ಬಿಗ್ ನ್ಯೂಸ್
Dharmasthala-ಧರ್ಮಸ್ಥಳ ಶವ ಪ್ರಕರಣ : ಗ್ರಾ.ಪಂ.ನಿಂದ ಯುಡಿಆರ್ ದಾಖಲೆ ಸಂಗ್ರಹಿಸಿದ ಎಸ್ಐಟಿ
ಹಲವಾರು ಮೃತದೇಹಗಳನ್ನು ಗುಪ್ತವಾಗಿ ಹೂತುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಂಜೆ ಎಸ್ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ, 1995 ರಿಂದ 2014ರವರೆಗಿನ ಯುಡಿಆರ್ (ಅಸಹಜ ಸಾವು) ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ, ಆ.1: ಹಲವಾರು ಮೃತದೇಹಗಳನ್ನು ಗುಪ್ತವಾಗಿ ಹೂತುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಂಜೆ ಎಸ್ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ, 1995 ರಿಂದ 2014ರವರೆಗಿನ ಯುಡಿಆರ್ (ಅಸಹಜ ಸಾವು) ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣದ ತನಿಖೆಯ ಭಾಗವಾಗಿ, ಆಗಸ್ಟ್ 1 ರಂದು ಬೆಳಗ್ಗೆ 11:30ಕ್ಕೆ ಎಸ್ಐಟಿ ತಂಡವು ದೂರುದಾರರೊಂದಿಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ತೆರಳಿತ್ತು.
ಅಲ್ಲಿ, ಪೌರಕಾರ್ಮಿಕರು ಮತ್ತು ಮಿನಿ ಜೆಸಿಬಿ ಬಳಸಿ 7 ಮತ್ತು 8 ಗುರುತಿನ ಜಾಗಗಳಲ್ಲಿ ಉತ್ಖನನ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯ
Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್ಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.
ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್ಗಳ ಪೈಕಿ ಆರು ಲೇನ್ಗಳನ್ನು (3+3) ಫಾಸ್ಟ್ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.
ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.
ಬಿ.ಸಿ. ರೋಡ್ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.
ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.
ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.
13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅಂತರ ರಾಜ್ಯ
Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.
ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.
ಏನೇನು ಪ್ರಸ್ತಾವಗಳಿವೆ?
- ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
- ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
- ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
- ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
- ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್ಗಳಲ್ಲಿ ಆರಂಭಿಸಲು ಸಲಹೆ.
- ಪೆಟ್ರೋಲ್ ಬಂಕ್ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
ಬಿಗ್ ನ್ಯೂಸ್
Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
-
ಸ್ಥಳೀಯ23 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ23 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ24 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ23 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು21 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್6 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಬಿಗ್ ನ್ಯೂಸ್23 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಅಂತರ ರಾಜ್ಯ24 hours agoRBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!















