Connect with us

ಬಿಗ್ ನ್ಯೂಸ್

Puttur BJP | ‘ಕಾರ್ಜಾಲಿ’ನಿಂದ ಮರೆಯಾಗುವುದೇ ಬಿಜೆಪಿಗೆ ಆವರಿಸಿದ ‘ಕಾರ್ಮೋಡ’..! ಕೊನೆಗೂ ಪುತ್ತಿಲ ಪರಿವಾರದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ – 2 ವರ್ಷದ ಮುನಿಸು ಅಂತ್ಯ..? ‘ಕೆಸರಿನ ಗೊಬ್ಬಿನ’ ಬಳಿಕ ನಿಲ್ಲುವುದೇ ‘ಕೆಸರೆರಾಚಾಟ’..?

Published

on

Ad Widget

Ad Widget

Ad Widget

Ad Widget

ಪುತ್ತೂರು: ಎರಡು ವರ್ಷಗಳಿಂದ (Puttur BJP) ಹೊಗೆಯಾಡುತ್ತಿದ್ದ ಅಸಮಾಧಾನ, ರಾಜ್ಯಮಟ್ಟದ ನಾಯಕರ ಸಂಧಾನದ ಹೊರತಾಗಿಯೂ ತಳಮಟ್ಟದಲ್ಲಿ ಜೀವಂತವಾಗಿದ್ದ ಮುಸುಕಿನ ಗುದ್ದಾಟಕ್ಕೆ ಪೂರ್ಣವಿರಾಮ ಹಾಕುವ ಪ್ರಯತ್ನವೇ? ಅಥವಾ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡ ರಾಜಕೀಯ ಅನಿವಾರ್ಯತೆಯೇ?
ಹಿಂದೂ ಸಂಘಟನೆಯ ನಾಯಕ ಅರುಣ್‌ ಕುಮಾರ್‌ ಪುತ್ತಿಲ ಅವರ ನೇತೃತ್ವದ ‘ಪುತ್ತಿಲ ಪರಿವಾರ’ ಭಾನುವಾರ ಆಯೋಜಿಸಿದ್ದ ‘ಕೆಸರುದ ಗೊಬ್ಬು’ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಮತ್ತು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್‌ ಕುಂಪಲ ಅವರ ಉಪಸ್ಥಿತಿ, ಪುತ್ತೂರಿನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಯೊಂದಕ್ಕೆ ನಾಂದಿ ಹಾಡಿದೆ.

Ad Widget

Ad Widget

Ad Widget

Ad Widget

ಕೇವಲ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಷ್ಟೇ ಇದರ ಮಹತ್ವವಲ್ಲ, ಬದಲಾಗಿ ಎರಡು ವರ್ಷಗಳ ಶೀತಲ ಸಮರಕ್ಕೆ ಅಂತ್ಯ ಹಾಡುವ ಸಂಕೇತವಾಗಿ ಈ ಬೆಳವಣಿಗೆಯನ್ನು ವಿಶ್ಲೇಷಿಸಲಾಗುತ್ತಿದೆ.

Ad Widget

Ad Widget alt="Ad Widget"/>

Ad Widget

ಭಾನುವಾರ (ಆ. 3) ಪುತ್ತೂರಿನ ಕಾರ್ಜಾಲು ಮೈದಾನದಲ್ಲಿ ಬಿಜೆಪಿ ಬಂಡಾಯ ಬಣದ ನಾಯಕ ಅರುಣ್ ಕುಮಾರ್ ಪುತ್ತಿಲ ನೇತ್ರತ್ವದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ‘ಕೆಸರುದ ಗೊಬ್ಬು’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಚ್ಚರಿ ಎಂಬಂತೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಹಾಗೂ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪುತ್ತೂರು ಬಿಜೆಪಿ ಗ್ರಾಮಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆ ಮಾರು ಭಾಗವಹಿಸಿದ್ದರು.

Ad Widget

Ad Widget <> Ad Widget

ಈ ಹಿಂದೆ ಪುತ್ತಿಲ ಪರಿವಾರ ಆಯೋಜಿಸಿದ್ದ 2 ಅದ್ದೂರಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿಯ ಜಿಲ್ಲಾ ಮಟ್ಟದ ನಾಯಕರುಗಳು ಹಾಗೂ ತಾಲೂಕಿನ ಮಂಡಲದ ಅಧ್ಯಕ್ಷರುಗಳು ಭಾಗವಹಿಸಿರಲಿಲ್ಲ. ಪುತ್ತಿಲ ಪರಿವಾರದಲ್ಲಿ ನೇರವಾಗಿ ಗುರುತಿಸಿಕೊಂಡಿದ್ದ ಬಿಜೆಪಿಯ ಪದಾಧಿಕಾರಿಗಳನ್ನು ಹೊರತು ಪಡಿಸಿ
ಬಿಜೆಪಿಯ ಬೆರಳೆಣಿಕೆಯ ನಾಯಕರುಗಳಷ್ಟೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೇ ಇವರ್ಯಾರು ಪ್ರಭಾವಿ ನಾಯಕರುಗಳಾಗಿರಲಿಲ್ಲ. ಹೀಗಾಗಿ ಭಾನುವಾರದ ಭಾಗವಹಿಸುವಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಹಿನ್ನೆಲೆ: ಬಂಡಾಯದ ಮತ್ತು ವಿಲೀನ : 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾದ ಅರುಣ್‌ ಪುತ್ತಿಲ, ಪಕ್ಷೇತರರಾಗಿ ಕಣಕ್ಕಿಳಿದು ಬಿಜೆಪಿಯ ಅಧಿಕೃತ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ, ಕಾಂಗ್ರೆಸ್‌ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು ಈಗ ಇತಿಹಾಸ. ಆ ಸೋಲಿನ ಗಾಯ ಮಾಸುವ ಮುನ್ನವೇ ‘ಪುತ್ತಿಲ ಪರಿವಾರ’ ಎಂಬ ಸಂಘಟನೆಯ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮುಂದುವರಿಸಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಗೆ ಸವಾಲೊಡ್ಡಿದ್ದರು. ನಾಲ್ಕು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂದರಲ್ಲಿ ಗೆದ್ದು, ಮೂರರಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು

Ad Widget

Ad Widget

ಲೋಕಸಭಾ ಚುನಾವಣೆ ಹೊತ್ತಿಗೆ (2024ರ ಮಾರ್ಚ್ ನಲ್ಲಿ,) ಪಕ್ಷದ ಹಾನಿಯನ್ನು ತಡೆಯುವ ಉದ್ದೇಶದಿಂದ ಅಂದಿನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಸಂಧಾನದ ಫಲವಾಗಿ ಪುತ್ತಿಲ ಪರಿವಾರವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಲಾಯಿತು. ಆದರೆ, ಈ ವಿಲೀನ ಕೇವಲ ರಾಜ್ಯಮಟ್ಟದ ನಾಯಕರ ಸಮ್ಮುಖದಲ್ಲಿ ನಡೆದ ಒಂದು ರಾಜಕೀಯ ಪ್ರಕ್ರಿಯೆಯಾಗಿತ್ತೇ ವಿನಃ, ಪುತ್ತೂರಿನ ನೆಲದಲ್ಲಿ ಕಾರ್ಯಕರ್ತರ ಮನಸ್ಸುಗಳು ಒಂದಾಗಿರಲಿಲ್ಲ. ಪಕ್ಷದ ಕಚೇರಿಗೆ ಬರುವ ವಿಚಾರದಲ್ಲೂ ಗದ್ದಲ ಉಂಟಾಗಿತ್ತು

ಇದರ ಮುಂದುವರಿದ ಭಾಗವಾಗಿ ಪುತ್ತಿಲ ಪರಿವಾರ ಆಯೋಜಿಸಿದ್ದ ಬೃಹತ್‌ ‘ಶ್ರೀನಿವಾಸ ಕಲ್ಯಾಣೋತ್ಸವ’ದಂತಹ ಧಾರ್ಮಿಕ ಕಾರ್ಯಕ್ರಮಗಳಿಗೂ ಸ್ಥಳೀಯ ಬಿಜೆಪಿ ನಾಯಕರು ಗೈರುಹಾಜರಾಗಿದ್ದು, ಈ ಮುನಿಸು ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿತ್ತು. ಅಲ್ಲದೇ ಅರುಣ್ ಪುತ್ತಿಲ ಹಾಗೂ ಅವರ ಬೆಂಬಲಿಗರು ಕೊಡ ಕೆಲ ಬಿಜೆಪಿ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡಿದ್ದರು

ಚೌಟ, ಕುಂಪಲ ನಡೆ ಹಿಂದಿನ ಲೆಕ್ಕಾಚಾರ
ಈಗ ದಿಢೀರನೆ ಸಂಸದರು ಮತ್ತು ಜಿಲ್ಲಾಧ್ಯಕ್ಷರೇ ಪುತ್ತಿಲರ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರ ಹಿಂದೆ ಸ್ಪಷ್ಟವಾದ ರಾಜಕೀಯ ಲೆಕ್ಕಾಚಾರಗಳಿವೆ ಎಂಬ ವಿಶ್ಲೇಷಣೆ ರಾಜಕೀಯ ಪಡಸಾಲೆಯಲ್ಲಿ ಕಂಡು ಬರುತ್ತಿದೆ. ಅದನ್ನು ಇಲ್ಲಿ ನೀಡಲಾಗಿದೆ

  • ಭವಿಷ್ಯದ ಸವಾಲು:.ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು. ಈ ಚುನಾವಣೆಗಳಲ್ಲಿ ಗೆಲ್ಲಬೇಕಾದರೆ, ಪಕ್ಷದ ತಳಮಟ್ಟದ ಸಂಘಟನೆ ಬಲಿಷ್ಠವಾಗಿರಬೇಕು. ಪುತ್ತೂರಿನಂತಹ ಬಿಜೆಪಿಯ ಭದ್ರಕೋಟೆಯಲ್ಲಿ ಪುತ್ತಿಲ ಬಣವನ್ನು ಹೊರಗಿಟ್ಟುಕೊಂಡು ಚುನಾವಣೆ ಎದುರಿಸುವುದು ಆತ್ಮಹತ್ಯಾಕಾರಿ ನಡೆ ಎಂಬುದು ಹೊಸ ನಾಯಕತ್ವಕ್ಕೆ ಅರಿವಾಗಿದೆ. ಅರುಣ್ ಪುತ್ತಿಲ ಹೊಂದಿರುವ ಸಂಘಟಿತ ಯುವ ಕಾರ್ಯಕರ್ತರ ಪಡೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಗೆಲುವಿನ ದಡ ಸೇರುವುದು ಕಷ್ಟಸಾಧ್ಯ.
  • ಪುತ್ತಿಲರ ನಿರ್ಲಕ್ಷಿಸಲಾಗದ ಶಕ್ತಿ: ರಾಜಕೀಯವಾಗಿ ಕಡೆಗಣಿಸಿದರೂ, ತಮ್ಮ ಸಂಘಟನಾ ಚಾತುರ್ಯ ಮತ್ತು ಜನಬೆಂಬಲವನ್ನು ನಿರಂತರವಾಗಿ ಸಾಬೀತುಪಡಿಸುತ್ತಲೇ ಬಂದಿರುವ ಅರುಣ್ ಪುತ್ತಿಲ ಅವರನ್ನು ಇನ್ನಷ್ಟು ದೂರ ಇಡುವುದು ಪಕ್ಷಕ್ಕೆ ಹಾನಿಕರ. ಅವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಗಳು ಪಕ್ಷದ ಕಾರ್ಯಕ್ರಮಗಳಿಗಿಂತ ಹೆಚ್ಚು ಜನರನ್ನು ಸೆಳೆಯುತ್ತಿರುವುದು ವರಿಷ್ಠರ ಗಮನಕ್ಕೂ ಬಂದಿದೆ. ಈ ಶಕ್ತಿಯನ್ನು ಪಕ್ಷದೊಳಗೆಯೇ ಸದ್ಬಳಕೆ ಮಾಡಿಕೊಳ್ಳುವುದು ಜಾಣತನದ ನಡೆಯಾಗಿದೆ.
  • ಹೊಸ ನಾಯಕತ್ವದ ಕಾರ್ಯಶೈಲಿ: ನೂತನ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ, ತಮ್ಮ ಹಿಂದಿನವರಿಗಿಂತ ಭಿನ್ನವಾದ, ಎಲ್ಲರನ್ನೂ ಒಳಗೊಳ್ಳುವ ನಾಯಕತ್ವವನ್ನು ಪ್ರದರ್ಶಿಸುವ ಪ್ರಯತ್ನದಲ್ಲಿದ್ದಾರೆ. ವೈಯಕ್ತಿಕ ಪ್ರತಿಷ್ಠೆಗಿಂತ ಪಕ್ಷದ ಹಿತಾಸಕ್ತಿಯೇ ಮುಖ್ಯ ಎಂಬ ಸಂದೇಶವನ್ನು ರವಾನಿಸಲು, ತಾವೇ ಖುದ್ದು ಬಂಡಾಯ ನಾಯಕನ ಕಾರ್ಯಕ್ರಮಕ್ಕೆ ಹಾಜರಾಗುವ ಮೂಲಕ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಇದು ಪಕ್ಷದೊಳಗಿನ ಭಿನ್ನಮತ ಶಮನಗೊಳಿಸಿ, ತಮ್ಮ ನಾಯಕತ್ವವನ್ನು ಗಟ್ಟಿಗೊಳಿಸುವ ಒಂದು ತಂತ್ರವೂ ಹೌದು.

ಪುತ್ತಿಲ ಪರಿವಾರದಿಂದ ಅಂತರ ಕಾಯ್ದುಕೊಂಡಿದ್ದ ಭಾಸ್ಕರ ಆಚಾರ್ ಹಿಂದಾರು ಹಾಗೂ ಕೆಲ ಹಿರಿಯ ನಾಯಕರು ಈ ವೇದಿಕೆಯಲ್ಲಿ ಗುರುತಿಸಿಕೊಂಡಿದ್ದು ಹಾಗೂ ಡಿವಿ ಸದಾನಂದ ಗೌಡರು ಪ್ರಥಮ ಶಾಸಕರಾಗುವ ಸಂದರ್ಭ ಪುತ್ತೂರಿನ ರಾಜಕೀಯ ಚಾಣಕ್ಯ ಎಂದೇ ಬಿಂಬಿಸಲಾಗಿದ್ದ ಸಂಜೀವ ನಾಯಕ್ ಕಲ್ಲೇಗ ಈ ವೇದಿಕೆಯಲ್ಲಿ ಒಟ್ಟಾಗಿದ್ದು ಕೂಡ ಬಿಜೆಪಿಯ ಮುಂದಿನ ಒಗ್ಗಟ್ಟು ಪ್ರದರ್ಶನದ ಭಾಗವಾಗಿರಲಿದೆಯ ಎನ್ನುವ ಚರ್ಚೆ ಪ್ರಾರಂಭವಾಗಿದೆ.

‘ಕೆಸರುದ ಗೊಬ್ಬು’ ಕಾರ್ಯಕ್ರಮದ ವೇದಿಕೆ ಹಂಚಿಕೊಂಡಿದ್ದು ಕೇವಲ ಮೊದಲ ಹೆಜ್ಜೆ. ಈ ಮೈತ್ರಿ ನಿಜವಾಗಿಯೂ ಫಲಪ್ರದವಾಗಬೇಕಾದರೆ ಮುಂದಿನ ದಿನಗಳಲ್ಲಿ ಎಲ್ಲ ವೇದಿಕಗಳಲ್ಲಿ ಸಂಘಟಿತ ಕಾಣಿಸಿಕೊಳ್ಳುವ ಆನಿವಾರ್ಯತೆ ಪಕ್ಷಕ್ಕಿದೆ.

ಅಲ್ಲದೇ, ಮುಂದಿನ ಚುನಾವಣೆಗಳಲ್ಲಿ ಜಿಲ್ಲಾ ಬಿಜೆಪಿ ಹೈಕಮಾಂಡ್ ಪುತ್ತಿಲ ಪರಿವಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯ. ಈ ತೋರಿಕೆಯ ವಿಲೀನವು ನೈಜವಾಗಿ ಕಾರ್ಯರೂಪಕ್ಕೆ ಬಂದರೆ, ಪುತ್ತೂರಿನಲ್ಲಿ ತನ್ನ ಕಳೆದುಹೋದ ವೈಭವವನ್ನು ಬಿಜೆಪಿ ಮರಳಿ ಪಡೆಯುವ ಸಾಧ್ಯತೆ ಇದೆ.

ಒಟ್ಟಿನಲ್ಲಿ, ಪುತ್ತೂರಿನ ಕಾರ್ಜಾಲು ಮೈದಾನದಲ್ಲಿ ನಡೆದದ್ದು ಕೇವಲ ‘ಕೆಸರಿನ ಆಟ’ವಲ್ಲ, ಬದಲಾಗಿ ಎರಡು ವರ್ಷಗಳ ರಾಜಕೀಯ ಕೆಸರೆರಚಾಟಕ್ಕೆ ಅಂತ್ಯ ಹಾಡುವ ಒಂದು ಮಹತ್ವದ ರಾಜಕೀಯ ನಡೆ. ಈ ನಡೆ ಮುಂಬರುವ ದಿನಗಳಲ್ಲಿ ಪುತ್ತೂರಿನ ರಾಜಕೀಯ ಚಿತ್ರಣವನ್ನು ಹೇಗೆ ಬದಲಾಯಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!