ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಭವಿಷ್ಯಮುಖಿ ನಾಯಕತ್ವ’ ಕಾರ್ಯಾಗಾರ ಹಾಗೂ ನಿರ್ವಹಣಾ ಸಂಘಟನೆಯ ಉದ್ಘಾಟನೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವ್ಯವಹಾರ ನಿರ್ವಹಣಾ ವಿಭಾಗವು , “ಭವಿಷ್ಯಮುಖಿ ನಾಯಕತ್ವ” ಎಂಬ ವಿಷಯವೊಂದರಡಿ ವ್ಯವಹಾರ ನಿರ್ವಹಣಾ ಸಂಘಟನೆಯ ಉದ್ಘಾಟನೆಯು ಹಾಗೂ ಏಕದಿನ ಕಾರ್ಯಾಗಾರವೊಂದನ್ನು ಗುರುವಾರ ನಡೆಸಲಾಯಿತು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವ್ಯವಹಾರ ನಿರ್ವಹಣಾ ವಿಭಾಗವು , “ಭವಿಷ್ಯಮುಖಿ ನಾಯಕತ್ವ” ಎಂಬ ವಿಷಯವೊಂದರಡಿ ವ್ಯವಹಾರ ನಿರ್ವಹಣಾ ಸಂಘಟನೆಯ ಉದ್ಘಾಟನೆಯು ಹಾಗೂ ಏಕದಿನ ಕಾರ್ಯಾಗಾರವೊಂದನ್ನು ಗುರುವಾರ ನಡೆಸಲಾಯಿತು.

ಈ ಕಾರ್ಯಕ್ರಮದ ಉದ್ದೇಶವು ವಿದ್ಯಾರ್ಥಿಗಳಲ್ಲಿರುವ ನಾಯಕತ್ವ ಸಾಮರ್ಥ್ಯವನ್ನು ಬೆಳೆಸಿ, ಆಧುನಿಕ ಉದ್ಯೋಗ ಜಗತ್ತಿನಲ್ಲಿ ಮುನ್ನಡೆಸುವ ತಂತ್ರಜ್ಞಾನ ಹಾಗೂ ಜ್ಞಾನವನ್ನು ನೀಡಲು. ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿರುವ ಹಾಗೂ ಬಹರೆನ್‌ನ ಕಿಂಗ್‌ಡಮ್ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿಯೂ, ಎಂ.ಬಿ.ಎ. ಕಾರ್ಯಕ್ರಮದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅತಿಥಿ ಡಾ. ಹಬೀಬ್ ಯು. ಆರ್. ರಹ್ಮಾನ್ ಅವರು ದೀಪ ಬೆಳಗಿಸುವ ಮೂಲಕ ಹೊಸ ಶೈಕ್ಷಣಿಕ ಯಾತ್ರೆಯ ಪ್ರಾರಂಭವನ್ನು ಸೂಚಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ರೆವ್. ಡಾ. ಆಂಟಣಿ ಪ್ರಕಾಶ್ ಮೊಂಡೆೀರೊ ಅವರು ಅಧ್ಯಕ್ಷೀಯ ಭಾಷಣದಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ಒತ್ತಿಹೇಳಿದರು. ಈ ರೀತಿಯ ಸಂಘಟನೆಗಳು ಶೈಕ್ಷಣಿಕ ಉತ್ತೇಜನ, ಸಾಫ್ಟ್ ಸ್ಕಿಲ್ಸ್ ಅಭಿವೃದ್ಧಿ ಮತ್ತು ಸಹಕಾರಾತ್ಮಕ ಅಧ್ಯಯನವನ್ನು ಉತ್ತೇಜಿಸುತ್ತವೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಡಾ. ಹಬೀಬ್ ಯು. ಆರ್. ರಹ್ಮಾನ್ ಅವರ ಚಿಂತನಾತ್ಮಕ ಹಾಗೂ ಪ್ರೇರಣಾದಾಯಕ ಭಾಷಣವು ಯುವ ಮನಸ್ಸುಗಳನ್ನು ಸಾಂಪ್ರದಾಯಿಕ ಸಂಧರ್ಭಗಳ ಪಾರದರ್ಶಿತೆಯಲ್ಲಿ ನಾಯಕತ್ವವನ್ನು ಕಲ್ಪಿಸಿಕೊಳ್ಳಲು ಮತ್ತು ಜಾಗತಿಕ ದೃಷ್ಟಿಕೋನಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸಿತು.
ನಿರ್ವಹಣಾ ಸಂಘಟನೆಯ ಸಂಚಾಲಕಿ ಮಿಸ್ ಪುಷ್ಪಾ ಎನ್ ಹಾಗೂ ಸಂಘಟನೆಯ ಕಾರ್ಯದರ್ಶಿಯಾಗಿರುವ II BBA ವಿದ್ಯಾರ್ಥಿ ಮಿಸ್ಟರ್ ಲಿಖಿತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಉಪನ್ಯಾಸಕರಾದ ಪ್ರಶಾಂತ್ ರೈ, ಅಭಿಷೇಕ್ ಸುವರ್ಣ, ಸಿಂಚನಾ ಮತ್ತು ಶ್ರುತಿ ರೈ ಅವರ ಸಹಭಾಗಿತ್ವ ಮಹತ್ವಪೂರ್ಣವಾಗಿತ್ತು.

II ಬಿ ಬಿ ಎ ವಿದ್ಯಾರ್ಥಿನಿ ಪ್ರಿಯಾ ಆತಿಥ್ಯ ಭಾಷಣ ನೀಡಿದರು. III ಬಿ ಬಿ ಎ ವಿದ್ಯಾರ್ಥಿನಿ ಹಾಗೂ ನಿರ್ವಹಣಾ ಸಂಘಟನೆಯ ಅಧ್ಯಕ್ಷೆಯಾಗಿರುವ ದೇವಚಮ್ಮ ಧನ್ಯವಾದದ ಮಾತುಗಳನ್ನು ನಿರೂಪಿಸಿದರು. ಕಾರ್ಯಕ್ರಮವನ್ನು III ಬಿ ಬಿ ಎ ವಿದ್ಯಾರ್ಥಿ ರಕ್ಷಿತ್ ನಿರೂಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಬಿಗ್ ನ್ಯೂಸ್20 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು22 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ20 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು21 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ22 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ22 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ21 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ2 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















