ಅಪರಾಧ
Areca nut theft-ಅಡಿಕೆ ಕಳ್ಳತನ ಪ್ರಕರಣ: ಸುಳ್ಯದ ವ್ಯಕ್ತಿ ಅಂದರ್; ಲಕ್ಷಾಂತರ ಮೌಲ್ಯದ ಸ್ವತ್ತು ವಶಕ್ಕೆ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಮಾರು ₹2.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ವಾಹನ ಸೇರಿದಂತೆ ₹2.24 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ, ಜು. 29: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಮಾರು ₹2.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ವಾಹನ ಸೇರಿದಂತೆ ₹2.24 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸುಳ್ಯ ತಾಲೂಕಿನ ಪೈಚಾರು ಗ್ರಾಮದ ನಿವಾಸಿ ಸತೀಶ್ (29) ಬಂಧಿತ ಆರೋಪಿ.
ಪ್ರಕರಣದ ವಿವರ:
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22ರ ನಡುವಿನ ಅವಧಿಯಲ್ಲಿ, ಮನೆಯೊಂದರಲ್ಲಿ ದಾಸ್ತಾನು ಮಾಡಲಾಗಿದ್ದ 45 ಪ್ಲಾಸ್ಟಿಕ್ ಚೀಲಗಳಲ್ಲಿದ್ದ ಒಣ ಅಡಿಕೆಯನ್ನು ಕಳ್ಳರು ಕದ್ದೊಯ್ದಿದ್ದರು. ಈ ಸಂಬಂಧ ಜುಲೈ 23ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆ: ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಬಿ. ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತಂಡದಲ್ಲಿ ಉಪನಿರೀಕ್ಷಕ ಮಂಜುನಾಥ್ ಟಿ., ಎಎಸ್ಐ ಜಿನ್ನಪ್ಪ ಗೌಡ, ಹೆಡ್ ಕಾನ್ಸ್ಟೆಬಲ್ಗಳಾದ ರಾಜೇಶ್, ನಝೀರ್, ಲೋಕೇಶ್, ಪ್ರಶಾಂತ್ ಹಾಗೂ ಕಾನ್ಸ್ಟೆಬಲ್ಗಳಾದ ಮಾರುತಿ ಮತ್ತು ಹನುಮಂತ ಇದ್ದರು.
ತನಿಖಾ ತಂಡವು ಖಚಿತ ಮಾಹಿತಿ ಆಧರಿಸಿ ಜುಲೈ 28ರಂದು ಕಾರ್ಯಾಚರಣೆ ನಡೆಸಿ ಆರೋಪಿ ಸತೀಶ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಸ್ವತ್ತುಗಳು ವಶಕ್ಕೆ: ಬಂಧಿತನಿಂದ ₹74,000 ಮೌಲ್ಯದ 15 ಚೀಲ ಒಣ ಅಡಿಕೆ, ಕದ್ದ ಅಡಿಕೆಯನ್ನು ಮಾರಾಟ ಮಾಡಿ ಪಡೆದಿದ್ದ ₹70,000 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ₹80,000 ಮೌಲ್ಯದ ಆಪೆ ಗೂಡ್ಸ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ₹2,24,000 ಎಂದು ಅಂದಾಜಿಸಲಾಗಿದೆ.
ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ಇದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ7 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ6 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ6 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ7 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ7 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ6 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಸ್ಥಳೀಯ6 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















