ಸ್ಥಳೀಯ
Keshav Gowda-‘ಅನಾಮಿಕ’ ನಟೋರಿಯಸ್ –ಹೆಣದ ಮೇಲಿದ್ದ ಚಿನ್ನ ಕದಿಯುತ್ತಿದ್ದ! ಧರ್ಮಸ್ಥಳ್ದ ಮಾಜಿ ಗ್ರಾ.ಪಂ. ಅಧ್ಯಕ್ಷ ಕೇಶವ ಗೌಡ ಗಂಭೀರ ಆರೋಪ
ಕ್ಷೇತ್ರದ ವಿರುದ್ಧ ಆರೋಪ ಮಾಡುತ್ತಿರುವ ‘ಅನಾಮಿಕ ವ್ಯಕ್ತಿ’ ಬೇರಾರೂ ಅಲ್ಲ, ಆತ ಈ ಹಿಂದೆ ಮೃತದೇಹಗಳ ಮೇಲಿದ್ದ ಚಿನ್ನಾಭರಣ, ಹಣ ಕದ್ದು ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ ನಟೋರಿಯಸ್ ವ್ಯಕ್ತಿ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ವಕೀಲ ಕೇಶವ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಮಂಗಳೂರು: ಕ್ಷೇತ್ರದ ವಿರುದ್ಧ ಆರೋಪ ಮಾಡುತ್ತಿರುವ ‘ಅನಾಮಿಕ ವ್ಯಕ್ತಿ’ ಬೇರಾರೂ ಅಲ್ಲ, ಆತ ಈ ಹಿಂದೆ ಮೃತದೇಹಗಳ ಮೇಲಿದ್ದ ಚಿನ್ನಾಭರಣ, ಹಣ ಕದ್ದು ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ ನಟೋರಿಯಸ್ ವ್ಯಕ್ತಿ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ವಕೀಲ ಕೇಶವ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣದ ಷಡ್ಯಂತ್ರದ ಹಿಂದೆ ಇರುವವರನ್ನು ಪತ್ತೆ ಹಚ್ಚಲು ಎಸ್ಐಟಿ ಮೂಲಕ ಸಮಗ್ರ ತನಿಖೆಯಾಗಬೇಕು ಎಂದು ಅವರು ಬಲವಾಗಿ ಒತ್ತಾಯಿಸಿದ್ದಾರೆ.
‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕ್ಷೇತ್ರದ ಘನತೆಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. “ಧರ್ಮಸ್ಥಳಕ್ಕೆ ಪ್ರತಿದಿನ ಸುಮಾರು 30 ಸಾವಿರ ಭಕ್ತರು, ಪ್ರವಾಸಿಗರು ಬರುತ್ತಾರೆ. ಅವರಲ್ಲಿ ಕೆಲವರು ವಿವಿಧ ಸಮಸ್ಯೆಗಳಿಂದ ನೊಂದು, ಮನನೊಂದು ಇಲ್ಲಿಗೆ ಬಂದು ಜೀವನವನ್ನು ಅಂತ್ಯ ಮಾಡಿಕೊಂಡ ಘಟನೆಗಳು ನಡೆದಿವೆ. ಹೀಗೆ ಮೃತಪಟ್ಟ ಪ್ರವಾಸಿಗರ ಅಂತ್ಯಸಂಸ್ಕಾರ ಮಾಡುವುದೇ ದೊಡ್ಡ ಸವಾಲಾಗಿತ್ತು,” ಎಂದು ಅವರು ವಿವರಿಸಿದರು.
‘ಅನಾಮಿಕ’ನೇ ಕಳ್ಳ, 2014ರಲ್ಲಿ ಉಚ್ಚಾಟನೆ
ಈ ಪ್ರಕರಣದಲ್ಲಿ ಅನಾಮಿಕನಾಗಿ ಉಳಿದು ಆರೋಪ ಮಾಡುತ್ತಿರುವ ವ್ಯಕ್ತಿಯ ಹಿನ್ನೆಲೆಯನ್ನು ಬಿಚ್ಚಿಟ್ಟ ಕೇಶವ ಗೌಡ, “ಈ ವ್ಯಕ್ತಿ ಅಂತ್ಯಸಂಸ್ಕಾರದ ನೆಪದಲ್ಲಿ ಹೆಣಗಳ ಮೇಲಿದ್ದ ಚಿನ್ನ, ಹಣವನ್ನು ಕದಿಯುತ್ತಿದ್ದ. ಈ ನಟೋರಿಯಸ್ ಕೆಲಸ ಗೊತ್ತಾದ ತಕ್ಷಣ 2014ರಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಈಗ ಅದೇ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಕ್ಷೇತ್ರದ ಮೇಲೆ ಆರೋಪ ಮಾಡಿಸಲಾಗುತ್ತಿದೆ. ಈ ಷಡ್ಯಂತ್ರದ ಹಿಂದಿರುವ ಕಾಣದ ಕೈಗಳು ಯಾವುವು ಎಂಬುದು ನಮಗೆ ಗೊತ್ತಿದೆ. ಕ್ಷೇತ್ರದ ಮೇಲೆ ಇಲ್ಲಸಲ್ಲದ ಆರೋಪ ಮಾಡುವವರಿಗೆ ದೇವರು ತಕ್ಕ ಬುದ್ಧಿ ಕಲಿಸುತ್ತಾನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಪರು ಪರೀಕ್ಷೆ, ಬ್ರೈನ್ ಮ್ಯಾಪಿಂಗ್ಗೆ ಆಗ್ರಹ
“ಈ ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ತಕ್ಷಣ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. ಆತನಿಗೆ ಮಂಪರು ಪರೀಕ್ಷೆ (Narco Test) ಮತ್ತು ಆತನ ಹಿಂದಿರುವವರ ಬ್ರೈನ್ ಮ್ಯಾಪಿಂಗ್ (Brain Mapping) ನಡೆಸಬೇಕು. ಆಗಷ್ಟೇ ಸತ್ಯ ಹೊರಬರಲಿದೆ. ಅನಾಮಿಕ ಹೇಳಿದಂತೆ ಇಲ್ಲಿ ಯಾವುದೇ ಕೊಲೆ, ಅತ್ಯಾಚಾರ ನಡೆದಿಲ್ಲ. ಉತ್ಖನನ ನಡೆಸಿದರೆ, ಆತ್ಮಹತ್ಯೆ ಮಾಡಿಕೊಂಡ ಒಂದೆರಡು ಮೃತದೇಹಗಳು ಸಿಕ್ಕರೂ ಅಚ್ಚರಿಯಿಲ್ಲ. ಆದರೆ ಸಾಮೂಹಿಕ ಹತ್ಯೆ ಆರೋಪ ಶುದ್ಧ ಸುಳ್ಳು,” ಎಂದು ಅವರು ಸ್ಪಷ್ಟಪಡಿಸಿದರು.
ಹೆಗ್ಗಡೆಯವರ ರಾಜೀನಾಮೆಗೆ ಆಗ್ರಹ ಹಾಸ್ಯಾಸ್ಪದ
ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ರಾಜೀನಾಮೆಗೆ ಕೆಲವರು ಒತ್ತಾಯಿಸುತ್ತಿರುವುದನ್ನು ಕೇಶವ ಗೌಡ ತೀವ್ರವಾಗಿ ಖಂಡಿಸಿದರು. “ರಾಜೀನಾಮೆ ನೀಡಲು ಅವರು ಮುಖ್ಯಮಂತ್ರಿಯೂ ಅಲ್ಲ, ಶಾಸಕರೂ ಅಲ್ಲ. ಅವರು ಈ ಕ್ಷೇತ್ರದ ಧರ್ಮಾಧಿಕಾರಿ. ಕೆಲವು ವಕೀಲರು ಹತ್ತಾರು ಹೆಣಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಬಣ್ಣದ ಕಾಗೆಗಳನ್ನು ಹಾರಿಸುತ್ತಿದ್ದಾರೆ. ಇವರೆಲ್ಲರ ಬಗ್ಗೆಯೂ ತನಿಖೆಯಾಗಬೇಕು, ಎಲ್ಲಾ ಸತ್ಯಗಳು ಹೊರಬರಬೇಕು,” ಎಂದು ಅವರು ಆಗ್ರಹಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
-
ದಕ್ಷಿಣ ಕನ್ನಡ21 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ20 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ19 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್15 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ18 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ19 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ18 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ20 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















