ದಕ್ಷಿಣ ಕನ್ನಡ
Dharmasthala Defamation Case ಧರ್ಮಸ್ಥಳ ಮಾನಹಾನಿ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಕ್ಷೇತ್ರ ಮತ್ತು ಹರ್ಷೇಂದ್ರ ಕುಮಾರ್ ಅವರ ಕುರಿತು ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತೆರವುಗೊಳಿಸಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ‘ಕುಡ್ಲ ರ್ಯಾಂಪೇಜ್’ ಎಂಬ ಯೂಟ್ಯೂಬ್ ಚಾನೆಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಈ ಆದೇಶ ನೀಡಿದೆ.
ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ
ಇದೇ ವೇಳೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ (ಸಿಟಿ ಸಿವಿಲ್ ಕೋರ್ಟ್) ಹೈಕೋರ್ಟ್ ಸೂಚಿಸಿದೆ. ಅಲ್ಲದೆ, ವಿಚಾರಣಾಧೀನ ನ್ಯಾಯಾಲಯದಲ್ಲಿ ಎಲ್ಲಾ ವಾದಗಳನ್ನು ಮಂಡಿಸಲು ಅವಕಾಶ ಮುಕ್ತವಾಗಿರಿಸಲಾಗಿದೆ ಎಂದು ಪೀಠವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ, ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಹಲವು ಮಾಧ್ಯಮಗಳು ಹಾಗೂ ಯೂಟ್ಯೂಬ್ ಚಾನೆಲ್ಗಳು ಆಧಾರರಹಿತ ಆರೋಪಗಳನ್ನು ಪ್ರಸಾರ ಮಾಡುತ್ತಿವೆ ಎಂದು ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು.
“ಈ ಸುಳ್ಳು ಆರೋಪಗಳಿಂದಾಗಿ, 75,000 ಜನರಿಗೆ ಉದ್ಯೋಗ ಮತ್ತು 45,000 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಧರ್ಮಸ್ಥಳ ಸಂಸ್ಥೆಯ ಘನತೆಗೆ ಧಕ್ಕೆಯಾಗುತ್ತಿದೆ” ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದರು.
ಅರ್ಜಿ ಪುರಸ್ಕರಿಸಿದ್ದ ಸಿವಿಲ್ ನ್ಯಾಯಾಲಯ, ಜುಲೈ ತಿಂಗಳಲ್ಲಿ ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ಸುಮಾರು 8,000 ಆಕ್ಷೇಪಾರ್ಹ ಯೂಟ್ಯೂಬ್ ಲಿಂಕ್ಗಳನ್ನು ತೆಗೆದುಹಾಕುವಂತೆ ಸೂಚಿಸಿತ್ತು.
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಚಾನೆಲ್ಗಳು
ಸಿವಿಲ್ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಯೂಟ್ಯೂಬ್ ಚಾನೆಲ್ಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. ಆದರೆ, ಅರ್ಜಿಯ ನೇರ ವಿಚಾರಣೆಗೆ ನಿರಾಕರಿಸಿದ್ದ ಅಂದಿನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ, ‘ಮೊದಲು ಹೈಕೋರ್ಟ್ಗೆ ಹೋಗಿ, ನಂತರ ಇಲ್ಲಿಗೆ ಬನ್ನಿ. ನಮ್ಮ ಹೈಕೋರ್ಟ್ಗಳನ್ನು ನಾವೇ ನಿರುತ್ತೇಜನಗೊಳಿಸಲಾಗದು’ ಎಂದು ಹೇಳಿ, ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ಅದರಂತೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಅಪರಾಧ
Excise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.
ಕಾರ್ಯಕ್ರಮಗಳು
Puttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ.
ಪುತ್ತೂರು: ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ ಎಂದು ದ್ವಾರಕಾ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಿರ್ಮಾಣ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಅಧಿಕ ಪಯಣ ನಡೆಸಿರುವ ಸಂಸ್ಥೆಯು ಆರಂಭದಲ್ಲಿ ಪಡೀಲು ಬಾಳಪ್ಪ ಕಾಂಪ್ಲೆಕ್ಸ್, ಬೊಳುವಾರು, ಕಬಕ ಹಾಗೂ ಸರ್ಕಾರಿ ನೌಕರರ ಕಟ್ಟಡದಲ್ಲಿ ಕಚೇರಿ ಹೊಂದಿ ಕಾರ್ಯಾಚರಿಸುತ್ತಿತ್ತು. ಇದೀಗ ಸ್ವಂತ ಕಟ್ಟಡದಲ್ಲಿ ಸಂಸ್ಥೆಯ ಕಚೇರಿ ಆರಂಭವಾಗುತ್ತಿರುವುದು ಸಂತಸದ ವಿಚಾರ. ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ
ನೂತನ ವಾಣಿಜ್ಯ ಸೌಧದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶಿಕ್ಷಣ ಕರ್ಮಯೋಗಿ ಪದ್ಮಶ್ರೀ ಡಾ. ಹರೇಕಳ ಹಾಜಬ್ಬ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಮಾಸ್ಟರ್ ಪ್ಲಾನರಿ ಸಂಸ್ಥೆಯ ಎಸ್.ಕೆ. ಆನಂದ ಕುಮಾರ್, ಹಿರಿಯ ಉದ್ಯಮಿ ಮಂಜುನಾಥ್ ನಾಯಕ್, ಐಶ್ವರ್ಯ ಕನ್ಸ್ಟ್ರಕ್ಷನ್ನ ರಘುರಾಮ ಭಟ್ ಉಪ್ಪಂಗಳ, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೋ, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಗುರುಪ್ರಸಾದ್ ಎ.ಬಿ. ಹಾಗೂ ಹೋಟೆಲ್ ಅಶ್ವಿನಿ ಮಾಲಕ ಕರುಣಾಕರ ರೈ ದೇರ್ಲ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಗೋಪಾಲಕೃಷ್ಣ ಭಟ್ ವಿವರಿಸಿದರು.
‘ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್’ ಪ್ರಮುಖ ಆಕರ್ಷಣೆ
ನಾಲ್ಕು ಅಂತಸ್ತಿನ ಈ ವಾಣಿಜ್ಯ ಸೌಧದ ನೆಲಹಂತ ಹಾಗೂ ಮೊದಲ ಮಹಡಿಯಲ್ಲಿ ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್ ಕಾರ್ಯಾಚರಿಸಲಿದೆ. ಇಲ್ಲಿ ದ್ವಾರಕಾ ಹಾಲಿನ ಉತ್ಪನ್ನಗಳು, ತರಕಾರಿ, ದಿನಸಿ ಸಾಮಗ್ರಿಗಳು, ಹಣ್ಣು, ಚಾಟ್ಸ್, ಜ್ಯೂಸ್, ಕೂಲ್ಝೋನ್, ಬೇಕರಿ ತಿನಿಸುಗಳು, ಸ್ಟೇಶನರಿ ಸೇರಿದಂತೆ ಗ್ರಾಹಕರ ನಿತ್ಯ ಬಳಕೆಯ ನೂರಾರು ವಸ್ತುಗಳು ಮಿತದರದಲ್ಲಿ ಲಭ್ಯವಾಗಲಿವೆ.
ಎರಡನೇ ಮಹಡಿಯಲ್ಲಿ ಹಾರ್ಡ್ವೇರ್, ಸ್ಯಾನಿಟರಿ, ಟೈಲ್ಸ್, ಪೇಂಟ್ಸ್, ಯುನಿಸೆಕ್ಸ್ ಸಲೂನ್, ಡೆಂಟಲ್ ಕ್ಲಿನಿಕ್, ಸಾಫ್ಟ್ವೇರ್ ಸಂಸ್ಥೆ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿ ಹಾಗೂ ಟೆಕ್ಸ್ಟೈಲ್ಸ್ ಮಳಿಗೆಗಳು ಕಾರ್ಯನಿರ್ವಹಿಸಲಿವೆ.
ಮೂರನೇ ಮಹಡಿಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ಪ್ರಧಾನ ಕಚೇರಿ ಇರಲಿದ್ದು, ನಾಲ್ಕನೇ ಮಹಡಿಯಲ್ಲಿ ಸುಮಾರು 200 ಮಂದಿ ಆಸೀನರಾಗಬಹುದಾದ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ.
ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಕಟ್ಟಡ
ಗ್ರಾಹಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕಟ್ಟಡದ ಬೇಸ್ಮೆಂಟ್ನಲ್ಲಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 20 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಕಟ್ಟಡದಲ್ಲಿ ಲಿಫ್ಟ್ ವ್ಯವಸ್ಥೆ ಸೇರಿದಂತೆ ವಿವಿಧ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.
ಕ್ರೈಂ
Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.
ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.
ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
-
Uncategorized17 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ22 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ22 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ರಾಜಕೀಯ22 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ22 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಶಿಕ್ಷಣ22 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
















