹಿಳೆಯರಿಗೆ ಡ್ರಾಗನ್ ಹಣ್ಣಿನ ಪ್ರಯೋಜನಗಳು
ಡ್ರಾಗನ್ ಹಣ್ಣು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ, ಇದು ಮಹಿಳೆಯರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಮುಟ್ಟಿನ ಸಮಯದಲ್ಲಿ ರಕ್ತಸ್ರಾವದಿಂದ ಕಬ್ಬಿಣದ ಕೊರತೆ ಉಂಟಾಗುವ ಸಾಧ್ಯತೆ ಹೆಚ್ಚಿರುವುದರಿಂದ, ಈ ಹಣ್ಣಿನಲ್ಲಿರುವ ಕಬ್ಬಿಣವು ರಕ್ತಹೀನತೆಯನ್ನು ತಡೆಯುತ್ತದೆ ಮತ್ತು ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ.
ಈ ಹಣ್ಣಿನಲ್ಲಿರುವ ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಮ್ ಮೂಳೆಗಳನ್ನು ಬಲಗೊಳಿಸುತ್ತದೆ, ವಿಶೇಷವಾಗಿ ಋತುಬಂಧದ ಸಮಯದಲ್ಲಿ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ. ಫೈಬರ್ ಸಮೃದ್ಧವಾಗಿರುವ ಈ ಹಣ್ಣು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ, ಮಲಬದ್ಧತೆ ಮತ್ತು ಉಬ್ಬರವನ್ನು ತಡೆಯುತ್ತದೆ, ಜೊತೆಗೆ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಸೋಂಕುಗಳನ್ನು ತಡೆಗಟ್ಟುತ್ತದೆ.
ಡ್ರಾಗನ್ ಹಣ್ಣಿನ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್‌ಗಳಿಂದ ಚರ್ಮಕ್ಕೆ ಉಂಟಾಗುವ ಹಾನಿಯನ್ನು ತಡೆಯುತ್ತವೆ, ಚರ್ಮವನ್ನು ಯೌವನಯುತವಾಗಿ ಮತ್ತು ಕಾಂತಿಯುತವಾಗಿ ಇಡುತ್ತವೆ. ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡಿ, ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುತ್ತದೆ. ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್‌ನಿಂದ ತೂಕ ನಿಯಂತ್ರಣಕ್ಕೆ ಇದು ಉತ್ತಮ ಆಯ್ಕೆಯಾಗಿದೆ.
ಗರ್ಭಿಣಿಯರಿಗೆ ಡ್ರಾಗನ್ ಹಣ್ಣಿನಲ್ಲಿರುವ ಫೋಲೇಟ್ ಮುಖ್ಯವಾಗಿದ್ದು, ಇದು ಮಗುವಿನ ಮೆದುಳು ಮತ್ತು ಬೆನ್ನುಹುರಿಯ ಬೆಳವಣಿಗೆಗೆ ಸಹಕಾರಿಯಾಗಿದೆ. ಜೊತೆಗೆ, ಕಬ್ಬಿಣವು ಗರ್ಭಾವಸ್ಥೆಯಲ್ಲಿ ರಕ್ತಹೀನತೆಯನ್ನು ತಡೆಯುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಆಹಾರದಲ್ಲಿ ಡ್ರಾಗನ್ ಹಣ್ಣನ್ನು ಸೇರಿಸಿಕೊಳ್ಳಲು ತಜ್ಞರು ಶಿಫಾರಸು ಮಾಡುತ್ತಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಮಂಗಳೂರು12 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized11 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಅಂತರ ರಾಜ್ಯ9 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್12 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ10 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್4 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ















